ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಗುರುಮಠಕಲ್‌ನಲ್ಲಿ ಕೇಸರಿ ಧ್ವಜ ವಿಚಾರಕ್ಕೆ ತಾಯಿ-ಮಗನ ಮೇಲೆ ಮುಸ್ಲಿಂ ಯುವಕರ ಹಲ್ಲೆ; ಕೇಸ್ ದಾಖಲು

Gurumitkal News: ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಪುಟಪಾಕ್ ಗ್ರಾಮದಲ್ಲಿ ತಾಯಿ-ಮಗನ ಮೇಲೆ ಹಲ್ಲೆ ನಡೆದಿತ್ತು. ಘಟನೆ ಖಂಡಿಸಿ ಶಿವ ಮಾಲಾಧಾರಿಗಳು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿ, ಹಲ್ಲೆ ಮಾಡಿದವರ ಬಂಧನಕ್ಕೆ ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಕೇಸ್‌ ದಾಖಲಾಗಿದೆ.

ತಾಯಿ-ಮಗನ ಮೇಲೆ ಹಲ್ಲೆ ಖಂಡಿಸಿ ಗುರುಮಠಕಲ್ ತಾಲೂಕಿನ ಪುಟಪಾಕ್ ಗ್ರಾಮದಲ್ಲಿ ಪ್ರತಿಭಟನೆ.

ಯಾದಗಿರಿ: ಕೇಸರಿ ಧ್ವಜ ವಿಚಾರಕ್ಕೆ ಹಿಂದೂ ಕುಟುಂಬಸ್ಥರ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ (Gurumitkal News) ತಾಲೂಕಿನ ಪುಟಪಾಕ್ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಪುಟಪಾಕ್ ಗ್ರಾಮದಲ್ಲಿ ನೆನ್ನೆ ಸಂಜೆ ಘಟನೆ ನಡೆದಿದೆ. ಗ್ರಾಮದಲ್ಲಿ ಶಿವ ಮಾಲಾಧಾರಿಗಳು ಮಹಾಪೂಜೆ ಇಟ್ಟಿಕೊಂಡಿದ್ದರು. ಹೀಗಾಗಿ ಗ್ರಾಮದಲ್ಲಿ ಕೇಸರಿ ಧ್ವಜಗಳು ಅಳವಡಿಕೆ ಮಾಡಲಾಗಿತ್ತು. ಆದರೆ, ಕೇಸರಿ ಧ್ವಜ ಮಸೀದಿ ಮೇಲೆ ಇಟ್ಟ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿದ ಹಿನ್ನೆಲೆಯಲ್ಲಿ ತಪ್ಪಾಗಿ ಅರ್ಥೈಸಿಕೊಂಡ 7 ಮುಸ್ಲಿಂ ಯುವಕರು, ಪೋಟೋ ಸ್ಟೇಟಸ್ ಇಟ್ಟಿದ್ದ ಯುವಕನ ಮನೆಗೆ ತೆರಳಿ ಹಲ್ಲೆ ನಡೆಸಿದ್ದಾರೆ.

ರಮೇಶ್, ತಿರುಪತಿ ಹಾಗೂ ನಾಗಮ್ಮಳ ಮೇಲೆ ಹಲ್ಲೆ ಯುವಕರ ಗುಂಪು ಹಲ್ಲೆ ಮಾಡಿದೆ. ಮಗನ ಮೇಲೆ ಹಲ್ಲೆ ಮಾಡಿದ್ದನ್ನು ಪ್ರಶ್ನೆ ಮಾಡಿದ ತಾಯಿ ನಾಗಮ್ಮಳ ಮೇಲೂ ಯುವಕರ ಗುಂಪು ಹಲ್ಲೆ ಮಾಡಿದೆ. ಈ ಬಗ್ಗೆ ಹಲ್ಲೆಗೊಳಗಾದ ನಾಗಮ್ಮ ನೀಡಿದ ದೂರಿನ ಅನ್ವಯ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ 7 ಜನ ಮುಸ್ಲಿಂ ಯುವಕರ ವಿರುದ್ಧ ಕೇಸ್ ದಾಖಲಾಗಿದೆ.

ಕುಡಿದ ಮತ್ತಿನಲ್ಲಿ ಅರೆಬೆತ್ತಲೆಯಾಗಿ ಪತ್ನಿ ಮೇಲೆ ಹಲ್ಲೆ ನಡೆಸಿದ ಕಾನ್‌ಸ್ಟೇಬಲ್; ಚಿಕ್ಕ ಮಗು ಕೈಲಿದ್ರೂ ಮನಸ್ಸು ಕರಗಲಿಲ್ಲ

ಘಟನೆ ಖಂಡಿಸಿ ನೆನ್ನೆ ರಾತ್ರಿ ಶಿವ ಮಾಲಾಧಾರಿಗಳು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿ, ಹಲ್ಲೆ ಮಾಡಿದವರ ಬಂಧನಕ್ಕೆ ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಕೇಸ್‌ ದಾಖಲಾಗಿದೆ.

ವಂಟಮೂರಿ ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; 12 ಆರೋಪಿಗಳಿಗೆ 5 ವರ್ಷ ಜೈಲು ಶಿಕ್ಷೆ

ಬೆಳಗಾವಿ, ಫೆ.4: ವಂಟಮೂರಿ ಗ್ರಾಮದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣದಲ್ಲಿ (Vantamuri case) 12 ಜನ ಆರೋಪಿಗಳಿಗೆ 5 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಬೆಳಗಾವಿಯ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಈ ಕುರಿತು ನ್ಯಾಯಾಧೀಶ ಎಚ್.ಎಸ್. ಮಂಜುನಾಥ ಅವರು ತೀರ್ಪು ಪ್ರಕಟಿಸಿದ್ದಾರೆ.

ಪ್ರಕರಣದಲ್ಲಿ ಒಟ್ಟು 12 ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಸಾಬೀತಾಗಿದ್ದು, ಪ್ರತಿಯೊಂದು ಸೆಕ್ಷನ್‌ಗೆ ಒಂದೊಂದು ಸಾವಿರ ರೂಪಾಯಿ ದಂಡವನ್ನೂ ವಿಧಿಸಲಾಗಿದೆ. ಆರೋಪಿಗಳಾದ ಬಸಪ್ಪ ನಾಯಿಕ, ರಾಜು ನಾಯಿಕ, ಕೆಂಪಣ್ಣ ನಾಯಿಕ, ಪಾರ್ವತಿ ನಾಯಕ, ಯಲ್ಲವ್ವ ನಾಯಿಕ, ಲಕ್ಕಪ್ಪ ನಾಯಿಕ, ಗಂಗವ್ವ ನಾಯಿಕ, ಸಂಗೀತಾ ಹೆಗ್ಗನಾಯಿಕ, ಸಂತೋಷ ನಾಯಿಕ, ಶೋಭಾ ನಾಯಿಕ, ಲಕ್ಕವ್ವ ನಾಯಿಕ ಹಾಗೂ ಶಿವಪ್ಪ ವನ್ನೂರಿಗೆ ಶಿಕ್ಷೆ ವಿಧಿಸಲಾಗಿದೆ. ತೀರ್ಪು ಪ್ರಕಟವಾಗುತ್ತಿದ್ದಂತೆ ಕೋರ್ಟ್‌ದಲ್ಲೇ ಆರೋಪಿಗಳು ಹಾಗೂ ಅವರ ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ.