ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಯಾದಗಿರಿಯಲ್ಲಿ ಬೊಲೆರೋ-ಸಾರಿಗೆ ಬಸ್ ಡಿಕ್ಕಿ ; ಒಂದೇ ಕುಟುಂಬದ ನಾಲ್ವರು ಸಾವು

ರಾಜ್ಯದಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಬಳಿಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೊಲೆರೋ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.

ಯಾದಗಿರಿಯಲ್ಲಿ ಬೊಲೆರೋ-ಸಾರಿಗೆ ಬಸ್ ಡಿಕ್ಕಿ; ನಾಲ್ವರ ಸಾವು

Profile Vishakha Bhat Apr 11, 2025 9:36 AM

ಯಾದಗಿರಿ: ರಾಜ್ಯದಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ (Road Accident) ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಬಳಿಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೊಲೆರೋ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಮೃತರನ್ನು ಚಾಲಕ ಶರಣಪ್ಪ (30) ಸುನೀತಾ (19) ಸೋಮವ್ವ (50) ತಂಗಮ್ಮ (50) ಎಂದು ಗುರುತಿಸಲಾಗಿದೆ.

ಬೊಲೆರೊ ವಾಹನದಲ್ಲಿ ಕುಟುಂಬಸ್ಥರು ಕಲಬುರಗಿಯ ಘತ್ತರಗಿ ಭಾಗ್ಯವಂತಿ ದೇವರ ಕಾರ್ಯಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

ಪ್ರತ್ಯೇಕ ಘಟನೆಯಲ್ಲಿ ಬೆಂಗಳೂರು ಮತ್ತು ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಬಳಿ ಘಟನೆ ನಡೆದಿದೆ. ಕಾರು ಚಾಲಕ ಗೋಪಾಲ್ (45) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆ, ಗೋಪಾಲ್ (60), ಶಶಿಕಲಾ (55) ಮತ್ತು ದೀಪಿಕಾ (35) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: ‌Viral Video: ಸ್ಪೀಡಾಗಿ ಬಂದು ಮಹಿಳೆ ಸೇರಿ 5 ಮಕ್ಕಳ ಮೇಲೆ ಹರಿದ ಕಾರು; ಡೆಡ್ಲಿ ಅಪಘಾತದ ವಿಡಿಯೊ ವೈರಲ್

ಬೆಂಗಳೂರು ಮಾರ್ಗವಾಗಿ ತುಮಕೂರು ಕಡೆಗೆ ಚಲಿಸುತ್ತಿದ್ದ ಕಾರು ಡಿವೈಡರ್​ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರು ತುಮಕೂರಿನ ಸಂಬಂಧಿಗಳ ಮನೆಯಲ್ಲಿ ನಾಮಕರಣ ಕಾರ್ಯಕ್ರಮಕ್ಕೆ ತೆರಳುತಿದ್ದರು ಎಂದು ಗೊತ್ತಾಗಿದೆ. ಮೃತರಲ್ಲಿ ಬೆಂಗಳೂರಿನ ಮಲ್ಲೇಶ್ವರಂನ ಇಬ್ಬರು ಮಹಿಳೆಯರಿದ್ದಾರೆ. ಮಕ್ಕಳಿಬ್ಬರು ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬೆಂಗಳೂರು ಮತ್ತು ತುಮಕೂರು ರಾಷ್ಟ್ರೀಯ ಹೆದ್ದಾರಿ ಕೆಲಕಾಲ ಟ್ರಾಫಿಕ್ ಉಂಟಾಗಿದ್ದು, ನೆಲಮಂಗಲ ಸಂಚಾರಿ ಪೊಲೀಸರು ಸಂಚಾರ ಸುಗಮಗೊಳಿಸಿದರು.