ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಪ್ರಚೋದನಕಾರಿ ಭಾಷಣ; ಶಾಸಕ ಬಸನಗೌಡ ಯತ್ನಾಳ್‌ ವಿರುದ್ಧ ಕೇಸ್ ದಾಖಲು

ಈ ದೇಶದಲ್ಲಿ ಇರಬೇಕಾದರೆ ಒಂದೇ ಮಾತರಂ ಹೇಳಬೇಕು, ಮಹಾತ್ಮ ಗಾಂಧೀಜಿ ಅವರು ಪಾಕಿಸ್ತಾನದ ಪಿತಾಮಹ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯ ಗುರುಮಠಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಚೋದನಕಾರಿ ಭಾಷಣ; ಶಾಸಕ ಬಸನಗೌಡ ಯತ್ನಾಳ್‌ ವಿರುದ್ಧ ಕೇಸ್ ದಾಖಲು

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌. -

Prabhakara R
Prabhakara R Feb 25, 2026 3:31 PM

ಯಾದಗಿರಿ: ಪ್ರಚೋದನಕಾರಿ ಭಾಷಣ ಆರೋಪದಲ್ಲಿ ಶಾಸಕ ಬಸನಗೌಡ ಯತ್ನಾಳ ವಿರುದ್ಧ ಜಿಲ್ಲೆಯ ಗುರುಮಠಕಲ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಗುರುಮಠಕಲ್ ಪಟ್ಟಣದಲ್ಲಿ ಫೆಬ್ರವರಿ 21ರಂದು ನಡೆದ ಶಿವಾಜಿ ಜಯಂತಿ ಬಹಿರಂಗ ಸಭೆಯಲ್ಲಿ ಯತ್ನಾಳ್‌ ಅವರು ಒಂದು ಸಮುದಾಯದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ, ಭಾಷಣದಲ್ಲಿ ಮಹಾತ್ಮ ಗಾಂಧಿ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಭೆಯಲ್ಲಿ ಮಾತನಾಡಿದ್‌ ಯತ್ನಾಳ್‌ ಅವರು, ಈ ದೇಶದಲ್ಲಿ ಇರಬೇಕಾದರೆ ಒಂದೇ ಮಾತರಂ ಹೇಳಬೇಕು, ಮಹಾತ್ಮ ಗಾಂಧೀಜಿ ಅವರು ಪಾಕಿಸ್ತಾನದ ಪಿತಾಮಹ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಶಾಸಕ ಬಸನಗೌಡ ಯತ್ನಾಳ ಅವರ ಹೇಳಿಕೆಗಳು ಸಮಾಜದ ಶಾಂತಿ ಹಾಗೂ ಸೌಹಾರ್ದತೆಗೆ ಧಕ್ಕೆ ತರುವಂತಿವೆ ಎಂದು ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ 196, 299, 302, 352 ಹಾಗೂ 353 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಯತ್ನಾಳ್​​ ಹೇಳಿದ್ದೇನು?

ಗಾಂಧೀಜಿಯನ್ನು ಭಾರತದ ರಾಷ್ಟ್ರಪಿತ ಎಂದು, ಜವಾಹರಲಾಲ್ ನೆಹರುರನ್ನು ಮೊದಲ ಪ್ರಧಾನಿ ಎಂದು ನಾನು ಒಪ್ಪಿಕೊಳ್ಳಲ್ಲ. ನಮ್ಮ ದೇಶದ ಮೊದಲ ಪ್ರಧಾನಿ ನೇತಾಜಿ ಸುಭಾಷ್ ಚಂದ್ರ ಬೋಸ್. ಕಾಶ್ಮೀರಕ್ಕೆ 370 ಕೊಟ್ಟಿದ್ದು ಯಾಕೆಂದರೆ ಫಾರೂಕ್ ಅಬ್ದುಲ್ಲಾ ಜತೆ ನೆಹರುಗೆ ಲಿಂಕ್ ಇತ್ತು. ಇವರೆಲ್ಲರೂ ದೇಶದ ಸ್ವಾತಂತ್ರ್ಯಕ್ಕಾಗಿ ಉಪವಾಸ ಮಾಡುತ್ತಿರಲಿಲ್ಲ. ಕೋಲ್ಕತ್ತಾದಿಂದ 555 ಸಿಗರೇಟ್ ತರಿಸಿಕೊಂಡು ಸೇದುತ್ತಿದ್ದರು. ಗಾಂಧಿ ಚರಕ ತಿರುಗಿಸಿದ್ದರಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿತ್ತಾ? ಹಾಗಿದ್ದರೆ ನಾನು ಚರಕ ತಿರುಗಿಸುತ್ತೇನೆ, ನಾಳೆ ರಾಜ್ಯದ ಸಿಎಂ ಆಗ್ತೀನಾ? ಎಂದು ಯತ್ನಾಳ್​​ ಪ್ರಶ್ನಿಸಿದ್ದರು. ಅಲ್ಲದೆ ಭಾರತದಲ್ಲಿರುವ ಮುಸ್ಲಿಮರು ಒಂದೇ ಮಾತರಂ ಹೇಳಬೇಕು. ಇಲ್ಲದಿದ್ದರೆ ಗಾಂಧಿ ಕೊಟ್ಟ ಪಾಕಿಸ್ತಾನಕ್ಕೆ ಹೋಗಬೇಕೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಬಜೆಟ್‌ ಬಳಿಕ ರಾಜ್ಯ ಸರ್ಕಾರ ಪತನವಾಗುವುದು ನಿಶ್ಚಿತ: ಶಾಸಕ ಯತ್ನಾಳ್‌ ಭವಿಷ್ಯ

ಅಲ್ಲದೆ, ಲವ್ ಜಿಹಾದ್ ಕುರಿತು ಉಲ್ಲೇಖಿಸಿ, ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾತನಾಡಿದ್ದಾರೆ. ಸಮುದಾಯಗಳ ನಡುವೆ ಅಶಾಂತಿ ಉಂಟುಮಾಡುವ ಉದ್ದೇಶದಿಂದ ಮಾತನಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಹೀಗಾಗಿ ಪೊಲೀಸರು ಯತ್ನಾಳ್​​ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.