ಸುರಪುರದಲ್ಲಿ ಪ್ರಿಯಕರನ ಜತೆ ಸೇರಿ ಗಂಡನ ಕೊಲೆಗೈದ ಪತ್ನಿ; ಇಬ್ಬರು ಆರೋಪಿಗಳ ಬಂಧನ
Surapura News: ಸುರಪುರ ತಾಲೂಕಿನ ಹಾಲಬಾವಿ ಗ್ರಾಮದ ಗವಿಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೃತನ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಮೃತನ ಅಣ್ಣ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡ ಸುರಪುರ ಠಾಣೆ ಪೊಲೀಸರು, ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೊಲೆಯಾದ ಗವಿಸ್ವಾಮಿ -
ಸುರಪುರ: ತಾಲೂಕಿನ ಮಾಚಗುಂಡಾಳ ಗ್ರಾಮದಲ್ಲಿ ನಡೆದ ಹಾಲಬಾವಿ ಗ್ರಾಮದ ಗವಿಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೃತನ ಪತ್ನಿ ನೀಲಮ್ಮ ಹಾಗೂ ಆಕೆಯ ಪ್ರಿಯಕರನಾದ ಮೌನೇಶ ರುಕ್ಮಾಪುರನನ್ನು ಸುರಪುರ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಜನವರಿ 29ರ ರಾತ್ರಿ ಗವಿಸ್ವಾಮಿ ತನ್ನ ಪತ್ನಿ ನೀಲಮ್ಮನ ತವರು ಗ್ರಾಮವಾದ ಮಾಚಗುಂಡಾಳಕ್ಕೆ ಬಂದು, ಮನೆಯ ಮೇಲ್ಚಾವಣಿಯಲ್ಲಿ ಮಲಗಿದ್ದ. ಬೆಳಗ್ಗೆ ಎದ್ದು ನೋಡಿದಾಗ ಅವನನ್ನು ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಕಂಡು, ಸುರಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಫೆಬ್ರವರಿ 7ರಂದು ಗವಿಸ್ವಾಮಿ ಮೃತಪಟ್ಟಿದ್ದ.
ಈ ಕುರಿತು ಮೃತನ ಅಣ್ಣ ಬಸಯ್ಯಸ್ವಾಮಿ ಸುರಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬದುಕಿದ್ದಾಗ ಗವಿಸ್ವಾಮಿ ಪತ್ನಿ ನೀಲಮ್ಮ, ಮಾಚಗುಂಡಾಳ ಗ್ರಾಮದ ಮೌನೇಶ ರುಕ್ಮಾಪುರ ಎಂಬ ಯುವಕನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ತನಗೆ ಹಾಗೂ ತಾಯಿಗೂ ತಿಳಿಸಿದ್ದನು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇದೇ ವಿಚಾರವಾಗಿ ಪತ್ನಿಯೊಂದಿಗೆ ಅನೇಕ ಬಾರಿ ಜಗಳ ನಡೆದಿದ್ದು, ಜನವರಿ 29ರ ರಾತ್ರಿ ನಡೆದ ಗಲಾಟೆ ದ್ವೇಷದ ಹಿನ್ನೆಲೆಯಲ್ಲಿ ನೀಲಮ್ಮ ತನ್ನ ಪ್ರಿಯಕರ ಮೌನೇಶನ ಮೂಲಕ ಗವಿಸ್ವಾಮಿಯನ್ನು ಕೊಲೆ ಮಾಡಿಸಿದ್ದಾಳೆ ಎಂದು ಆರೋಪಿಸಲಾಗಿದೆ.
ಬಿಕ್ಲು ಶಿವ ಕೊಲೆ ಕೇಸ್; ಶಾಸಕ ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ
ಮೃತನ ಅಣ್ಣ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡ ಸುರಪುರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಉಮೇಶ ಎಂ ಅವರ ನೇತೃತ್ವದ ತಂಡ ತನಿಖೆ ನಡೆಸಿ, ಆರೋಪಿಗಳಾದ ನೀಲಮ್ಮ ಹಾಗೂ ಮೌನೇಶನನ್ನು ಬಂಧಿಸಿದೆ. ಈ ಕುರಿತು ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲೆಯಾಗಿದೆ.
ಕಿರಾಣಿ ಅಂಗಡಿಗೆ ಬೆಂಕಿ ಹಚ್ಚಿದ ಪ್ರಕರಣ: 11 ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ
ಯಾದಗಿರಿ: ತಾಲೂಕಿನ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ನೀಲಹಳ್ಳಿ ಗ್ರಾಮದಲ್ಲಿ 2014ರಲ್ಲಿ ಹೋಟೆಲ್ ಹಾಗೂ ಕಿರಾಣಿ ಅಂಗಡಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಲಾಗಿದೆ. ಪ್ರಕರಣದ 11 ಆರೋಪಿಗಳಿಗೆ ತಲಾ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ ಒಟ್ಟು 77 ಸಾವಿರ ರು.ದಂಡ ವಿಧಿಸಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ದೇವಸ್ಥಾನಕ್ಕೆ ಸೇರಿದೆ ಎನ್ನಲಾದ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹೋಟೆಲ್ ಹಾಗೂ ಕಿರಾಣಿ ಅಂಗಡಿಗೆ 2014ರ ಮಾರ್ಚ್ 18ರಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಮಾರು 1.20 ಲಕ್ಷ ರೂ. ಮೌಲ್ಯದ ಆಸ್ತಿಯನ್ನು ನಾಶಪಡಿಸಲಾಗಿತ್ತು.
ಈ ಪ್ರಕರಣದಲ್ಲಿ ನೀಲಹಳ್ಳಿ ಗ್ರಾಮದ ನಿವಾಸಿಗಳಾದ ಶಂಕ್ರೆಪ್ಪಗೌಡ, ಶಾಂತುರೆಡ್ಡಿ ಪೊಲೀಸ್ ಪಾಟೀಲ್, ಬಸನಗೌಡ ಗಿರಿಯಪ್ಪನೋರು, ಚೆನ್ನರೆಡ್ಡಿ, ರೆಡ್ಡಪ್ಪ, ಬನ್ನಪ್ಪ ಹನುಮಂತ, ಹುಸೇನಪ್ಪ, ಮಲ್ಲಪ್ಪ ಮಾರಾಯ ಹಾಗೂ ಭೀಮಣ್ಣ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಸರಕಾರದ ಪರವಾಗಿ ಪ್ರಧಾನ ಸರಕಾರಿ ಅಭಿಯೋಜಕ ಗುರುಲಿಂಗಪ್ಪ ಶ್ರೀಮಂತ ತೇಲಿ ವಾದ ಮಂಡಿಸಿದ್ದರು.