ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕೊಡಗು

ದುಬಾರೆ ಆನೆ ಶಿಬಿರ ದುರಂತ; ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ನಿಷೇಧ

ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ನಿಷೇಧ

Sakrebyle Elephant Camp: ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರಕ್ಕೆ ನಾಳೆಯಿಂದ (ಮೇ 22) ತಾತ್ಕಾಲಿಕವಾಗಿ ಪ್ರವೇಶ ನಿಷೇಧಿಸಲಾಗಿದೆ. ದುಬಾರೆ ಆನೆ ಬಿಡಾರದಲ್ಲಿ ಕಾವೇರಿ ನದಿಯಲ್ಲಿ ಸ್ನಾನ ಮಾಡಿಸುವ ವೇಳೆ ಎರಡು ಸಾಕಾನೆಗಳ ನಡುವೆ ನಡೆದ ಕಾದಾಟದಲ್ಲಿ ತಮಿಳುನಾಡಿನ ಮಹಿಳೆ ಆನೆಯಡಿ ಸಿಲುಕಿ ಮೃತಪಟ್ಟ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.

ಮಾರ್ತಾಂಡನನ್ನು ಕೊಂದ ಕಂಜನ್ ಆನೆಗೆ ದಸರಾದಿಂದ ಶಾಶ್ವತ ನಿಷೇಧ

ಮಾರ್ತಾಂಡನನ್ನು ಕೊಂದ ಕಂಜನ್ ಆನೆಗೆ ದಸರಾದಿಂದ ಶಾಶ್ವತ ನಿಷೇಧ

ದುಬಾರೆ ಆನೆ ಶಿಬಿರದಲ್ಲಿ ಮಾರ್ತಾಂಡ ಆನೆ ಸಾವಿಗೆ ಕಾರಣವಾದ ಕಂಜನ್ ಆನೆಯನ್ನು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಿಂದ ಶಾಶ್ವತವಾಗಿ ನಿಷೇಧಿಸಲಾಗಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ಕಟ್ಟುನಿಟ್ಟಿನ ಆದೇಶದ ಮೇರೆಗೆ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

Elephant Marthanda Dies: ದುಬಾರೆಯಲ್ಲಿ ಸಾಕಾನೆಗಳ ಕಾಳಗ; ಗಾಯಗೊಂಡಿದ್ದ ʼಮಾರ್ತಾಂಡʼ ಆನೆ ಚಿಕಿತ್ಸೆ ಫಲಿಸದೆ ಸಾವು

ದುಬಾರೆ ಸಾಕಾನೆಗಳ ಕಾಳಗ; ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು

ದುಬಾರೆ ಆನೆಗಳ ಶಿಬಿರದಲ್ಲಿ ಸಾಕಾನೆಗಳ ಕಾದಾಟದ ವೇಳೆ ಮಾರ್ತಾಂಡ ಆನೆ ಗಂಭೀರವಾಗಿ ಗಾಯಗೊಂಡಿತ್ತು. ಕಂಜನ್ ಆನೆಯು ಚೂಪಾದ ದಂತಗಳಿಂದ ಮಾರ್ತಾಂಡನ ಹೊಟ್ಟೆ, ಕಿವಿಯ ಹಿಂಭಾಗ ಹಾಗೂ ಕಾಲುಗಳಿಗೆ ತಿವಿದು ಗಂಭೀರ ಗಾಯಗೊಳಿಸಿತ್ತು. ಇದರಿಂದ ಚಿಕಿತ್ಸೆ ಫಲಿಸದೆ ಮಾರ್ತಾಂಡ ಮೃತಪಟ್ಟಿದೆ.

Dubare Elephant Camp: ಕೊಡಗಿನ ದುಬಾರೆಯಲ್ಲಿ ಘೋರ ಘಟನೆ; ಸಾಕಾನೆಗಳ ಕಾದಾಟದ ವೇಳೆ ಸಿಲುಕಿ ಮಹಿಳೆ ಸಾವು!, Video

ದುಬಾರೆಯಲ್ಲಿ ಸಾಕಾನೆಗಳ ಕಾದಾಟದ ವೇಳೆ ಮಹಿಳೆ ಸಾವು!

ಕೊಡಗಿನ ದುಬಾರೆಯ ಕಾವೇರಿ ನದಿಯಲ್ಲಿ ಆನೆಗಳಿಗೆ ಸ್ನಾನ ಮಾಡಿಸಲಾಗುತ್ತಿತ್ತು. ಈ ವೇಳೆ 'ಕಂಜನ್' ಎಂಬ ಆನೆಯು ಮತ್ತೊಂದು ಆನೆಯಾದ 'ಮಾರ್ತಾಂಡ'ನಿಗೆ ಜೋರಾಗಿ ತಿವಿದಿದೆ. ಆನೆಗಳ ನಡುವೆ ಇದ್ದಕ್ಕಿದ್ದಂತೆ ಕಾದಾಟ ಶುರುವಾಗಿದ್ದು, ಈ ವೇಳೆ ಆನೆಯಡಿ ಸಿಲುಕಿ ತಮಿಳುನಾಡು ಮೂಲದ ಪ್ರವಾಸಿ ಮಹಿಳೆ ಮೃತಪಟ್ಟಿದ್ದಾರೆ.

Kodagu News: ಕೊಡಗಿನ ಕಾಡಿನಲ್ಲಿ ಅಕ್ರಮವಾಗಿ ಚರ್ಚ್ ನಿರ್ಮಾಣ; ಉದ್ಘಾಟನೆಗೆ ತಮಿಳುನಾಡಿನಿಂದ ಬಂದಿದ್ದ 40ಕ್ಕೂ ಹೆಚ್ಚು ಮಂದಿ ವಶಕ್ಕೆ

ಕೊಡಗಿನ ಕಾಡಿನಲ್ಲಿ ಅಕ್ರಮವಾಗಿ ಚರ್ಚ್ ನಿರ್ಮಾಣ; 40 ಮಂದಿ ವಶಕ್ಕೆ

ಕೊಡಗು ಜಿಲ್ಲೆಯ ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರೂರಿನ ಗಿರಿಜನರಿಂದ ಕಾಡಿನಲ್ಲಿ ಅಕ್ರಮವಾಗಿ ಚರ್ಚ್ ನಿರ್ಮಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಉದ್ಘಾಟನೆ ಕಾರ್ಯಕ್ರಮಕ್ಕೆ ತಮಿಳುನಾಡಿನಿಂದ ಜನರನ್ನು ಕರೆಸಲಾಗಿತ್ತು. ಈ ವೇಳೆ ಪೊಲೀಸರು ಸ್ಥಳಕ್ಕೆ ಆಗಮಿಸಿ, 40ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

MLA A S Ponnanna: ಪ್ರಧಾನಿ ಮೋದಿ ಇಂಧನ ಮಿತವ್ಯಯ ಕರೆಗೆ ಕಾಂಗ್ರೆಸ್‌ ಶಾಸಕ ಪೊನ್ನಣ್ಣ ಸ್ಪಂದನೆ; ಬೆಂಗಾವಲು ವಾಹನ ಕಡಿತ

ಕೈ ಶಾಸಕ ಪೊನ್ನಣ್ಣ ಬೆಂಗಾವಲು ವಾಹನ ಕಡಿತ; ಪ್ರಧಾನಿ ಕರೆಗೆ ಸ್ಪಂದನೆ

Fuel conservation: ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಭಾರತದಲ್ಲಿ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆ ವಿರಾಜಪೇಟೆ ಕಾಂಗ್ರೆಸ್‌ ಶಾಸಕ ಎ.ಎಸ್‌.ಪೊನ್ನಣ್ಣ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ತಮಗೆ ನೀಡಲಾಗಿರುವ ಬೆಂಗಾವಲು ವಾಹನಗಳನ್ನು ಕಡಿತಗೊಳಿಸಲು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿದ್ದಾರೆ.

ಚಲಿಸುತ್ತಿದ್ದ ಬಸ್‌ನಲ್ಲಿ ಚಾಲಕನಿಗೆ ಹೃದಯಾಘಾತ; ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಚಲಿಸುತ್ತಿದ್ದ ಬಸ್‌ನಲ್ಲಿ ಚಾಲಕನಿಗೆ ಹೃದಯಾಘಾತ!

ಚಲಿಸುತ್ತಿದ್ದ ಬಸ್‌ನಲ್ಲಿ ಚಾಲಕನಿಗೆ ಹೃದಯಾಘಾತವಾದ ಘಟನೆ ಮಡಿಕೇರಿ ಸಮೀಪದ ತಾಳತ್ ಮನೆ ಬಳಿ ನಡೆದಿದೆ. ಬೆಂಗಳೂರಿನಿಂದ ಹೊರಟ ಖಾಸಗಿ ಬಸ್ ಮಡಿಕೇರಿ ಸಮೀಪದ ತಲುಪುತ್ತಿದ್ದಂತೆ ಚಾಲಕನಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ಪರಿಣಾಮ ಬಸ್ ರಸ್ತೆ ಪಕ್ಕಕ್ಕೆ ವಾಲಿದೆ.

Kodagu News: ಮಡಿಕೇರಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಶಿಕ್ಷಕಿ ಆತ್ಮಹತ್ಯೆ

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Physical Abuse: ಅಮೆರಿಕದ ಮಹಿಳೆ ಮೇಲೆ ದೌರ್ಜನ್ಯ, ಕೊಡಗಿನ ಹೋಂಸ್ಟೇ ಪರವಾನಗಿ ರದ್ದು, ಇಬ್ಬರ ಬಂಧನ

ಅಮೆರಿಕದ ಮಹಿಳೆ ಮೇಲೆ ದೌರ್ಜನ್ಯ, ಕೊಡಗಿನ ಹೋಂಸ್ಟೇ ಪರವಾನಗಿ ರದ್ದು

ಲೈಂಗಿಕ ದೌರ್ಜನ್ಯ ಘಟನೆಯ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಪ್ರವಾಸೋದ್ಯಮ ಇಲಾಖೆಯು, ಪ್ರವಾಸಿಗರ ಸುರಕ್ಷತೆಯಲ್ಲಿ ವಿಫಲವಾದ ಮತ್ತು ಅಕ್ರಮ ಎಸಗಿದ ಹಿನ್ನೆಲೆಯಲ್ಲಿ 2024ರ ಜನವರಿಯಲ್ಲಷ್ಟೇ ಪರವಾನಗಿ ಪಡೆದಿದ್ದ ಈ ಹೋಂಸ್ಟೇಯನ್ನು ಬಂದ್ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ.

Physical Abuse: ಕೊಡಗಿನ ಹೋಮ್‌ಸ್ಟೇಯಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ, ಇಬ್ಬರ ಬಂಧನ

ಕೊಡಗಿನ ಹೋಮ್‌ಸ್ಟೇಯಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ, ಇಬ್ಬರ ಬಂಧನ

ಅಮೆರಿಕದ ವಾಶಿಂಗ್ಟನ್ ಮೂಲದ ಮಹಿಳೆ ಏಪ್ರಿಲ್ 19ರಂದು ದೇವಿ ವಿಲ್ಲಾ ಎಂಬ ಹೋಂಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ವೇಳೆ, ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Actor Harish Death: ಕೊಡಗಿನಲ್ಲಿ ಭೀಕರ ಅಪಘಾತ; ಟ್ಯಾಂಕರ್‌ಗೆ ಕಾರು ಡಿಕ್ಕಿಯಾಗಿ ಚಿತ್ರನಟ ಹರೀಶ್‌ ಸಾವು

ಕೊಡಗಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಚಿತ್ರನಟ ಹರೀಶ್‌ ಸಾವು

Sandalwood News: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಆನೆಕಾಡು ಬಳಿ ನಡೆದ ಅಪಘಾತದಲ್ಲಿ ಚಲನಚಿತ್ರ ನಟ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Coorg News: ತಡಿಯಂಡಮೋಳ್‌ ಚಾರಣಕ್ಕೆ ಹೋದ ಯುವತಿ ನಾಪತ್ತೆ

ತಡಿಯಂಡಮೋಳ್‌ ಚಾರಣಕ್ಕೆ ಹೋದ ಯುವತಿ ನಾಪತ್ತೆ

ಆನ್‌ಲೈನ್‌ನಲ್ಲಿ ಬುಕ್ಕಿಂಗ್ ಮಾಡಿ ಬಂದಿದ್ದ ಶರಣ್ಯ ಒಬ್ಬರೇ ಬಂದಿದ್ದರು. ಈ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಇರುವುದರಿಂದ ಬೇರೆ ಪ್ರವಾಸಿಗರ ಜೊತೆಯಲ್ಲಿ ಕಳುಹಿಸಲಾಗಿದೆ. ಬೆಟ್ಟಕ್ಕೆ ತೆರಳಿದ್ದ ಇತರ ಪ್ರವಾಸಿಗರು ಹಿಂತಿರುಗಿ ಬಂದರೂ ಶರಣ್ಯ ಹಿಂತಿರುಗಿ ಬಾರದ ಕಾರಣ ಅರಣ್ಯ ಇಲಾಖೆ ಸಿಬ್ಬಂದಿಗೆ ಸ್ಥಳೀಯರು ವಿಷಯ ತಿಳಿಸಿದ್ದಾರೆ.

Elephant attack in Madikeri: ಮಡಿಕೇರಿಯಲ್ಲಿ ಆನೆ ದಾಳಿಯಿಂದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಾವು

ಮಡಿಕೇರಿಯಲ್ಲಿ ಆನೆ ದಾಳಿಯಿಂದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಾವು

Elephant attack: ಮಡಿಕೇರಿಯ ಸಂತ ಮೈಕೆಲ್ ಶಾಲೆಯ ಪ್ರಥಮ ಪಿಯುಸಿ ವಿದ್ಯಾರ್ಥಿನಿ, ಕಾಲೇಜು ಮುಗಿಸಿ ಸಂಜೆ ಮನೆಗೆ ಹೋಗುವಾಗ ಕಾಡಾನೆ ದಾಳಿ ಮಾಡಿದೆ. ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾಳೆ. ಮೃತ ಬಾಲಕಿ ಕುಟುಂಬಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Assault case: ಕೊಡಗಿನಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ, ಒಬ್ಬನ ಬಂಧನ

ಕೊಡಗಿನಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ, ಒಬ್ಬನ ಬಂಧನ

ಆರೋಪಿಗಳ ಶೀಘ್ರ ಬಂಧನಕ್ಕೆ ಹಿಂದೂ ಪರ ಸಂಘಟನೆಗಳು (Hindu Organizations) ಆಗ್ರಹಿಸಿವೆ. ರಾಶೀದ್ ಸಿದ್ದಿಕ್, ಸುಹೇಲ್ ಹಾಗೂ ನಾಫಿ ಎಂಬವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ನಾಲ್ವರ ಪೈಕಿ ಸುಹೇಲ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

Virajpet MLA A S Ponnanna Interview: ನಾಯಕತ್ವದ ಬಗ್ಗೆ ಸಿಎಂ-ಡಿಸಿಎಂ ಮಧ್ಯೆ  ಚರ್ಚೆಯಾಗಿದೆ

ನಾಯಕತ್ವದ ಬಗ್ಗೆ ಸಿಎಂ-ಡಿಸಿಎಂ ಮಧ್ಯೆ ಚರ್ಚೆಯಾಗಿದೆ

ಕಾವೇರಿ, ಕೃಷ್ಣಾ, ಮುಡಾ, ವಾಲ್ಮೀಕಿ ಸೇರಿದಂತೆ ಅನೇಕ ಕಾನೂನು ಸಮಸ್ಯೆಗಳನ್ನು ಸುಲಭ ವಾಗಿ ಪರಿಹರಿಸಬೇಕು. ಕಠಿಣ ಮಾಡಬಾರದು. ಸಮಸ್ಯೆಗಳನ್ನು ಜನರ ಹಿತದೃಷ್ಟಿಯಿಂದ ಕಾನೂನಾತ್ಮಕಾಗಿ ನೋಡಬೇಕು. ಇದರಿಂದ ಯಾವುದೇ ಟ್ರಬಲ್ ಶೂಟ್ ಮಾಡಬಹುದು. ಆದ್ದರಿಂದ ಎಲ್ಲವನ್ನೂ ರಾಜಕೀಯವಾಗಿ ಯೋಚಿಸಬಾರದು.

ಸಿ.ಜೆ. ರಾಯ್‌ ಬೆನ್ನಲ್ಲೇ ಕರ್ನಾಟಕದ ಮತ್ತೊಬ್ಬ ಉದ್ಯಮಿ ಕೇರಳದಲ್ಲಿ ಆತ್ಮಹತ್ಯೆ; ಸಾಲ ಕೊಟ್ಟಿದ್ದೇ ಮುಳುವಾಯ್ತು

ಕರ್ನಾಟಕದ ಉದ್ಯಮಿ ಕೇರಳದಲ್ಲಿ ಆತ್ಮಹತ್ಯೆ; ಕಾರಣವೇನು?

Kodagu News: ಕರ್ನಾಟಕ ಮೂಲದ ಉದ್ಯಮಿಯೊಬ್ಬರು ಕೇರಳದ ವಯನಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಕೊಡಗಿನ ಪೊನ್ನಂಪೇಟೆಯ ಕುಟ್ಟ ಗ್ರಾಮದ ನಿವಾಸಿ ಉದ್ಯಮಿ ಸಜೀರ್ ಎಂದು ಗುರುತಿಸಲಾಗಿದೆ. ಕಾರಿಗೆ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪತ್ನಿ ಮಕ್ಕಳನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಹಲವು ಯುವತಿಯರೊಂದಿಗೆ ರಾಸಲೀಲೆ ವಿಡಿಯೊ ವೈರಲ್‌; ಕೊಡಗಿನ ಮುಸ್ಲಿಂ ಯುವಕ ಆರೆಸ್ಟ್‌

ಯುವತಿಯರೊಂದಿಗೆ ರಾಸಲೀಲೆ ವಿಡಿಯೊ ವೈರಲ್‌; ಮುಸ್ಲಿಂ ಯುವಕ ಆರೆಸ್ಟ್‌

ಕೊಡಗಿನ ಆರೋಪಿ ಯುವಕನು ವಿವಿಧ ಯುವತಿಯರೊಂದಿಗೆ ಕಾಮಕೇಳಿ ನಡೆಸಿ, ಖಾಸಗಿ ಕ್ಷಣಗಳನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾನೆ. ಈ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಈ ಬಗ್ಗೆ ಜಿಲ್ಲೆಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಸದ್ಯ ಯುವಕನನ್ನು ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

PM Narendra Modi: ಪ್ರಧಾನಿ ಮೋದಿಗೆ ಅವಹೇಳನ, ಕೊಡಗಿನಲ್ಲಿ ಮೂವರ ಸೆರೆ

ಪ್ರಧಾನಿ ಮೋದಿಗೆ ಅವಹೇಳನ, ಕೊಡಗಿನಲ್ಲಿ ಮೂವರ ಸೆರೆ

ಸ್ಪೈಸಸ್ ಅಂಗಡಿಯಲ್ಲಿ ಕುಳಿತು ಆರೋಪಿಗಳು ವಿಡಿಯೋ ಮಾಡಿದ್ದರು. ಅವಾಚ್ಯ ಪದಗಳಿಂದ ಪ್ರಧಾನಿ ನರೇಂದ್ರ ಮೋದಿಯವರನ್ನು (PM Narendra Modi) ಆರೋಪಿಗಳು ನಿಂದಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಮೂವರ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ಮಡಿಕೇರಿ ನಗರ ಠಾಣೆಗೆ ಕೊಡಗು ಜಿಲ್ಲಾ ಬಿಜೆಪಿ ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸಿ ಮೂವರು ಆರೋಪಿಗಳನ್ನು ಆರೆಸ್ಟ್ ಮಾಡಿದ್ದಾರೆ.

Karnataka Weather: ಹವಾಮಾನ ವರದಿ; ನಾಳೆ ದಕ್ಷಿಣ ಕನ್ನಡ, ಉಡುಪಿ ಸೇರಿ ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ ನಿರೀಕ್ಷೆ

ನಾಳೆ ದಕ್ಷಿಣ ಕನ್ನಡ, ಉಡುಪಿ ಸೇರಿ ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಒಣ ಹವೆ ಮುಂದುವರಿದಿದೆ. ಆದರೆ, ನ.19ರಂದು ದಕ್ಷಿಣ ಕನ್ನಡ, ಉಡುಪಿ ಸೇರಿ ಕೆಲ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಹವಾಮಾನ ಹೇಗಿರಲಿದೆ ಎಂಬ ಕುರಿತ ವರದಿ ಇಲ್ಲಿ ನೀಡಲಾಗಿದೆ.

Karnataka Weather: ಇಂದಿನ ಹವಾಮಾನ; ಮೈಸೂರು ಸೇರಿ ಈ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

ಇಂದಿನ ಹವಾಮಾನ; ಮೈಸೂರು ಸೇರಿ ಈ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆ. ಮತ್ತು 19 ಡಿಗ್ರಿ ಸೆ. ಇರಲಿದೆ.

Karnataka Weather: ನಾಳೆ ಕೊಡಗು, ಚಾಮರಾಜನಗರ ಸೇರಿ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ

ನಾಳೆ ಕೊಡಗು ಸೇರಿ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆ. ಮತ್ತು 19 ಡಿಗ್ರಿ ಸೆ. ಇರಬಹುದು.

Karnataka Weather: ಹವಾಮಾನ ವರದಿ; ಇಂದು ಮೈಸೂರು, ಚಾಮರಾಜನಗರ ಸೇರಿ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆ ನಿರೀಕ್ಷೆ

ಇಂದು ಮೈಸೂರು, ಚಾಮರಾಜನಗರ ಸೇರಿ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆ. ಮತ್ತು 20 ಡಿಗ್ರಿ ಸೆ. ಆಗಿರಬಹುದು.

Karnataka Weather: ಇಂದಿನ ಹವಾಮಾನ; ಮಲೆನಾಡು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಇಂದು ಮಲೆನಾಡು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗು (Weather forecast) ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆ. ಮತ್ತು 20 ಡಿಗ್ರಿ ಸೆ. ಆಗಿರಬಹುದು.

Karnataka Weather: ಹವಾಮಾನ ವರದಿ; ಇಂದು ಬೆಂಗಳೂರು, ಮೈಸೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ನಿರೀಕ್ಷೆ

ಇಂದು ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ (Karnataka Weather Report) ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿಗ್ರಿ ಸೆ. ಮತ್ತು 19 ಡಿಗ್ರಿ ಸೆ. ಇರುವ ಸಾಧ್ಯತೆ ಇದೆ.

Loading...