ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Zameer ahmed khan: ದಾವಣಗೆರೆ ದಂಗಲ್:‌ ಜಮೀರ್‌ ಅಹಮದ್‌ ರಾಜೀನಾಮೆ ಬಾಂಬ್

ಕರ್ನಾಟಕದ ದಾವಣೆಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ವಿಧಾನಸಭಾ ಉಪಚುನಾವಣೆ ಕುರಿತು ಕಾಂಗ್ರೆಸ್ ಸತತ ಸಭೆ ನಡೆಸುತ್ತಿದೆ. ರಾಜ್ಯ ನಾಯಕರ ಜೊತೆ ಸಭೆ ನಡೆಸುತ್ತಿರುವ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಮುಂದೆ ನಾಯಕರು ವಿವಿದ ಭೇಡಿಕೆ ಮುಂದಿಟ್ಟಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಮುಸ್ಲಿಮ್ ನಾಯಕರಿಗೆ ನೀಡಬೇಕು ಎಂದು ಜಮೀರ್ ಪಟ್ಟು ಹಿಡಿದಿದ್ದಾರೆ.

ದಾವಣಗೆರೆ ದಂಗಲ್:‌ ಜಮೀರ್‌ ಅಹಮದ್‌ ರಾಜೀನಾಮೆ ಬಾಂಬ್

ರಣದೀಪ್‌ ಸುರ್ಜೇವಾಲ, ಜಮೀರ್‌ ಅಹಮದ್‌ ಖಾನ್ -

ಹರೀಶ್‌ ಕೇರ
ಹರೀಶ್‌ ಕೇರ Mar 21, 2026 2:29 PM

ಬೆಂಗಳೂರು‌, ಮಾ.21: ದಾವಣೆಗೆರೆ ದಕ್ಷಿಣ (Davanagere South) ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ (By Election) ಟಿಕೆಟ್ ಘೋಷಣೆ ವಿಚಾರವಾಗಿ ನಡೆದ ಕಾಂಗ್ರೆಸ್‌ (Congress) ಪಕ್ಷದ ಸಭೆಯಲ್ಲಿ ಶಾಸಕ, ಸಚಿವ ಜಮೀರ್ ಅಹಮ್ಮದ್ ಖಾನ್‌ (Zameer ahmed khan) ರಾಜೀನಾಮೆ ಬಾಂಬ್ ಸಿಡಿಸಿದ್ದಾರೆ. ರಾಜ್ಯ ಕಾಂಗ್ರೆಸ್‌ನಲ್ಲಿ ಇದು ಕೋಲಾಹಲ ಸೃಷ್ಟಿಸಿದೆ.

ಕರ್ನಾಟಕದ ದಾವಣೆಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ವಿಧಾನಸಭಾ ಉಪಚುನಾವಣೆ ಕುರಿತು ಕಾಂಗ್ರೆಸ್ ಸತತ ಸಭೆ ನಡೆಸುತ್ತಿದೆ. ಟಿಕೆಟ್ ಘೋಷಣೆ ವಿಚಾರವಾಗಿ ತೀವ್ರ ಗೊಂದಲ, ಜಟಾಪಟಿ ಏರ್ಪಟ್ಟಿದೆ. ಹೀಗಾಗಿ ನಿನ್ನೆ ರಾತ್ರಿಯಿಂದ ರಾಜ್ಯ ನಾಯಕರ ಜೊತೆ ಸಭೆ ನಡೆಸುತ್ತಿರುವ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಮುಂದೆ ನಾಯಕರು ವಿವಿದ ಭೇಡಿಕೆ ಮುಂದಿಟ್ಟಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಮುಸ್ಲಿಮ್ ನಾಯಕರಿಗೆ ನೀಡಬೇಕು ಎಂದು ಜಮೀರ್ ಪಟ್ಟು ಹಿಡಿದಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚಿದೆ. ನಮ್ಮ ಸಮುದಾಯಕ್ಕೆ ಟಿಕೆಟ್ ನೀಡಲು ಮೌಲ್ವಿಗಳು, ಮುಸ್ಲಿಂ ಪ್ರಮುಖರು ಆಗ್ರಹಿಸಿದ್ದಾರೆ. ಹೀಗಾಗಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಬೇಕು. ಇಲ್ಲದಿದ್ದರೆ ರಾಜೀನಾಮೆ ನೀಡುವುದಾಗಿ ಜಮೀರ್ ಅಹಮ್ಮದ್ ಹೇಳಿದ್ದಾರೆ. ರಣದೀಪ್ ಸಿಂಗ್ ಸುರ್ಜೆವಾಲ ಮುಂದೆ ಜಮೀರ್ ರಾಜೀನಾಮೆ ಅಸ್ತ್ರ ಪ್ರಯೋಗಿಸಿದ್ದಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ; ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು ನಾಮಪತ್ರ ಸಲ್ಲಿಕೆ!

ಜಮೀರ್ ರಾಜೀನಾಮೆ ಅಸ್ತ್ರ ಪ್ರಯೋಗಿಸುತ್ತಿದ್ದಂತೆ ರಣದೀಪ್ ಸಿಂಗ್ ಸುರ್ಜೆವಾಲ ಉತ್ತರಿಸಿದ್ದಾರೆ. ಕಾಂಗ್ರೆಸ್ ಪಕ್ಷ ಒಂದು ಸಮದಾಯವನ್ನು ನೆಚ್ಚಿಕೊಂಡಿಲ್ಲ. ಎಲ್ಲಾ ಸಮುದಾಯ ನಮ್ಮ ಜೊತೆಗಿದೆ. ಟಿಕೆಟ್ ಸೂಕ್ತ ಅಭ್ಯರ್ಥಿಗೆ ನೀಡಲಾಗುತ್ತದೆ ಎಂದು ಸುರ್ಜೆವಾಲಾ ಹೇಳಿದ್ದಾರೆ.

ಎಲೆಕ್ಷನ್ ಉಸ್ತುವಾರಿ ಸಭೆಯಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ ಈಗಾಗಲೇ ನಾಪತ್ರ ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್ ಇನ್ನೂ ಟಿಕೆಟ್ ಘೋಷಣೆ ಮಾಡಿಲ್ಲ, ಬಿ ಫಾರಂ ಹಂಚಿಕೆ ಮಾಡಿಲ್ಲ. ಇದಕ್ಕೂ ಮೊದಲೇ ಶಾಮನೂರು ಸಮರ್ಥ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ಮುಸ್ಲಿಂ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಸುರ್ಜೆವಾಲ ಕೂಡ ಅಸಮಧಾನ ವ್ಯಕ್ತಪಡಿಸಿದ್ದಾರೆ.

Karnataka Assembly Bypoll: ವಿಧಾನಸಭೆ ಉಪಚುನಾವಣೆ: ಬಾಗಲಕೋಟೆಗೆ ವೀರಣ್ಣ, ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ್ ಟಿ. ಬಿಜೆಪಿ ಅಭ್ಯರ್ಥಿ