Yadgir Accident: ಯಾದಗಿರಿಯಲ್ಲಿ ಬೈಕ್‌ಗೆ ಬಸ್ ಡಿಕ್ಕಿಯಾಗಿ ಒಂದೇ ಕುಂಟುಂಬದ ಮೂವರ ದುರ್ಮರಣ
Yadgir Accident: ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ತಿಂಥಣಿ ಬಳಿ ಬುಧವಾರ ಅಪಘಾತ ನಡೆದಿದೆ. ತಿಂಥಣಿ ಕಡೆಗೆ ಹೊರಟಿದ್ದ ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದರಿಂದ ಅಪಘಾತ ಸಂಭವಿಸಿದೆ.
ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳಿ ಬುಧವಾರ ಭೀಕರ ಅಪಘಾತ (Road Accident) ಸಂಭವಿಸಿದ್ದು, ಸಾರಿಗೆ ಬಸ್ ಡಿಕ್ಕಿಯಾಗಿ ಬೈಕ್‌ನಲ್ಲಿ ಹೋಗುತ್ತಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತಿಂಥಣಿ ಕಡೆಗೆ ಹೊರಟಿದ್ದ ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ಈ ವೇಳೆ ಗಂಭೀರವಾಗಿ ಗಾಯಗೊಂಡ ಇಬ್ಬರು ಮಕ್ಕಳು ಸೇರಿ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನೂ ಓದಿ | DK Shivakumar: ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ: ಡಿ.ಕೆ.ಶಿವಕುಮಾರ್ ತರಾಟೆ
ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ರಾಮನಗರ: ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾರೋಹಳ್ಳಿ ತಾಲೂಕಿನ ಡಾ.ಚಂದ್ರಮ್ಮ ದಯಾನಂದ ಸಾಗರ್ ಕಾಲೇಜಿನಲ್ಲಿ (Dayananda Sagar College) ನಡೆದಿದೆ. ಅನಾಮಿಕಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಅನಾಮಿಕ ಕೇರಳ ಮೂಲದ ಕಣ್ಣೂರಿನ ವಿದ್ಯಾರ್ಥಿನಿ ಆಗಿದ್ದು, ಮೊದಲ ವರ್ಷದ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು. ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಹಾಸ್ಟೆಲ್‌ನಲ್ಲಿ ಊಟಕ್ಕೆ ಬಾರದ ಹಿನ್ನೆಲೆಯಲ್ಲಿ ಸಹ ವಿದ್ಯಾರ್ಥಿನಿಯರು ರೂಮ್ ಬಳಿ ಹೋಗಿದ್ದಾರೆ. ಬಾಗಿಲು ತಟ್ಟಿದ್ದರೂ ತೆಗೆಯದೇ ಇದ್ದರಿಂದ ಕಿಟಕಿಯಿಂದ ನೋಡಿದಾಗ ಆಕೆ ನೇಣು ಬಿಗಿದ ಸ್ಥಿತಿಯಲ್ಲಿರುವುದು ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹಾರೋಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನೂ ಓದಿ | Viral Video: ವಧುವಿಗೆ ಕಪಾಳಮೋಕ್ಷ ಮಾಡಿ ಸಸ್ಪೆಂಡ್ ಆದ ವರ!ಏನಿದು ವಿವಾದ?
ಬೆಂಗಳೂರು ವಿವಿ ಹಾಸ್ಟೆಲ್‌ನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬಳು, ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ವಿದ್ಯಾರ್ಥಿನಿಯು ನಗರದ ಜ್ಞಾನಭಾರತಿ ಕ್ಯಾಂಪಸ್‌ನ ಕನ್ನಡ ಅಧ್ಯಯನ ಕೇಂದ್ರದಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದಳು. ಹಾಸ್ಟೆಲ್‌ನಲ್ಲಿ ಮಧ್ಯಾಹ್ನ ನೇಣು ಬಿಗಿದುಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ.
ಈ ಸುದ್ದಿಯನ್ನೂ ಓದಿ | Bengaluru News: ಬೆಂಗಳೂರಿನಲ್ಲಿ ʼಕ್ಯಾನ್ಸರ್ ವಿರುದ್ಧ ನಡೆಯಿರಿʼ ವಾಕಥಾನ್
ಎಚ್‌ಡಿ ಕೋಟೆಯ ಹೆಬ್ಬಲಗುಪ್ಪೆ ಹಳ್ಳಿಯ ಪಾವನ ಹೆಚ್‌ಎನ್ (23) ಮೃತ ವಿದ್ಯಾರ್ಥಿನಿ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.