Electric Shock: ಯಾದಗಿರಿಯಲ್ಲಿ ದಾರುಣ ಘಟನೆ; ವಿದ್ಯುತ್ ತಗುಲಿ ಮೂವರು ರೈತರ ದುರ್ಮರಣ
Yadgir news: ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಅಗತೀರ್ಥ ಗ್ರಾಮದಲ್ಲಿ ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ತಮ್ಮ ಮನೆಗೆ ಆಧಾರವಾಗಿದ್ದವರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಜೆಸ್ಕಾಂ ಹಾಗು ಪೊಲೀಸ್ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.


ಯಾದಗಿರಿ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ವಿದ್ಯುತ್ ತಗುಲಿ ರೈತರು ಮೂವರು ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ಅಗತೀರ್ಥ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಈರಪ್ಪ (40), ಸುರೇಶ (23) ಹಾಗೂ ದೇವು ಅಗತೀರ್ಥ (30) ಮೃತ ದುರ್ದೈವಿಗಳು.
ಮೃತಪಟ್ಟವರಲ್ಲಿ ಇಬ್ಬರು ಸದಬ ಗ್ರಾಮದವರಾಗಿದ್ದರೆ, ಒಬ್ಬ ವ್ಯಕ್ತಿ ಅಗತೀರ್ಥ ಕ್ಯಾಂಪ್ ನಿವಾಸಿ ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಕೆಲಸ ಮಾಡುವಾಗ ಒಬ್ಬರಿಗೆ ವಿದ್ಯುತ್ ಶಾಕ್ ತಗುಲಿದೆ. ಇದನ್ನು ಕಂಡ ಮತ್ತೊಬ್ಬ ರೈತ ಆತನನ್ನು ರಕ್ಷಿಸಲು ಹೋದಾಗ ಆತನಿಗೂ ವಿದ್ಯುತ್ ಪ್ರವಹಿಸಿದೆ. ಆ ಇಬ್ಬರನ್ನೂ ರಕ್ಷಿಸಲು ಮತ್ತೊಬ್ಬ ವ್ಯಕ್ತಿ ಮುಂದಾಗಿದ್ದು, ದುರದೃಷ್ಟವಶಾತ್ ಮೂವರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದ್ದು, ತಮ್ಮ ಮನೆಗೆ ಆಧಾರವಾಗಿದ್ದವರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಘಟನಾ ಸ್ಥಳಕ್ಕೆ ಜೆಸ್ಕಾಂ ಹಾಗು ಪೊಲೀಸ್ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ. ಇಲ್ಲಿಯವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ.
ರಸ್ತೆ ಬದಿ ನಿಂತಿದ್ದವರಿಗೆ ಅಪ್ಪಳಿಸಿದ ಬಿಎಂಟಿಸಿ ಬಸ್, ಒಬ್ಬ ಸಾವು, ನಾಲ್ವರಿಗೆ ಗಾಯ

ಬೆಂಗಳೂರು: ಬೆಂಗಳೂರಿನ (Bengaluru) ಪೀಣ್ಯದಲ್ಲಿ ಭೀಕರ ಅಪಘಾತ ಸಂಭವಿಸಿದೆ. ರಸ್ತೆ ಬದಿಯಲ್ಲಿದ್ದವರ ಮೇಲೆ ಬಿಎಂಟಿಸಿ ಬಸ್ (BMTC bus) ಹರಿದು ಓರ್ವ ಮಗು ಸೇರಿದಂತೆ ಒಟ್ಟು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ (Road Accident) ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ಸುಮಾ (25) ಎಂದು ಗುರುತಿಸಲಾಗಿದೆ.
ಪೀಣ್ಯ 2ನೇ ಹಂತದಲ್ಲಿ ಎಲೆಕ್ಟ್ರಿಕ್ ಬಿಎಂಟಿಸಿ ಬಸ್ ಹರಿದು ಮಗು ಸೇರಿದಂತೆ ಒಟ್ಟು ಐವರಿಗೆ ಗಾಯಗಳಾಗಿದೆ. ಪೀಣ್ಯ 2ನೇ ಹಂತದಲ್ಲಿ 8:45ಕ್ಕೆ ಈ ಘಟನೆ ನಡೆದಿದ್ದು ಬೀದಿಬದಿಯ ಕ್ಯಾಂಟೀನ್‌ಗೆ ರಭಸದಿಂದ ಬಂದ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ವೇಳೆ ಗಾಯಗೊಂಡ ಐವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ರೂಟ್ ನಂಬರ್ 252/4 ಬಿಎಂಟಿಸಿ ಎಲೆಕ್ಟ್ರಿಕ್ ಬಸ್ KA51 AK 4170 ಸಂಖ್ಯೆಯ ಎಲೆಕ್ಟ್ರಿಕ್ ಬಸ್ ಅಪಘಾತಕ್ಕೆ ಈಡಾಗಿದೆ. ಗಾಯಗೊಂಡವರಿಗೆ ಚಿಕಿತ್ಸೆ ಒದಗಿಸಲಾಗುತ್ತಿದೆ.
ಇತ್ತೀಚಿನ ದಿನಗಳಲ್ಲಿ ಬಿಎಂಟಿಸಿ ಬಸ್ ಅಪಘಾತಗಳು ಹೆಚ್ಚುತ್ತಿವೆ. ಜುಲೈ 2ರಂದು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಬಳಿಯ ಜಿಗಣಿಯಲ್ಲಿ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಶಾಲಾ ಬಾಲಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದ. ಮುಖ್ಯ ರಸ್ತೆಯಿಂದ ಮಕ್ಕಳನ್ನು ಕರೆದುಕೊಂಡು ಹೋಗಲು ಶಾಲಾ ಬಸ್ ನಿಂತಿದ್ದಾಗ ಈ ಘಟನೆ ಸಂಭವಿಸಿತ್ತು.
ಇದನ್ನೂ ಓದಿ: Accident: ಕುಡಿದ ಅಮಲಿನಲ್ಲಿ ಕಾರು ಚಲಾವಣೆ; BMW ಕಾರು ಬೈಕ್ಗೆ ಡಿಕ್ಕಿ, ವ್ಯಕ್ತಿ ಸಾವು