ಹಾವೇರಿ ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ
Rain News: ಹಾವೇರಿ ಜಿಲ್ಲೆಯ ವಿವಿಧೆಡೆ ಗುರುವಾರ ಸಂಜೆ ಭಾರೀ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸುರಿದಿದ್ದು, ಜಿಲ್ಲೆಯ ಹಾನಗಲ್ಲ ತಾಲೂಕಿನ ಮಳವಳ್ಳಿಯಿಂದ ತಡಸ್ -ಶಿವಮೊಗ್ಗ ರಾಜ್ಯ ಹೆದ್ದಾರಿಯ ಅಕ್ಕಪಕ್ಕದ ಮರಗಳು ಮುರಿದು ಬಿದ್ದು ರಸ್ತೆ ಬಂದ್ ಆಗಿತ್ತು. ಇದರಿಂದ ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿತ್ತು. ಸದ್ಯ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರಗಳನ್ನು ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.