Thursday, 1st December 2022

ಕಾಶ್ಮೀರದ ಮೂವರು ವಿದ್ಯಾರ್ಥಿಗಳ ಬಂಧನ

ಆಗ್ರಾ: ಕಳೆದ ಅ.24ರಂದು ನಡೆದ ಟಿ20 ವಿಶ್ವಕಪ್ ನಲ್ಲಿ ಭಾರತ ವಿರುದ್ಧ ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ ಕಾಶ್ಮೀರದ ಮೂವರು ವಿದ್ಯಾರ್ಥಿಗಳನ್ನು ಆಗ್ರಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಮೂವರು ಕಾಶ್ಮೀರ ವಿದ್ಯಾರ್ಥಿಗಳನ್ನು ಇನಾಯತ್ ಅಲ್ತಫ್ ಶೈಖ್, ಶೌಕತ್ ಅಹ್ಮದ್ ಗನಿ ಮತ್ತು ಅರ್ಶಿದ್ ಯೂಸಫ್ ಎಂದು ಗುರುತಿಸಲಾಗಿದೆ ಎಂದು ಆಗ್ರಾ ಎಸ್ಪಿ ವಿಕಾಸ್ ಕುಮಾರ್ ತಿಳಿಸಿದ್ದಾರೆ. ಮೂವರು ವಿದ್ಯಾರ್ಥಿಗಳು ಬಿಚ್ಪುರಿಯ ಆರ್ ಬಿಎಸ್ ಕಾಲೇಜಿನಲ್ಲಿ ಅಧ್ಯಯನ ನಡೆಸುತ್ತಿದ್ದಾರೆ.