ಬಿಗ್​ಬಾಸ್ ಬಿಹಾರ ರಿಸಲ್ಟ್​ ಫೋಟೋ ಗ್ಯಾಲರಿ ಫ್ಯಾಷನ್​ ವಿಶ್ವವಾಣಿ ಪ್ರಾಪರ್ಟಿ ವಿದೇಶ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Yadgir News: ಸುರಪುರದಲ್ಲಿ ಬಸ್ ಹರಿದು 2 ವರ್ಷದ ಮಗು ಸಾವು

Girl Dies in surapur: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಘಟನೆ ನಡೆದಿದೆ. ಬಸ್‌ ನಿಲ್ದಾಣದ ಪಕ್ಕದಲ್ಲೇ ಮನೆಯಿದ್ದ ಹಿನ್ನೆಲೆಯಲ್ಲಿ ಮಗುವನ್ನು ಅಜ್ಜಿ ಆಟವಾಡಿಸುತ್ತಾ ಕುಳಿತಿದ್ದರು. ಈ ವೇಳೆ ಬಸ್‌ ಹರಿದು ದುರಂತ ಸಂಭವಿಸಿದೆ.

ಸುರಪುರದಲ್ಲಿ ಬಸ್ ಹರಿದು 2 ವರ್ಷದ ಮಗು ಸಾವು

ಬಸ್‌ (ಸಾಂದರ್ಭಿಕ ಚಿತ್ರ) -

Prabhakara R
Prabhakara R Nov 15, 2025 6:39 PM

ಯಾದಗಿರಿ, ನ.15: ಕೆಕೆಆರ್‌ಟಿಸಿ ಬಸ್ ಹರಿದು 2 ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಾದಗಿರಿ (Yadgir News) ಜಿಲ್ಲೆಯ ಸುರಪುರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ನಡೆದಿದೆ. ಮೃತ ಮಗುವನ್ನು ಪರಸಪ್ಪ ಅವರ ಪುತ್ರಿ ಲಕ್ಷ್ಮಿ ಎಂದು ಗುರುತಿಸಲಾಗಿದೆ. ಕೂಡಲಗಿ ಗ್ರಾಮದಿಂದ ಸುರಪುರಕ್ಕೆ ಹೊರಟಿದ್ದ KA 33 F 0346 ಸಂಖ್ಯೆಯ ಬಸ್‌ನ ಚಕ್ರ ಮಗುವಿನ ಮೇಲೆ ಹರಿದಿದ್ದು, ದೇಹ ಛಿದ್ರ ಛಿದ್ರಗೊಂಡಿದೆ. ಈ ಸಂಬಂಧ ಕೆಂಭಾವಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್‌ ನಿಲ್ದಾಣದ ಪಕ್ಕದಲ್ಲೇ ಮನೆಯಿದ್ದ ಹಿನ್ನೆಲೆಯಲ್ಲಿ ರಸ್ತೆ ಬದಿ ಮಗುವನ್ನು ಅಜ್ಜಿ ಆಟವಾಡಿಸುತ್ತಾ ಕುಳಿತಿದ್ದರು. ಈ ವೇಳೆ ಬಸ್‌ ಹರಿದು ದುರಂತ ನಡೆದಿದೆ. ಸ್ಥಳದಲ್ಲಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

ಹಲ್ಲೆಗೊಳಗಾಗಿದ್ದ ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ಸಾವು

Yadgir News (6)

ಯಾದಗಿರಿ: ಕಳೆದ ಬುಧವಾರ ಹಾಡಹಗಲೇ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿದ್ದ ಶಹಬಾದ್‌ ನಗರಸಭೆ ಮಾಜಿ ಅಧ್ಯಕ್ಷೆ, ಪ್ರಸ್ತುತ ಸಮಾಜಕಲ್ಯಾಣ ಇಲಾಖೆಯಲ್ಲಿ ಎಸ್‌ಡಿಎ ಆಗಿದ್ದ ಅಂಜಲಿ ಕಂಬಾನೂರ (35) ಚಿಕಿತ್ಸೆ ಫಲಿಸದೇ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಸಾವನ್ನಪ್ಪಿದ್ದಾರೆ.

ಯಾದಗಿರಿ ನಗರದ (Yadgir News) ಗ್ರೀನ್ ಸಿಟಿ ಬಡಾವಣೆಯಲ್ಲಿರುವ ಸಮಾಜ ಕಲ್ಯಾಣ ಕಚೇರಿಗೆ ಕಾರಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಚಿತ್ತಾಪುರ ರಸ್ತೆಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ದುಷ್ಕರ್ಮಿಗಳ ತಂಡವೊಂದು ಏಕಾಏಕಿ ದಾಳಿ ನಡೆಸಿತ್ತು.

ಗಾಯಾಳು ಅಂಜಲಿ ಅವರನ್ನು ಯಿಮ್ಸ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿಂದ ಮತ್ತೆ ಹೈದರಾಬಾದ್ ಆಸ್ಪತ್ರೆಗೆ ದಾಖಲಿಸಿಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಬಂಟ್ವಾಳದಲ್ಲಿ ಭೀಕರ ಕಾರು ಅಪಘಾತ; ಮೂವರ ಸಾವು

bc road car accident

ಮಂಗಳೂರು, ನ.15: ದಕ್ಷಿಣ ಕನ್ನಡ (Dakshina kannada) ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡಿನ (BC Road) ಸರ್ಕಲ್‌ನಲ್ಲಿ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು, ಉಡುಪಿ ಶ್ರೀಕೃಷ್ಣ ಮಠಕ್ಕೆ ದೇವರ ದರ್ಶನಕ್ಕಾಗಿ ಆಗಮಿಸುತ್ತಿದ್ದರು ಎಂದು ತಿಳಿದುಬಂದಿದೆ.

ಬಿಸಿ ರೋಡಿನ ಸರ್ಕಲ್‌ನಲ್ಲಿ ಇನ್ನೋವಾ ಕಾರು ಬಂದು ಎನ್.ಜಿ ಸರ್ಕಲ್‌ಗೆ ಗುದ್ದಿದ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಕಾರಿನಲ್ಲಿದ್ದ ರಮ್ಯ (23), ರವಿ ‌(64), ನಂಜಮ್ಮ (75) ಮೃತ ದುರ್ದೈವಿಗಳು. ಮೃತರು ಬೆಂಗಳೂರಿನ ಪೀಣ್ಯದವರಾಗಿದ್ದು, ಉಡುಪಿ ಶ್ರೀಕೃಷ್ಣ ಮಠಕ್ಕೆ ಕೃಷ್ಣನ ದರ್ಶನಕ್ಕೆಂದು ಹೊರಟಿದ್ದರು. ಕಾರಿನಲ್ಲಿ ಇದ್ದ ಪ್ರಯಾಣಿಕರಲ್ಲಿ ರವಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಈ ಸುದ್ದಿಯನ್ನೂ ಓದಿ | Road Accident: ಪುಣೆ -ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ; ಟ್ರಕ್‌ಗಳ ನಡುವೆ ಕಾರ್‌ ಸಿಲುಕಿ 8 ಮಂದಿ ಸಾವು

ಘಟನೆಯಲ್ಲಿ ಕೀರ್ತಿ, ಸುಶೀಲಾ, ಬಿಂದು ಹಾಗೂ ಪ್ರಶಾಂತ್ ಎಂಬ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಸಿ ರೋಡು – ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ನಿರ್ಮಾಣವಾದ ನೂತನ‌ ಸರ್ಕಲ್ ಅವೈಜ್ಞಾನಿಕವಾಗಿರುವುದರಿಂದಲೇ ಈ ಅಪಘಾತ ಸಂಭವಿಸಿದೆ ಎಂಬ ಆರೋಪ ಕೇಳಿ ಬಂದಿದೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.