ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Shahapur Accident: ಶಹಾಪುರದಲ್ಲಿ ವಿದ್ಯುತ್ ಕಂಬಕ್ಕೆ ಬೊಲೆರೋ ಡಿಕ್ಕಿ; ಮೂವರು ಕೂಲಿ ಕಾರ್ಮಿಕರ ದುರ್ಮರಣ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಡ್ನಾಳ್ ಗ್ರಾಮದ ಬಳಿ ಭೀಕರ ಅಪಘಾತ ನಡೆದಿದೆ. ಬೊಲೆರೋ ವಾಹನ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದರಿಂದ ಗಂಭೀರವಾಗಿ ಗಾಯಗೊಂಡು ಮೂವರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಹಾಪುರದಲ್ಲಿ ವಿದ್ಯುತ್ ಕಂಬಕ್ಕೆ ಬೊಲೆರೋ ಡಿಕ್ಕಿಯಾಗಿ ಮೂವರ ಸಾವು

-

Prabhakara R
Prabhakara R Aug 23, 2026 2:31 PM

ಯಾದಗಿರಿ: ಶಹಾಪುರ ತಾಲೂಕಿನ (Shahapur Accident) ಮಡ್ನಾಳ್ ಗ್ರಾಮದ ಬಳಿ ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬೊಲೆರೋ ವಾಹನ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಭಾಗ್ಯಶ್ರೀ (35), ಸತ್ಯಮ್ಮ (30) ಹಾಗೂ ಹೊನ್ನಿಂಗಮ್ಮ (18) ಎಂದು ಗುರುತಿಸಲಾಗಿದೆ. ಮಡ್ನಾಳ್ ಸುತ್ತಮುತ್ತಲಿನ ಜಮೀನಿನಲ್ಲಿ ಹತ್ತಿ ಕಸ ತೆಗೆಯುವ ಕೂಲಿ ಕೆಲಸಕ್ಕೆ ತೆರಳಿದ್ದ ಕಾರ್ಮಿಕರು, ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಗಾಯಾಳುಗಳನ್ನು ಶಹಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಭೀ.ಗುಡಿ ಪಿಎಸ್ಐ ದೇವಿಂದ್ರರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂವರು ಕೂಲಿ ಕಾರ್ಮಿಕರ ದುರ್ಮರಣದಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಕೊಡಗಿನಲ್ಲಿ ಕಾಡಾನೆ ದಾಳಿಗೆ ಪ್ರವಾಸಿಗ ಬಲಿ

ಮಡಿಕೇರಿ: ಕಾಡಾನೆ ದಾಳಿಗೆ ಬೆಂಗಳೂರು ಮೂಲದ ಪ್ರವಾಸಿಗನೊಬ್ಬ ಮೃತಪಟ್ಟಿರುವ ಘಟನೆ (Elephant Attack) ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ಹೋಂ ಸ್ಟೇಗೆ ಆಗಮಿಸಿದ್ದ ಸುಮಾರು 40 ವರ್ಷದ ಮುರುಳಿಕೃಷ್ಣ ಎಂಬ ಪ್ರವಾಸಿಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ.

ಪ್ರವಾಸಿಗರು ತೆರಾಲು ಗ್ರಾಮದ ಹೋಂಸ್ಟೇಯಲ್ಲಿ ವಾಸ್ತವ್ಯ ಹೂಡಿದ್ದರು. ಶನಿವಾರ ಸಂಜೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ನಾಯಿಯನ್ನು ಅಟ್ಟಿಸಿಕೊಂಡು ಬಂದ ಕಾಡಾನೆ ಏಕಾಏಕಿ ಪ್ರವಾಸಿಗನ ಮೇಲೆ ದಾಳಿ ನಡೆಸಿದೆ ಎನ್ನಲಾಗಿದೆ.

ತುಮಕೂರಿನಲ್ಲಿ ಬಲೆಯಲ್ಲಿ ಸಿಕ್ಕಿಬಿದ್ದ ಚಿರತೆ ಸುಟ್ಟು ಹಾಕಿದ ಮೂವರ ಬಂಧನ

ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಪ್ರವಾಸಿಗನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದ್ದಾರೆ. ಅಷ್ಟರಲ್ಲೇ ಆತ ಮೃತಪಟ್ಟಿದ್ದಾನೆ. ಘಟನೆಯಿಂದ ತೆರಾಲು ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇನ್ನು ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.