Champions Trophy ಭಾರತ ತಂಡದಲ್ಲಿ ಸ್ಥಾನ ಸಿಗದ ಬಗ್ಗೆ ಸೂರ್ಯಕುಮಾರ್‌ ಪ್ರತಿಕ್ರಿಯೆ!

2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಭಾರತ ತಂಡದಲ್ಲಿ ಸ್ಥಾನ ಸಿಗದ ಬಗ್ಗೆ ಸೂರ್ಯಕುಮಾರ್‌ ಯಾದವ್‌ ಪ್ರತಿಕ್ರಿಯೆ ನೀಡಿದ್ದಾರೆ. ತಾನು ಏಕದಿನ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ತೋರಿಲ್ಲ. ಹಾಗಾಗಿ ನನಗೆ ಅವಕಾಶ ಸಿಕ್ಕಿಲ್ಲ. ಇದನ್ನು ನಾನು ಸ್ವೀಕರಿಸುತ್ತೇನೆಂದು ಹೇಳಿದ್ದಾರೆ.

Suryakumar Yadav
Profile Ramesh Kote January 21, 2025

ಕೋಲ್ಕತಾ: ಮುಂಬರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ (Champions Trophy 2025) ಭಾರತ ತಂಡದಲ್ಲಿ ತನಗೆ ಸ್ಥಾನ ನೀಡದ ಬಿಸಿಸಿಐನ ನಿರ್ಧಾರವನ್ನು ಟಿ20ಐ ತಂಡದ ನಾಯಕ ಸೂರ್ಯಕುಮಾರ್‌ ಯಾದವ್‌ ಸ್ವೀಕರಿಸಿದ್ದಾರೆ. ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದ ಸಂದರ್ಭದಲ್ಲಿ ನನ್ನಿಂದ ಉತ್ತಮ ಪ್ರದರ್ಶನ ಮೂಡಿಬಂದಿರಲಿಲ್ಲ. ಇದರ ಬಗ್ಗೆ ನಾನು ನಿರಾಶೆಗೊಂಡಿದ್ದೇನೆಂದು ಅವರು ಹೇಳಿದ್ದಾರೆ.

ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ವಿರುದ್ಧ ಆರಂಭವಾಗಲಿರುವ ಐದು ಪಂದ್ಯಗಳ ಟಿ20ಐ ಸರಣಿಯಲ್ಲಿ ಸೂರ್ಯಕುಮಾರ್‌ ಯಾದವ್‌ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಚುಟುಕು ಸ್ವರೂಪದಲ್ಲಿ ಲೀಲಾ ಜಾಲವಾಗಿ ಬ್ಯಾಟ್‌ ಬೀಸುವ ಸಾಮರ್ಥ್ಯ ಹೊಂದಿರುವ ಸೂರ್ಯಕುಮಾರ್, ಪ್ರಸ್ತುತ ಟಿ20 ಸ್ವರೂಪದಲ್ಲಿ ಅತ್ಯಂತ ಸ್ಫೋಟಕ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿದ್ದಾರೆ. ಆದರೆ, ಟಿ20 ಮಾದರಿಯ ಯಶಸ್ಸನ್ನು ಏಕದಿನ ಪಂದ್ಯಗಳಲ್ಲಿ ಮುಂದುವರಿಸುವಲ್ಲಿ ವಿಫಲರಾಗಿದ್ದಾರೆ.ಒಡಿಐಗಳಲ್ಲಿ, ಅವರು 37 ಪಂದ್ಯಗಳಲ್ಲಿ 25.76 ರ ಸರಾಸರಿಯಲ್ಲಿ 773 ರನ್ ಗಳಿಸಿದ್ದಾರೆ.

Champions Trophy schedule: ಫೆ 23ಕ್ಕೆ ಭಾರತ-ಪಾಕ್‌ ಪಂದ್ಯ, ಚಾಂಪಿಯನ್ಸ್‌ ಟ್ರೋಫಿಯ ಸಂಪೂರ್ಣ ವೇಳಾಪಟ್ಟಿ!

ಬಿಸಿಸಿಐ ನಿರ್ಧಾರವನ್ನು ಸ್ವೀಕರಿಸಿದ್ದೇನೆ: ಸೂರ್ಯ

ಇಂಗ್ಲೆಂಡ್ ವಿರುದ್ಧದ ಟಿ20ಐ ಸರಣಿಯ ಆರಂಭಿಕ ಪಂದ್ಯಕ್ಕೂ ಮುನ್ನ ದಿನ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಸ್ಥಾನ ಸಿಗದೆ ನಿರಾಶೆಗೊಂಡಿದ್ದೀರಾ ಎಂದು ಸೂರ್ಯಕುಮಾರ್ ಅವರನ್ನು ಕೇಳಿದಾಗ, ಅವರು "ಯಾರೇ ಆಗಲಿ ಏಕೆ ನಿರಾಶೆಗೊಳ್ಳುತ್ತಾರೆ? ನಾನು ಉತ್ತಮ ಪ್ರದರ್ಶನ ನೀಡಿದರೆ (ಒಡಿಐನಲ್ಲಿ) ನಾನು ತಂಡದಲ್ಲಿ ಸ್ಥಾನ ಪಡೆಯುತ್ತೇನೆ. ನಾನು ಚೆನ್ನಾಗಿ ಆಡದಿದ್ದರೆ ಇದು ಸಾಧ್ಯವಾಗುವುದಿಲ್ಲ. ಅದನ್ನು ಸ್ವೀಕರಿಸುವುದರಿಂದ ಯಾವುದೇ ಹಾನಿ ಇಲ್ಲ. ಅಲ್ಲದೆ, ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆಯಾದ ತಂಡವನ್ನು ನೋಡಿದರೆ, ಅದು ಅದ್ಭುತವಾಗಿದೆ. ಈ ತಂಡದಲ್ಲಿರುವವರು ಉತ್ತಮ ಪ್ರದರ್ಶನ ನೀಡುವ ಆಟಗಾರರು. ಅವರೆಲ್ಲರೂ ಈ ಸ್ವರೂಪದಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ ಮತ್ತು ಅವರಿಂದ ನನಗೆ ತುಂಬಾ ಸಂತೋಷವಾಗಿದೆ," ಎಂದು ಹೇಳಿದ್ದಾರೆ.

ಉತ್ತಮ ಪ್ರದರ್ಶನ ನೀಡದ ಬಗ್ಗೆ ಬೇಸರವಿದೆ

"ಏಕದಿನ ಮಾದರಿಯಲ್ಲಿ ನಾನು ಉತ್ತಮ ಪ್ರದರ್ಶನ ನೀಡದಿದ್ದಕ್ಕಾಗಿ ವಿಷಾದಿಸುತ್ತೇನೆ. ನಾನು ಚೆನ್ನಾಗಿ ಆಡಿದ್ದರೆ ಆ ತಂಡದಲ್ಲಿ ಇರುತ್ತಿದ್ದೆ. ಉತ್ತಮ ಪ್ರದರ್ಶನ ನೀಡಿದ ಆಟಗಾರ ಆ ಸ್ಥಾನಕ್ಕೆ ಅರ್ಹರು. ಇಬ್ಬರೂ (ಬುಮ್ರಾ, ಶಮಿ) ಒಟ್ಟಿಗೆ ಸಾಕಷ್ಟು ಕ್ರಿಕೆಟ್ ಆಡಿದ್ದಾರೆ. ಅವರೊಬ್ಬ(ಶಮಿ) ಅನುಭವಿ ಬೌಲರ್. ನೀವು ಭಾರತಕ್ಕಾಗಿ ಆಡಿದಾಗ ಅದು ವಿಭಿನ್ನ ರೀತಿಯ ಭಾವನೆ. ಇದರಲ್ಲಿ ಜವಾಬ್ದಾರಿಯ ಪ್ರಜ್ಞೆಯೂ ಇದೆ ಮತ್ತು ನೀವು ದೇಶಕ್ಕಾಗಿ ಆಡಲು ಇಷ್ಟಪಡುತ್ತೀರಿ. ಏಕದಿನ ವಿಶ್ವಕಪ್‌ನಲ್ಲಿ ನಾವು ನೋಡಿದಂತೆ ಇಬ್ಬರೂ ಒಟ್ಟಿಗೆ ಬೌಲ್‌ ಮಾಡುವುದನ್ನು ನೋಡುವುದು ಒಳ್ಳೆಯದು," ಎಂದು ಸೂರ್ಯಕುಮಾರ್‌ ಯಾದವ್‌ ತಿಳಿಸಿದ್ದಾರೆ.

IND vs ENG: ಮೊದಲನೇ ಟಿ20ಐಗೆ ಭಾರತದ ಸಂಭಾವ್ಯ ಪ್ಲೇಯಿಂಗ್‌ XI ವಿವರ!

ಐಸಿಸಿ ಚಾಂಪಿಯನ್ಸ್ ಟ್ರೋಫಿ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್‌ದೀಪ್ ಯಾದವ್‌, ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್‌ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್‌ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ.

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ