Sunday, 27th November 2022

ಕೆಎಸ್‌ಆರ್‌ಟಿಸಿ ಬಸ್‌ ಅಪಘಾತ: 11 ಮಂದಿ ಪ್ರಯಾಣಿಕರಿಗೆ ಗಾಯ

ಕುಶಾಲನಗರ: ತಾಲ್ಲೂಕಿನ 7ನೇ ಹೊಸಕೋಟೆ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ರಸ್ತೆ ಪಕ್ಕದ ಚಿಕ್ಕ ಗುಡ್ಡಕ್ಕೆ ಗುದ್ದಿದ್ದು, 11 ಮಂದಿ ಪ್ರಯಾಣಿಕರಿಗೆ ಗಾಯಗಳಾ ಗಿವೆ.

ಚನ್ನರಾಯಪಟ್ಟಣದಿಂದ ಮಡಿಕೇರಿಗೆ ಹೊರಟಿದ್ದ ಈ ಬಸ್‌ನಲ್ಲಿ 44 ಮಂದಿ ಪ್ರಯಾಣಿಸುತ್ತಿದ್ದರು. ತಾಂತ್ರಿಕ ದೋಷದಿಂದ ಬಸ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬರೆಗೆ ಡಿಕ್ಕಿ ಹೊಡೆದಿದೆ.

ಪ್ರಯಾಣಿಕರಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್‌ನ ಬಹುಭಾಗ ಹಾನಿಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಶಾಲನಗರ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಸ್ಥಳೀಯರ ನೆರವಿನಿಂದ ಬಸ್‌ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಕಿಟಕಿ ಹಾಗೂ ತುರ್ತು ನಿರ್ಗಮನ ದ್ವಾರದ ಮೂಲಕ ಹೊರಕ್ಕೆ ಕರೆ ತಂದಿದ್ದಾರೆ.

ದಾರಿ ಮಧ್ಯೆ ತೆರಳುತ್ತಿದ್ದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಸಹ ಪ್ರಯಾಣಿಕರ ನೆರವಿಗೆ ಧಾವಿಸಿ ಆಸ್ಪತ್ರೆಗೆ ದಾಖಲಿಸುವಲ್ಲಿ ಸಹಕರಿಸಿದ್ದಾರೆ.