ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಆರ್‌ಎಸ್‌ಎಸ್ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಶಿಕ್ಷಕರಿಬ್ಬರ ಅಮಾನತು

ಆರ್‌ಎಸ್‌ಎಸ್ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸರ್ಕಾರಿ ಶಾಲಾ ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ಮತ್ತು ಸುರಪುರ ತಾಲೂಕಿನ ಶಿಕ್ಷಕರಿಬ್ಬರು ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಭಾಗಿಯಾಗಿದ್ದರು. ಇವರು ಕರ್ನಾಟಕ ನಾಗರಿಕ ಸೇವೆಗಳ (ನಡವಳಿಕೆ) ನಿಯಮಗಳು 2021 ರ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಅಮಾನತುಗೊಳಿಸಲಾಗಿದೆ.

ಸಂಗ್ರಹ ಚಿತ್ರ

ಯಾದಗಿರಿ: ಕರ್ನಾಟಕ ನಾಗರಿಕ ಸೇವೆಗಳ (ನಡವಳಿಕೆ) ನಿಯಮಗಳು 2021 ರ ನಿಬಂಧನೆಗಳನ್ನು (Karnataka Civil Services Rules) ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಇಬ್ಬರು ಶಾಲಾ ಶಿಕ್ಷಕರನ್ನು ಅಮಾನತುಗೊಳಿಸಿರುವ ಘಟನೆ ಯಾದಗಿರಿಯಲ್ಲಿ (Yadgir) ನಡೆದಿದೆ. ಆರ್‌ಎಸ್‌ಎಸ್ ಮೆರವಣಿಗೆಯಲ್ಲಿ (RSS Patha Sanchalana) ಭಾಗವಹಿಸಿದ್ದಕ್ಕಾಗಿ ಹುಣಸಗಿಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಸಹಾಯಕ ಶಿಕ್ಷಕ ಗುರುರಾಜ್ ಜೋಶಿ ಮತ್ತು ಸುರಪುರ ತಾಲೂಕಿನ ಕುಪ್ಪಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅಣ್ಣಾ ಸಾಹೇಬ್ ದೇಶಮುಖ್ ಅವರನ್ನು ಅಮಾನತುಗೊಳಿಸಲಾಗಿದೆ.

ಗುರುರಾಜ್ ಜೋಶಿ ಮತ್ತು ಅಣ್ಣಾ ಸಾಹೇಬ್ ದೇಶಮುಖ್ ಅವರು ಇತ್ತೀಚೆಗೆ ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಭಾಗವಹಿಸಿದ್ದರು. ಈ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಅವರಿಬ್ಬರನ್ನು ಅಮಾನತು ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಖಾಲಿ ನಿವೇಶನ ಸ್ವಚ್ಛಗೊಳಿಸದಿದ್ದರೆ ಪಾಲಿಕೆಯಿಂದಲೇ ಸ್ವಚ್ಛತೆ: 25 ವರ್ಷಗಳ ಯಶಸ್ಸಿನ ಸಂಭ್ರಮ ಆಚರಣೆ

ಯಾದಗಿರಿ ಶಾಲಾ ಶಿಕ್ಷಣ ಉಪನಿರ್ದೇಶಕ ಚನ್ನಬಸಪ್ಪ ಮುಧೋಳ ಅವರು ಆಗಸ್ಟ್ 20 ರಂದು ಹುಣಸಗಿ ಪ್ರೌಢಶಾಲೆ ಶಿಕ್ಷಕ ಗುರುರಾಜ್ ಜೋಶಿ ಮತ್ತು ಸುರಪುರ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅಣ್ಣಾ ಸಾಹೇಬ್ ದೇಶಮುಖ್ ಅವರು ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಭಾಗವಹಿಸಿದ್ದು ಕರ್ತವ್ಯ ಲೋಪ ಮತ್ತು ಕರ್ನಾಟಕ ನಾಗರಿಕ ಸೇವೆಗಳ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಅಮಾನತು ಆದೇಶ ಹೊರಡಿಸಿದ್ದಾರೆ.

ಗುರುರಾಜ್ ಜೋಶಿ ಅವರು 2025ರ ಅಕ್ಟೋಬರ್ 12ರಂದು ವಿಜಯಪುರ ಜಿಲ್ಲೆಯ ತಾಳಿಕೋಟಿಯಲ್ಲಿ ನಡೆದ ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಭಾಗವಹಿಸಿದ್ದರು. ಇದಕ್ಕೆ ಸಂಬಂಧಿಸಿ ಪತ್ರಿಕೆಯೊಂದರಲ್ಲಿ ಅವರ ಛಾಯಾಚಿತ್ರ ಪ್ರಕಟವಾಗಿದೆ. ಈ ಕುರಿತು ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷ ಜುಮನ್ನ ಗುಡಿಮನಿ ಅವರು ದೂರು ಸಲ್ಲಿಸಿದರು. ಈ ಹಿನ್ನೆಲೆಯಲ್ಲಿ 2026ರ ಮಾರ್ಚ್ 13ರಂದು ಜೋಶಿ ಅವರಿಗೆ ಶೋಕಾಸ್ ನೊಟೀಸ್ ಜಾರಿಗೊಳಿಸಲಾಗಿತ್ತು.

ಇದಕ್ಕೆ ಸಂಬಂಧಿಸಿ ಲಿಖಿತ ವಿವರಣೆ ನೀಡಿದ್ದ ಜೋಶಿ, ಕಾರ್ಯಕ್ರಮವು ಭಾನುವಾರ ನಡೆದಿದೆ. ಇದು ಯಾವುದೇ ರಾಜಕೀಯ ಕಾರ್ಯಕ್ರಮವಲ್ಲ, ಸಾಂಸ್ಕೃತಿಕ ಕಾರ್ಯಕ್ರಮ ಎಂದು ಹೇಳಿದ್ದರು. ಆದರೆ ಇದನ್ನು ನಿಯಮಗಳ ಅಡಿಯಲ್ಲಿ ಸ್ವೀಕರಿಸಲು ಸಾಧ್ಯವಿಲ್ಲ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

Chikkaballapur News: ರೈತರ ಭೂ ಪ್ರವೇಶಕ್ಕೆ ಬ್ರೇಕ್‌: ಪೊಲೀಸರ ಬಲಪ್ರಯೋಗ; ಸಿಂಗಾಡಿಕದಿರೇನಹಳ್ಳಿ ಹೋರಾಟ ಮೊಟಕು

ಅಣ್ಣಾ ಸಾಹೇಬ್ ದೇಶಮುಖ್ ಅವರು 2025ರ ಅಕ್ಟೋಬರ್ 10ರಂದು ಹುಣಸಗಿಯಲ್ಲಿ ನಡೆದ ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಭಾಗವಹಿಸಿದ್ದರು. ಈ ಕುರಿತು ಜುಮನ್ನ ಗುಡಿಮನಿ ಅವರು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೂ ಶೋಕಾಸ್ ನೊಟೀಸ್ ಜಾರಿಗೊಳಿಸಲಾಗಿತ್ತು.

ಇದಕ್ಕೆ ಅಣ್ಣಾ ಸಾಹೇಬ್ ದೇಶಮುಖ್ ಅವರು ಕೂಡ ಇದು ಕೆಲಸದ ವೇಳೆ ನಡೆದ ಕಾರ್ಯಕ್ರಮವಲ್ಲ. ಅಲ್ಲದೇ ಯಾವುದೇ ರಾಜಕೀಯ ಕಾರ್ಯಕ್ರಮವು ಆಗಿರಲಿಲ್ಲ ಎಂದು ತಿಳಿಸಿದ್ದಾರೆ. ಶಿಕ್ಷಣ ಇಲಾಖೆ ಅವರ ಈ ವಿವರಣೆಯನ್ನು ತಿರಸ್ಕರಿಸಿವಿಚಾರಣೆ ಪೂರ್ಣಗೊಳ್ಳುವವರೆಗೆ ಅವರನ್ನು ಅಮಾನತುಗೊಳಿಸಿರುವುದಾಗಿ ತಿಳಿಸಿದೆ.

ವಿದ್ಯಾ ಇರ್ವತ್ತೂರು

View all posts by this author