ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Yadgir News: ಯಾದಗಿರಿ ನೂತನ ಜಿಲ್ಲಾಧಿಕಾರಿಯಾಗಿ ಭೋಯರ್‌ ಹರ್ಷಲ್ ನೇಮಕ

Yadgir News: ಯಾದಗಿರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಭೋಯರ್‌ ಹರ್ಷಲ್ ನಾರಾಯಣರಾವ್ ಅವರನ್ನು ರಾಜ್ಯ ಸರ್ಕಾರ ನಿಯೋಜನೆ ಮಾಡಿದೆ. ಪ್ರಸ್ತುತ ಯಾದಗಿರಿ ಜಿಲ್ಲಾಧಿಕಾರಿಯಾಗಿದ್ದ ಡಾ.ಸುಶೀಲಾ ಬಿ. ಅವರನ್ನು ಕೆಕೆಆರ್‌ಟಿಸಿ ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಲಾಗಿದೆ.

ಯಾದಗಿರಿ ನೂತನ ಜಿಲ್ಲಾಧಿಕಾರಿಯಾಗಿ ಭೋಯರ್‌ ಹರ್ಷಲ್ ನೇಮಕ

Profile Prabhakara R Jul 8, 2025 10:37 PM

ಯಾದಗಿರಿ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಭೋಯರ್‌ ಹರ್ಷಲ್ ನಾರಾಯಣರಾವ್ (Bhoyar Harshal Narayanarao) ಅವರನ್ನು ಮಂಗಳವಾರ (ಜು.08) ನಿಯೋಜಿಸಿ ಸರಕಾರ ಆದೇಶ ಹೊರಡಿಸಿದೆ. 2016ರ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿಯಾಗಿರುವ ಇವರು, ಬೆಂಗಳೂರಿನ ಅಟಲ್ ಜನಸ್ನೇಹಿ ಕೇಂದ್ರದ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ್ದರು.

ಇನ್ನು ಸದ್ಯದ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರನ್ನು ಕೆಕೆಆರ್‌ಟಿಸಿ ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಲಾಗಿದೆ. ಇವರು 2015ರ ಕರ್ನಾಟಕ ಕೇಡರ್‌ ಐಎಎಸ್‌ ಅಧಿಕಾರಿಯಾಗಿದ್ದು, ಈ ಹಿಂದೆ ಗದಗ ಜಿಲ್ಲಾ ಪಂಚಾಯತ್‌ ಸಿಇಒ ಸೇವೆ ಸಲ್ಲಿಸಿದ್ದರು. 2023ರಿಂದ ಯಾದಗಿರಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Yettinahole project: ಎತ್ತಿನಹೊಳೆ ಯೋಜನೆ ಆಕ್ಷೇಪಗಳನ್ನು ನಿವಾರಿಸುವುದಾಗಿ ಕೇಂದ್ರ ಸಚಿವರಿಂದ ಆಶ್ವಾಸನೆ: ಡಿ.ಕೆ.ಶಿವಕುಮಾರ್