ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಸುರಪುರದಲ್ಲಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಜೆಇಗಳು

ದೂರುದಾರರಿಗೆ ಸಂಬಂಧಿಸಿದ ಕಾಮಗಾರಿಗೆ ಸಂಬಂಧಿಸಿದ ಕೆಲಸದ ಪ್ರಕ್ರಿಯೆ ಪೂರ್ಣಗೊಳಿಸಲು ಎಇಗಳು, 9 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು, 3 ಸಾವಿರ ರೂಪಾಯಿ ಸ್ವೀಕರಿಸಿದ ಆರೋಪ ಕೇಳಿಬಂದಿದೆ. ಹೀಗಾಗಿ ಲಂಚ ಸ್ವೀಕರಿಸುವ ವೇಳೆ ಎಇಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಯಾದಗಿರಿ: ಲಂಚ ಸ್ವೀಕಾರದ ಆರೋಪದಲ್ಲಿ ಜೆಸ್ಕಾಂನ ಇಬ್ಬರು ಕಿರಿಯ ಎಂಜಿನಿಯರ್‌ಗಳನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಯಾದಗಿರಿ ಜಿಲ್ಲೆಯ (Yadgir) ಸುರಪುರದಲ್ಲಿ ನಡೆದಿದೆ. ಸಚಿನ್ ಯೇಡಕೆ ಹಾಗೂ ಶ್ರೀಶೈಲ್ ತಮ್ಮದಡ್ಡಿ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.

ತಿಂಥಣಿ ಗ್ರಾಮದ ಭೈರಣ್ಣ ಎಂಬುವವರು ನೀಡಿದ ದೂರಿನ ಮೇರೆಗೆ ಈ ಕಾರ್ಯಾಚರಣೆ ನಡೆದಿದೆ. ದೂರುದಾರರಿಗೆ ಸಂಬಂಧಿಸಿದ 3,63,942 ರೂಪಾಯಿ ಮೊತ್ತದ ಕಾಮಗಾರಿ ಎಂಟು ತಿಂಗಳ ಹಿಂದೆಯೇ ಪೂರ್ಣಗೊಂಡಿತ್ತು ಎನ್ನಲಾಗಿದೆ. ಈ ಕಾಮಗಾರಿಗೆ ಸಂಬಂಧಿಸಿದ ಕೆಲಸದ ಪ್ರಕ್ರಿಯೆ ಪೂರ್ಣಗೊಳಿಸಲು ಎಇಗಳು, 9 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು, 3 ಸಾವಿರ ರೂಪಾಯಿ ಸ್ವೀಕರಿಸಿದ ಆರೋಪ ಕೇಳಿಬಂದಿದೆ.

Factory caught fire: ಮಸ್ತೇನಹಳ್ಳಿಯ ಗರುಡ ಮಾರ್ಟ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ರೂ. ನಷ್ಟ

ಯಾದಗಿರಿ ಲೋಕಾಯುಕ್ತ ಎಸ್‌ಪಿ ಹಾಗೂ ಡಿಎಸ್‌ಪಿ ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ಇನ್‌ಸ್ಪೆಕ್ಟರ್ ಪ್ರದೀಪ್ ತಲಕೇರಿ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಈ ಸಂಬಂಧ ಕ್ರೈಂ ನಂಬರ್ 08/2026ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಲೋಕಾಯುಕ್ತ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.