Friday, 12th August 2022

ಕಾಂಗ್ರೆಸ್ ಮುಖಂಡ ಕೀರ್ತಿ ಆಜಾದ್ ಟಿಎಂಸಿಗೆ ಸೇರ್ಪಡೆ

ನವದೆಹಲಿ: ಕಾಂಗ್ರೆಸ್ ಮುಖಂಡ ಕೀರ್ತಿ ಆಜಾದ್ ಅವರು ಮಂಗಳವಾರ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‍ಗೆ ಸೇರ್ಪಡೆಗೊಳ್ಳಲಿದ್ದಾರೆ.

1983ರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದ ಆಜಾದ್ 2015ರಲ್ಲಿ ಅಂದಿನ ಕೇಂದ್ರ ಹಣಕಾಸು ಸಚಿವ ಅರುಣ್‍ ಜೇಟ್ಲಿ ಅವರು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಮಂಡಳಿಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಬಹಿರಂಗವಾಗಿ ಟೀಕಿಸಿದ ಹಿನ್ನೆಲೆಯಲ್ಲಿ 2015ರ ಡಿಸೆಂಬರ್‍ನಲ್ಲಿ ಬಿಜೆಪಿಯಿಂದ ಅಮಾನತುಗೊಂಡಿ ದ್ದರು.

ಬಳಿಕ ಆಜಾದ್ ಅವರು 2018ರಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದರು. ಅವರು ಬಿಹಾರದ ದರ್ಭಾಂಗಾ ಕ್ಷೇತ್ರದಿಂದ ಮೂರು ಬಾರಿ ಲೋಕ ಸಭೆಗೆ ಆಯ್ಕೆಗೊಂಡಿದ್ದರು. 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಅವರು ಬಿಜೆಪಿ ಟಿಕೆಟ್ ಮೇಲೆ ಸ್ಪರ್ಧಿಸಿದ್ದರು.