Drowned: ನೀರು ಕುಡಿಯಲು ಹೋಗಿದ್ದ ಮೂವರು ಬಾಲಕರು ಕೆರೆಗೆ ಬಿದ್ದು ಸಾವು
Yadagiri News: ನೀರು ಕುಡಿಯಲು ಹೋಗಿದ್ದ ಮೂವರು ಬಾಲಕರು ನೀರಿನ ಹೊಂಡಕ್ಕೆ ಬಿದ್ದು ದುರ್ಮರಣ ಹೊಂದಿದ ಧಾರುಣ ಘಟನೆ ಜಿಲ್ಲೆಯಲ್ಲಿ ಭಾನುವಾರ (ಮೇ 4) ನಡೆದಿದೆ. ಮೃತರನ್ನು ಅಚ್ಚೊಲಾ ತಾಂಡಾದ ನಿವಾಸಿಗಳಾದ ಅಮರ್ (12) ಜಯ ರಾಠೋಡ (14) ಕೃಷ್ಣ ರಾಠೋಡ್(10) ಎಂದು ಗುರುತಿಸಲಾಗಿದೆ.

ಸಾಂದರ್ಭಿಕ ಚಿತ್ರ.

ಯಾದಗಿರಿ: ನೀರು ಕುಡಿಯಲು ಹೋಗಿದ್ದ ಮೂವರು ಬಾಲಕರು ನೀರಿನ ಹೊಂಡಕ್ಕೆ ಬಿದ್ದು ದುರ್ಮರಣ ಹೊಂದಿದ (Drowned) ಧಾರುಣ ಘಟನೆ ಜಿಲ್ಲೆಯಲ್ಲಿ ಭಾನುವಾರ (ಮೇ 4) ನಡೆದಿದೆ (Yadagiri News). ಯಾದಗಿರಿ ತಾಲೂಕಿನ ಅಚೋಲಾದಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಅಚ್ಚೊಲಾ ತಾಂಡಾದ ನಿವಾಸಿಗಳಾದ ಅಮರ್ (12) ಜಯ ರಾಠೋಡ (14) ಕೃಷ್ಣ ರಾಠೋಡ್(10) ಎಂದು ಗುರುತಿಸಲಾಗಿದೆ. ಕುರಿ ಕಾಯಲು ಹೋಗಿದ್ದ ಬಾಲಕರು ನೀರು ಕುಡಿಯಲೆಂದು ತೆರಳಿದ್ದ ವೇಳೆ ಈ ಅನಾಹುತ ಸಂಭವಿಸಿದೆ.
ಬೇಸಗೆ ಹಿನ್ನೆಲೆಯಲ್ಲಿ ಬಾಲಕರು ದಾಹ ತಣಿಸಿಕೊಳ್ಳಲು ನೀರು ಕುಡಿಯಲು ಹೋಗಿದ್ದರು ಎಂದು ಮೂಲಗಳು ತಿಳಿಸಿವೆ. ನೀರಿನ ಹೊಂಡಕ್ಕೆ ನೀರು ಕುಡಿಯಲು ಹೋಗಿದ್ದ ಬಾಲಕರು ಕಾಲು ಜಾರಿ ಬಿದ್ದಿರುವ ಸಾಧ್ಯತೆ ಇದೆ. ಮೃತ ಬಾಲಕರ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ. ಯಾದಗಿರಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಈ ಸುದ್ದಿಯನ್ನೂ ಓದಿ: Drowned: ತುಂಗಭದ್ರಾ ನದಿಯಲ್ಲಿ ಮುಳುಗಿ ಬೆಂಗಳೂರಿನ ಯುವಕರಿಬ್ಬರ ಸಾವು
ಚಿಕ್ಕೋಡಿಯಲ್ಲಿ ಈಜಲು ಹೋದ ಮೂವರು ಬಾಲಕರು ಸಾವು
ಚಿಕ್ಕೋಡಿ: ಈಜಲು ಹೋದ ಮೂವರು ಬಾಲಕರು ಕೃಷಿಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಮೇ 3ರಂದು ಚಿಕ್ಕೋಡಿಯಲ್ಲಿ ನಡೆದಿತ್ತು. ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದ ಕೃಷಿ ಹೊಂಡಕ್ಕೆ ಈಜಲೆಂದು ಇಳಿದ ಇಂಗಳಿ ಗ್ರಾಮದ ಪ್ರಥಮೇಶ ಕೆರಬಾ (13), ಅಥರ್ವ ಸೌಂದಲಗೆ (15), ಸಮರ್ಥ ಚೌಗಲೆ (13) ಮೃತಪಟ್ಟಿದ್ದರು. ಸ್ನೇಹಿತರಾಗಿದ್ದ ಇವರು ರಜೆಯ ಹಿನ್ನೆಲೆಯಲ್ಲಿ ಈಜಲು ಜತೆಗೆ ತೆರಳಿದ್ದರು.
ಬಾಲಕರು ಮನೆಗೆ ಬಾರದಿದ್ದಾಗ ಪೋಷಕರು ಹುಡುಕಾಟ ಆರಂಭಿಸಿದ್ದರು. ಈ ವೇಳೆ ಘಟನೆ ಬೆಳಕಿಗೆ ಬಂದಿತ್ತು. ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಮಾಹಿತಿ ಪೊಲೀಸರಿಗೆ ಸ್ಥಳೀಯರಿಂದ ಲಭಿಸಿತ್ತು. ಸ್ಥಳಕ್ಕೆ ಚಿಕ್ಕೋಡಿ ತಹಶೀಲ್ದಾರ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಕೃಷಿ ಹೊಂಡಗಳು ಆಳವಾಗಿದ್ದು, ವಸತಿ ಪ್ರದೇಶಗಳಿಂದ ದೂರದಲ್ಲಿರುತ್ತವೆ. ಅನೇಕ ಕೃಷಿ ಹೊಂಡಗಳಲ್ಲಿ ಕೆಸರು ಕೂಡ ತೆಗೆಯಲಾಗುತ್ತಿಲ್ಲ. ಈಜು ಸರಿಯಾಗಿ ಬಾರದೆ ಹೊಂಡಕ್ಕೆ ಧುಮುಕುವುದರಿಂದಲೂ ಅನೇಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಅದಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಮಕ್ಕಳ ಚಲನವಲನಗಳ ಬಗ್ಗೆ ಗಮನ ಹರಿಸಲು ಎಚ್ಚರಿಕೆ ನೀಡಿದ್ದಾರೆ.