ರಾಸಾಯನಿಕ ಬಳಸಿ ನಕಲಿ ಹಾಲು ತಯಾರಿಕೆ ಜಾಲ ಪತ್ತೆ, 8 ಮಂದಿ ಬಂಧನ
ಕೆಜಿಎಫ್ ನಗರದ ಬಳ್ಳಗೆರೆ ಹೊರವಲಯದ ಗ್ರಾಮದ ತೋಟದ ಮನೆಯಲ್ಲಿ ಪಾಮ್ ಆಯಿಲ್ ಹಾಗೂ ರಾಸಾಯನಿಕ ವಸ್ತುಗಳನ್ನು ಉಪಯೋಗಿಸಿಕೊಂಡು ಅಕ್ರಮವಾಗಿ ನಕಲಿ ಹಾಲು ತಯಾರಿಕೆ ಮಾಡಲಾಗುತ್ತಿದೆ ಎಂಬ ಮಾಹಿತಿ ಪಡೆದ ಅಂಡರ್‌ಸನ್ ಪೇಟೆ ಪೊಲೀಸರು ದಾಳಿ ಮಾಡಿದ್ದಾರೆ. ಒಂದು ಲೀಟರ್ ಮಿಶ್ರಣದಿಂದ 20 ಲೀಟರ್ ಹಾಲು ತಯಾರು ಮಾಡಲಾಗುತ್ತಿತ್ತು.