ಯಾದಗಿರಿ: ಸಿಸಿಎಲ್ ಪಂದ್ಯ ಮುಗಿಸಿ ಹೈದರಾಬಾದ್‌ನಿಂದ ಊರಿಗೆ ಬರುತ್ತಿದ್ದ ಮಾಜಿ ಸಚಿವ ರಾಜು ಗೌಡ (Raju Gowda) ಅವರ ಕಾರು ಯಾದಗಿರಿ (Yadgir) ನಗರದ ಗಂಜ್ ಪ್ರದೇಶದ ಹೆದ್ದಾರಿಯಲ್ಲಿ ಅಪಘಾತಕ್ಕಿಡಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಆಂಧ್ರದ ವಿಶಾಖಪಟ್ಟಣದಲ್ಲಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಪಂದ್ಯ ಮುಗಿಸಿ, ಹೈದರಾಬಾದ್ ಮಾರ್ಗದ ಮೂಲಕ ಹಿಂತಿರುವಾಗ ಅಪಘಾತ ಸಂಭವಿಸಿದೆ. ನಗರದ ಗಂಜ್ ಪ್ರದೇಶದ ಹೈವೇನಲ್ಲಿ ಟ್ರಕ್ ಒಂದು ಇವರ ಕಾರಿಗೆ ಹಿಂದಿನಿಂದ ಗುದ್ದಿದೆ. ಕಾರಿನ ಹಿಂಭಾಗ ಸಂಪೂರ್ಣ ನುಜ್ಜು, ಗುಜ್ಜಾಗಿದ್ದು, ರಾಜೂ ಗೌಡ ಅವರಿಗೆ ಸ್ವಲ್ಪ ತರಚಿದ ಗಾಯಗಳಾಗಿವೆ. ಪ್ರಥಮ ಚಿಕಿತ್ಸೆ ಪಡೆದು ವಾಪಸ್ ಮನೆಗೆ ಮರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಮಾತನಾಡಿರುವ ಮಾಜಿ ಸಚಿವ ರಾಜುಗೌಡ ಅವರು, ಇವತ್ತು ಮುಂಜಾನೆ ನಮ್ಮ ಕಾರು ಅಪಘಾತಕ್ಕೀಡಾಗಿತ್ತು. ಕಾರಿನ ಫೋಟೊಗಳು ನೋಡಿ ನಮ್ಮ ಕಾರ್ಯಕರ್ತರು ಆತಂಕಗೊಂಡಿದ್ದರು. ಬಹಳಷ್ಟು ಜನ ಫೋನ್ ಮಾಡುತ್ತಿದ್ದಾರೆ. ಆದರೆ, ಅಪಘಾತದಲ್ಲಿ ನನಗೆ ಏನೂ ಆಗಿಲ್ಲ, ಆ ದೇವರು ಹಾಗೂ ಜನರ ಆಶೀರ್ವಾದದಿಂದ ನಾನು ಸುರಕ್ಷಿತವಾಗಿದ್ದೇನೆ ಎಂದು ತಿಳಿಸಿದ್ದಾರೆ.
ದೇವನಹಳ್ಳಿಯಲ್ಲಿ ಭೀಕರ ಅಪಘಾತ; ಮೂವರು ಯುವಕರ ಸಾವು
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಭೀಕರ ಹಿಟ್ ಆ್ಯಂಡ್ ರನ್‌ಗೆ ಮೂವರು ಬಲಿಯಾಗಿರುವ ಘಟನೆ (Devanahalli Accident) ನಡೆದಿದೆ. ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಜ್ಯ ಹೆದ್ದಾರಿಯಲ್ಲಿ ಅಪಘಾತದ ನಂತರ ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ.
Road Accident: ಬೆಂಗಳೂರಿನಲ್ಲಿ ಕಾರು ಅಪಘಾತ: ಇಬ್ಬರು ಸಾವು, ಮೂವರಿಗೆ ಗಾಯ
ಬೈಕ್ ಸವಾರ ತೌಸಿಫ್ ಸೇರಿ ಮೂವರು ಸವಾರರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಬೈಕಿಗೆ ಡಿಕ್ಕಿ ಹೊಡಿಸಿ ಟಿಪ್ಪರ್ ಸಮೇತ ಚಾಲಕ ಪರಾರಿಯಾಗಿದ್ದಾನೆ. ದೇವನಹಳ್ಳಿಯಿಂದ ಬೂದಿಗೆರೆ ರಸ್ತೆಯಲ್ಲಿ ಸವಾರರು ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಟಿಪ್ಪರ್, ಬೈಕಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಮೂವರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡು ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.