ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

KJ George: ರಾಜೀನಾಮೆಗೆ ಮುಂದಾಗಿದ್ದ ಇಂಧನ ಸಚಿವ? ಸದನದಲ್ಲಿ ಕೆಜೆ ಜಾರ್ಜ್ ಹೇಳಿದ್ದೇನು?‌

ಇಂದು ನಡೆದ ವಿಶೇಷ ಅಧಿವೇಶದಲ್ಲಿ ಇಂಧನ ಸಚಿವ ಕೆಜೆ ಜಾರ್ಜ್​ ರಾಜೀನಾಮೆ ವದಂತಿ ವಿಚಾರವನ್ನ ವಿಪಕ್ಷ ನಾಯಕರು ಪ್ರಸ್ತಾಪ ಮಾಡಿದ್ದಾರೆ. ಇಲಾಖೆಯಲ್ಲಿ ಸಿಎಂ ಪುತ್ರನ ಹಸ್ತಕ್ಷೇಪಕ್ಕೆ ಬೇಸತ್ತು ಕೆಜೆ ಜಾರ್ಜ್ ಅವರು ರಾಜೀನಾಮೆ ಕೊಟ್ಟಿದ್ದಾರೆ ಎಂಬ ಸುದ್ದಿ ಬರುತ್ತಿದೆ. ಅದಕ್ಕಾಗಿ ಜಾರ್ಜ್ ಅವರೇ ಸ್ಪಷ್ಟೀಕರಣ ಕೊಡಬೇಕು ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್ ಒತ್ತಾಯಿಸಿದ್ದು, ಜಾರ್ಜ್‌ ಸ್ಪಷ್ಟನೆ ನೀಡಿದ್ದಾರೆ.

ಕೆಜೆ ಜಾರ್ಜ್

ಬೆಂಗಳೂರು, ಜ.29: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಪುತ್ರ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹಸ್ತಕ್ಷೇಪಕ್ಕೆ ಬೇಸತ್ತು ಸಚಿವ ಕೆಜೆ ಜಾರ್ಜ್ (KJ George) ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ಇದು ವಿಧಾನಸಭೆಯಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಜಾರ್ಜ್‌ ಅವರೇ ಸ್ಪಷ್ಟನೆಯನ್ನೂ ನೀಡಿ ವದಂತಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

ಈ ಬಗ್ಗೆ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಪ್ರತಿಪಕ್ಷ ನಾಯಕರು ಪ್ರಶ್ನೆ ಮಾಡಿದ್ದಾರೆ. ಇಂದು ನಡೆದ ವಿಶೇಷ ಅಧಿವೇಶದಲ್ಲಿ ಇಂಧನ ಸಚಿವ ಕೆಜೆ ಜಾರ್ಜ್​ ರಾಜೀನಾಮೆ ವದಂತಿ ವಿಚಾರವನ್ನ ವಿಪಕ್ಷ ನಾಯಕರು ಪ್ರಸ್ತಾಪ ಮಾಡಿದ್ದಾರೆ. ಇಲಾಖೆಯಲ್ಲಿ ಸಿಎಂ ಪುತ್ರನ ಹಸ್ತಕ್ಷೇಪಕ್ಕೆ ಬೇಸತ್ತು ಕೆಜೆ ಜಾರ್ಜ್ ಅವರು ರಾಜೀನಾಮೆ ಕೊಟ್ಟಿದ್ದಾರೆ ಎಂಬ ಸುದ್ದಿ ಬರುತ್ತಿದೆ. ಅದಕ್ಕಾಗಿ ಜಾರ್ಜ್ ಅವರೇ ಸ್ಪಷ್ಟೀಕರಣ ಕೊಡಬೇಕು ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್ ಒತ್ತಾಯಿಸಿದರು.

ಇದಕ್ಕೆ ಉತ್ತರ ನೀಡಿದ ಇಂಧನ ಸಚಿವ ಕೆಜೆ ಜಾರ್ಜ್, ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದು ​ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಮೇಲೆ ನನಗೆ ಸಂಪೂರ್ಣ ವಿಶ್ವಾಸ ಇದೆ. ಈ ವಿಚಾರಗಳೆಲ್ಲಾ ಸತ್ಯಕ್ಕೆ ದೂರವಾದ ಮಾತು. ಕೆಲವರು ಇದನ್ನೆಲ್ಲಾ ಸೃಷ್ಟಿ ಮಾಡ್ತಿದ್ದಾರೆ. ನಾನು ಯಾವುದೇ ರಾಜೀನಾಮೆ ಕೊಟ್ಟಿಲ್ಲ. ಸಂಪೂರ್ಣ ನಂಬಿಕೆ ಹಾಗೂ ವಿಶ್ವಾಸದಿಂದಲೇ ಸಿಎಂ ಸಿದ್ದರಾಮಯ್ಯ ಅವರ ಜೊತೆ ಇದ್ದೇವೆ ಎಂದು ಜಾರ್ಜ್ ಸ್ಪಷ್ಟನೆ ನೀಡಿದ್ದು, ರಾಜೀನಾಮೆ ವದಂತಿಗೆ ತೆರೆ ಎಳೆದಿದ್ದಾರೆ.

ಏನಿದು ವದಂತಿ?

ಇಂಧನ ಇಲಾಖೆಯಲ್ಲಿ ಯತೀಂದ್ರ ಹಸ್ತಕ್ಷೇಪದಿಂದ ನಡೆದ ಕೆಲ ಅಧಿಕಾರಿಗಳ ವರ್ಗಾವಣೆ ಹಾಗೂ ಅಮಾನತು ವಿಚಾರ ಸರ್ಕಾರದೊಳಗೆ ತೀವ್ರ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ಬೆಳವಣಿಗೆಯಿಂದ ಇಂಧನ ಸಚಿವ ಜಾರ್ಜ್ ಬೇಸತ್ತಿದ್ದರು. ಇಂಧನ ಇಲಾಖೆಯ ಕಾರ್ಯವೈಖರಿಯಲ್ಲಿ ಯತೀಂದ್ರ ಹಸ್ತಕ್ಷೇಪವಿದೆ ಎಂಬ ಆರೋಪಗಳ ನಡುವೆಯೇ ಈ ಬೆಳವಣಿಗೆ ವರದಿಯಾಗಿತ್ತು.

ಇಂಧನ ಇಲಾಖೆಯ ಕೆಲ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ಸಿಎಂ ಕಚೇರಿಯಿಂದ ಆದೇಶ ಹೊರಡಿಸಲಾಗಿತ್ತು. ಇದೇ ವೇಳೆ, ಕೆಲವು ಅಧಿಕಾರಿಗಳನ್ನು ಅಮಾನತುಗೊಳಿಸುವ ಬಗ್ಗೆ ಕ್ರಮವನ್ನೂ ಕೈಗೊಳ್ಳಲಾಗಿತ್ತು. ಈ ಬೆಳವಣಿಗೆಗಳಿಂದ ಅಸಮಾಧಾನಗೊಂಡ ಕೆಜೆ ಜಾರ್ಜ್, ‘ಮಂತ್ರಿಯಾಗಿ ನನ್ನ ಮಾತಿಗೆ ಬೆಲೆ ಇಲ್ಲದಿದ್ದರೆ ನಾನು ಏಕೆ ಈ ಸರ್ಕಾರದಲ್ಲಿ ಇರಬೇಕು’ ಎಂದು ಪ್ರಶ್ನಿಸಿದ್ದರು. ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ನೀಡಿದ್ದರು ಎಂದು ಸುದ್ದಿ ಹರಡಿತ್ತು.

ಜಾರ್ಜ್ ಅವರು ‘ನಾನು ನಿಮ್ಮ ಜತೆಗೆ ಇರುತ್ತೇನೆ, ಆದರೆ ಸರ್ಕಾರದಲ್ಲಿ ಇರುವುದಿಲ್ಲ’ ಎಂದು ಹೇಳಿದ್ದರು. ಅಲ್ಲದೆ, ಘಟನೆಯಿಂದ ಮನನೊಂದು ಸಂಪುಟ ಸಭೆಗೆ ಸಹ ಗೈರಾಗಿದ್ದರು. ಘಟನೆಯ ಗಂಭೀರತೆ ಅರಿತ ಸಿಎಂ ಸಿದ್ದರಾಮಯ್ಯ ಆಪ್ತರು ತಕ್ಷಣ ಮಧ್ಯ ಪ್ರವೇಶಿಸಿದ್ದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಎಎಸ್ ಪೊನ್ನಣ್ಣ ಮೂಲಕ ಕೆಜೆ ಜಾರ್ಜ್ ಅವರೊಂದಿಗೆ ಸಂಧಾನ ನಡೆಸಲಾಗಿತ್ತು. ಜಾರ್ಜ್ ಅವರ ಅಸಮಾಧಾನವನ್ನು ಆಲಿಸಿದ ಪೊನ್ನಣ್ಣ ಮಾತುಕತೆ ಮೂಲಕ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು ಎಂದೂ ಹೇಳಲಾಗಿದೆ.

ವಿಶ್ವ ಆರ್ಥಿಕ ವೇದಿಕೆ ಸಭೆ; ಜಾಗತಿಕವಾಗಿ AI ಚಾಲಿತ ಶುದ್ಧ ಇಂಧನ ಕಾರ್ಯತಂತ್ರದ ಅಗತ್ಯ ಪ್ರತಿಪಾದಿಸಿದ ಜೋಶಿ

ಹರೀಶ್‌ ಕೇರ

View all posts by this author