ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Yadgir News: ಬಟ್ಟೆ ತೊಳೆಯುವಾಗ ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಬಾಲಕಿಯರ ದುರ್ಮರಣ

Yadgir News: ಯಾದಗಿರಿ ಜಿಲ್ಲೆ ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಟ್ಟೆ ತೊಳೆಯಲು ಬಾವಿ ಬಳಿ ಹೋಗಿದ್ದ ವೇಳೆ ಅವಘಡ ಸಂಭವಿಸಿದೆ. ಸ್ಥಳೀಯರು ಮೃತದೇಹಗಳನ್ನು ಹೊರಗೆ ತೆಗೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಬಾಲಕಿಯರ ದುರ್ಮರಣ

Profile Prabhakara R May 16, 2025 10:43 AM

ಯಾದಗಿರಿ: ಬಟ್ಟೆ ತೊಳೆಯುವಾಗ ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಬಾಲಕಿಯರು ಮೃತಪಟ್ಟಿರುವ ಘಟನೆ ಯಾದಗಿರಿಯ (Yadgir News) ಮೊಟ್ನಳ್ಳಿ ಗ್ರಾಮದ ಹೊರ ಭಾಗದಲ್ಲಿ ನಡೆದಿದೆ. ಮೃತರನ್ನು ವೈಶಾಲಿ (17), ನವೀತಾ (16) ಎಂದು ಗುರುತಿಸಲಾಗಿದೆ. ಈ ಇಬ್ಬರೂ ಬಟ್ಟೆ ತೊಳೆಯಲು ಬಾವಿ ಬಳಿ ಹೋಗಿದ್ದರು. ಈ ವೇಳೆ ಈ ಅವಘಡ ಸಂಭವಿಸಿದೆ. ಸ್ಥಳೀಯರು ಮೃತದೇಹಗಳನ್ನು ಬಾವಿಯಿಂದ ಹೊರಗೆ ತೆಗೆದಿದ್ದಾರೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಲಕ್ಷದ್ವೀಪಕ್ಕೆ ಹೊರಟಿದ್ದ ಮಂಗಳೂರಿನ ಸರಕು ಹಡಗು ಮುಳುಗಡೆ; 6 ಸಿಬ್ಬಂದಿಯ ರಕ್ಷಣೆ

Mangaluru shipwreck

ಮಂಗಳೂರು: ಮಂಗಳೂರಿನಿಂದ ಲಕ್ಷ ದೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮುಳುಗಡೆಯಾಗಿ (Mangaluru Cargo ship sinks), ಅದೃಷ್ವವಶಾತ್‌ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಸುಮಾರು 60 ನಾಟಿಕಲ್ ಮೈಲು ದೂರದಲ್ಲಿದ್ದಾಗ ಎಂಎಸ್‌ವಿ ಸಲಾಮತ್ ಎಂಬ ಹೆಸರಿನ ಹಡಗು ಮುಳುಗಿದ್ದು, ಕರಾವಳಿ ರಕ್ಷಣಾ ಪಡೆ ಕಾರ್ಯಾಚರಣೆ ನಡೆಸಿ, 6 ಸಿಬ್ಬಂದಿಯನ್ನು ರಕ್ಷಣೆ ಮಾಡಿದೆ.

ಮಂಗಳೂರಿನ ಸರಕು ಸಾಗಣೆ ಹಡಗು ಮೇ 12ರಂದು ಮಂಗಳೂರು ಬಂದರಿನಿಂದ ಸಿಮೆಂಟ್ ಹಾಗೂ ನಿರ್ಮಾಣ ಸಾಮಗ್ರಿ ಹೊತ್ತು ಲಕ್ಷದ್ವೀಪದತ್ತ ಪ್ರಯಾಣ ಆರಂಭಿಸಿತ್ತು. ಮೇ18 ರಂದು ಲಕ್ಷದ್ವೀಪದ ಕಡಮತ್ ದ್ವೀಪಕ್ಕೆ ತಲುಪಬೇಕಾಗಿತ್ತು. ದಾರಿ ಮಧ್ಯೆ ತಾಂತ್ರಿಕ ಸಮಸ್ಯೆಯಿಂದ ಒಳಗಡೆ ನೀರು ನುಗ್ಗಿ ಹಡಗು ಮುಳುಗಿದೆ.

ಹಡಗಿನಲ್ಲಿ 6 ಭಾರತೀಯ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ ಎಲ್ಲಾ ಸಿಬ್ಬಂದಿ ಹಡಗಿನಿಂದ ಹಾರಿ ಸಣ್ಣ ಡಿಂಗಿ ಬೋಟಿನಲ್ಲಿ ಪ್ರಾಣ ಉಳಿಸಿಕೊಂಡಿದ್ದಾರೆ. ಭಾರತೀಯ ಕರಾವಳಿ ರಕ್ಷಣಾ ಪಡೆಗೆ ಬಂದ ಮಾಹಿತಿ ಹಿನ್ನೆಲೆಯಲ್ಲಿ ಗಸ್ತು ತಿರುಗುತ್ತಿದ್ದ ಕೋಸ್ಟ್ ಗಾರ್ಡ್‌ನ ‘ವಿಕ್ರಂ’ ಶಿಪ್ ನಲ್ಲಿ ಸಿಬ್ಬಂದಿಯನ್ನು ರಕ್ಷಣೆ ಮಾಡಲಾಗಿದೆ. ಇಸ್ಮಾಯಿಲ್ ಶರೀಫ್, ಅಲೆಮನ್ ಅಹ್ಮದ್ ಬಾಯ್ ಗಾವ್ಡ, ಕಾಕಲ್ ಸುಲೇಮಾನ್ ಇಸ್ಮಾಯಿಲ್, ಅಕ್ಬರ್ ಅಬ್ದುಲ್ ಸುರಾನಿ, ಕಸಂ ಇಸ್ಮಾಯಿಲ್ ಮತ್ತು ಅಜ್ಮಲ್ ಅವರನ್ನು ರಕ್ಷಿಸಲಾಗಿದೆ.

ಈ ಸುದ್ದಿಯನ್ನೂ ಓದಿ | Operation Sindoor: ಆಪರೇಷನ್ ಸಿಂದೂರ್ ವೇಳೆ ಪಾಕಿಸ್ತಾನ ಬಳಸುತ್ತಿದ್ದ ಚೀನಾದ ವಾಯು ರಕ್ಷಣಾ ವ್ಯವಸ್ಥೆ ಜಾಮ್