ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮಲ್ಲಿಕಾರ್ಜುನ ಮುತ್ಯಾಗೆ ತಾತ್ಕಾಲಿಕ ರಿಲೀಫ್‌; ಪೋಕ್ಸೊ ಪ್ರಕರಣದ ತನಿಖೆಗೆ ಹೈಕೋರ್ಟ್‌ ಮಧ್ಯಂತರ ತಡೆ

Mallikarjun Mutya Case: ಪೋಕ್ಸೊ ಪ್ರಕರಣದಲ್ಲಿ ನಡೆಯುತ್ತಿದ್ದ ತನಿಖೆಗೆ ತಡೆ ನೀಡಿ ಹೈಕೋರ್ಟ್‌ನ ಕಲಬುರಗಿ ವಿಭಾಗೀಯ ಪೀಠ ಆದೇಶ ಹೊರಡಿಸಿದೆ. ಬಾಲಕಿ ಜತೆ ಅನುಚಿತವಾಗಿ ವರ್ತನೆ ಆರೋಪದಲ್ಲಿ ಕಳೆದ ಫೆಬ್ರವರಿ 25 ರಂದು ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು.

ಮಲ್ಲಿಕಾರ್ಜುನ ಮುತ್ಯಾ (ಸಂಗ್ರಹ ಚಿತ್ರ)

ಯಾದಗಿರಿ: ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ನಡೆಯುತ್ತಿದ್ದ ತನಿಖೆಗೆ ತಡೆ ನೀಡಿ ಹೈಕೋರ್ಟ್‌ನ ಕಲಬುರಗಿ ವಿಭಾಗೀಯ ಪೀಠ ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ವಿಚಾರಣೆಗೆ ತಡೆ ನೀಡುವಂತೆ ಮುತ್ಯಾ‌ (Mallikarjun Mutya Case) ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿರುವ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಹೈಕೋರ್ಟ್‌ ಆದೇಶದಿಂದ ಮಲ್ಲಿಕಾರ್ಜುನ ಮುತ್ಯಾಗೆ ಪ್ರಕರಣದಿಂದ ತಾತ್ಕಾಲಿಕವಾಗಿ ರಿಲೀಫ್ ಸಿಕ್ಕಿದೆ. ಬಾಲಕಿ ಜತೆ ಅನುಚಿತವಾಗಿ ವರ್ತನೆ ಆರೋಪದಲ್ಲಿ ಕಳೆದ ಫೆಬ್ರವರಿ 25 ರಂದು ಶಹಾಪುರ ಸಿಡಿಪಿಒ ನೀಡಿದ ದೂರಿನ ಮೇರೆಗೆ ಗೋಗಿ ಪೊಲೀಸ್ ಠಾಣೆಯಲ್ಲಿ ಮುತ್ಯಾ ವಿರುದ್ಧ ಕೇಸ್ ದಾಖಲಾಗಿತ್ತು. ಶಹಾಪುರ ಸಿಪಿಐ ಶರಣಗೌಡ ನ್ಯಾಮಣ್ಣನವರ ಪ್ರಕರಣದ ತನಿಖೆ ನಡೆಸುತ್ತಿದ್ದರು.

ಪ್ರಕರಣದಲ್ಲಿ ಮಹಲರೋಜಾ ಮಠದ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾಗೆ ಇತ್ತೀಚೆಗೆ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿ ಯಾದಗಿರಿ‌ ಜಿಲ್ಲಾ ಸತ್ರ ನ್ಯಾಯಾಲಯ ಶಾಕ್ ನೀಡಿತ್ತು. ಇದೀಗ ಹೈಕೋರ್ಟ್‌ ಆದೇಶದಿಂದ ತುಸು ನಿರಾಳರಾಗುವಂತಾಗಿದೆ.

ಮದುವೆಯಾದ 15ನೇ ದಿನಕ್ಕೆ ನವವಧು ಎಸ್ಕೇಪ್; ಬ್ರೋಕರ್‌ಗಳ ಮಾತು ನಂಬಿ ಕೆಟ್ಟ ಯುವಕ!