ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಆಲಮಟ್ಟಿ ಡ್ಯಾಂ ಬಳಿ ಟೆಂಪೋ-ಟ್ರ್ಯಾಕ್ಟರ್ ಡಿಕ್ಕಿ; 10 ಜನರಿಗೆ ಗಂಭೀರ ಗಾಯ

Road Accident: ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಜಲಾಶಯದ ಬಲಭಾಗದ ಕೆಎಸ್‌ಐಎಸ್‌ಎಫ್ ಸಿಬ್ಬಂದಿಗಳ ವಸಾಹತು ಸಮೀಪ ಸೋಮವಾರ ಸಂಜೆ ಅಪಘಾತ ನಡೆದಿದೆ. ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್‌ಗೆ ಡಿಕ್ಕಿಯಾಗಿ 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಆಲಮಟ್ಟಿ ಡ್ಯಾಂ ಬಳಿ ಟೆಂಪೋ-ಟ್ರ್ಯಾಕ್ಟರ್ ಡಿಕ್ಕಿ; 10 ಜನರಿಗೆ ಗಂಭೀರ ಗಾಯ

Profile Prabhakara R Feb 10, 2025 9:38 PM

ಆಲಮಟ್ಟಿ: ಟೆಂಪೋ-ಟ್ರ್ಯಾಕ್ಟರ್ ಮಧ್ಯೆ ಭೀಕರ ಅಪಘಾತವಾಗಿ 10 ಜನ ಗಂಭೀರವಾಗಿ ಗಾಯಗೊಂಡ ಘಟನೆ ಆಲಮಟ್ಟಿ ಜಲಾಶಯದ ಬಲಭಾಗದ ಕೆಎಸ್‌ಐಎಸ್‌ಎಫ್ ಸಿಬ್ಬಂದಿಗಳ ವಸಾಹತು ಸಮೀಪ ಸೋಮವಾರ ಸಂಜೆ ನಡೆದಿದೆ. ಟೆಂಪೋದಲ್ಲಿದ್ದ ಪ್ರಯಾಣಿಕರೆಲ್ಲರೂ ಗಾಯಗೊಂಡಿದ್ದು, ಈ ಪೈಕಿ 10 ಜನರಿಗೆ ಗಂಭೀರವಾಗಿ ಗಾಯಗಳಾಗಿವೆ. ಅವರೆಲ್ಲರೂ ಹುಣಸಗಿ ತಾಲೂಕಿನ ಜೈನಾಪುರ ಹಾಗೂ ಸುತ್ತಮುತ್ತಲಿನ ಗ್ರಾಮದವರು ಎಂದು ತಿಳಿದುಬಂದಿದೆ. ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ತೆರಳಿ ವಾಪಸ್ ಊರಿಗೆ ಹೋಗುವ ವೇಳೆ ಆಲಮಟ್ಟಿ ಉದ್ಯಾನ ವೀಕ್ಷಿಸಲು ಬಂದಿದ್ದಾಗ ಅಪಘಾತ ಸಂಭವಿಸಿದೆ. ಲವಕುಶ ಉದ್ಯಾನ ವೀಕ್ಷಿಸಿ ಅಲ್ಲಿಂದ ಕೆಳಕ್ಕೆ ಬರುವಾಗ ಇಳಿಜಾರಿನಲ್ಲಿ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್‌ಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ.

ಅಪಘಾತದ ವೇಳೆ ಅಲ್ಲೇ ಇದ್ದ ಕೆಎಸ್ಐಎಸ್ಎಫ್‌ನ 20ಕ್ಕೂ ಹೆಚ್ಚು ಪೊಲೀಸರು ತಕ್ಷಣವೇ ಟೆಂಪೋನಲ್ಲಿದ್ದ ಪ್ರಯಾಣಿಕರೆಲ್ಲರನ್ನು ರಕ್ಷಣೆ ಮಾಡಿ, ನಿಡಗುಂದಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಳುಹಿಸಿದ್ದಾರೆ. ಸರಸ್ವತಿ ಮಲ್ಲಪ್ಪ ದೊಡಮನಿ (35), ಹಣಮವ್ವ ದೇವೇಂದ್ರಪ್ಪ ವಾಲೀಕಾರ (50), ಗೌತಮ ವಾಲೀಕಾರ (10), ಭಾಗಮ್ಮ ವಾಲೀಕಾರ (17) ಎಂಬುವರಿಗೆ ಗಂಭೀರ ಗಾಯಗಳಾಗಿವೆ.

ನಾಲ್ಕು ಆಂಬ್ಯುಲೆನ್ಸ್‌ಗಳ ಮೂಲಕ ಗಾಯಾಳುಗಳನ್ನು ನಿಡಗುಂದಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ. ಗಾಯಾಳುಗಳ ರಕ್ಷಣೆಗೆ ಧಾವಿಸಿದ ಕೆಎಸ್‌ಐಎಸ್ಎಫ್ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ನಂತರ ಕ್ರೇನ್ ಮೂಲಕ ಟೆಂಪೋ ತೆರವು ಮಾಡಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಘಟನೆಯಲ್ಲಿ ನಾಲ್ವರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಇನ್ನೂ ಆರು ಜನರಿಗೆ ಮೂಳೆ ಮುರಿತವಾಗಿವೆ. ಅವರೆಲ್ಲರನ್ನು ವಿಜಯಪುರ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಇನ್ನುಳಿದ 20 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ. ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ | Drown in River: ಕಾಶಿಯಲ್ಲಿ ನದಿ ಸ್ನಾನ ಮಾಡುವಾಗ ಮುಳುಗಿ ಬಾಗಲಕೋಟೆಯ ವ್ಯಕ್ತಿ ಸಾವು

ಮಂಡ್ಯದಲ್ಲಿ ಹಿಟ್‌ ಆ್ಯಂಡ್‌ ರನ್‌, ಇಬ್ಬರು ಪಾದಚಾರಿಗಳ ಬಲಿ

ಮಂಡ್ಯ: ಮಂಡ್ಯ (Mandya News) ಜಿಲ್ಲೆಯಲ್ಲಿ ಹಿಟ್ ಆ್ಯಂಡ್ ರನ್‌ಗೆ (Hit And Run) ಇಬ್ಬರು ಪಾದಚಾರಿಗಳು (Pedestrians death) ಬಲಿಯಾಗಿದ್ದಾರೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ (Road Accident) ಸ್ಥಳದಲ್ಲೇ ಇಬ್ಬರು ಪಾದಚಾರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಗೆರೆ ಗ್ರಾಮದ ಮರಿಸ್ವಾಮಿ (52) ಹಾಗೂ ತಿಬ್ಬಯ್ಯ (60) ಮೃತಪಟ್ಟ ದುರ್ದೈವಿಗಳು.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಣಿಗೆರೆ ಗ್ರಾಮದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇವರಿಬ್ಬರ ಮೇಲೆ ಕಾರು ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಳಿಕ ಕಾರು ಚಾಲಕ ಪರಾರಿಯಾಗಿದ್ದು, ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕ ಪಾನಮತ್ತನಾಗಿದ್ದಿರಬಹುದು ಎಂದು ಶಂಕಿಸಲಾಗಿದೆ. ಸ್ಥಳದ ಆಸುಪಾಸಿನಲ್ಲಿರುವ ಮನೆಗಳ ಸಿಸಿ ಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿ, ಕೃತ್ಯ ಎಸಗಿದ ಪರಾರಿಯಾದ ವಾಹನವನ್ನು ಹುಡುಕಲು ಪೊಲೀಸರು ಮುಂದಾಗಿದ್ದಾರೆ.

ಗೋವಿನ ಮೇಲೆ ದೌರ್ಜನ್ಯ; ಕರುವಿನ ಬಾಲ ಕತ್ತರಿಸಿದ ಕಿಡಿಗೇಡಿಗಳು

ಗುಂಡ್ಲುಪೇಟೆ : ರಾಜ್ಯದಲ್ಲಿ ಗೋವುಗಳ ಮೇಲಿನ ದೌರ್ಜನ್ಯ ಮುಂದುವರೆದಿದ್ದು, ಗುಂಡ್ಲುಪೇಟೆಯಲ್ಲಿ ಬೀಡಾಡಿ ಕರುವಿನ ಬಾಲ ಕತ್ತರಿಸಿ ವಿಕೃತಿ ಮೆರೆದಿರುವ ಘಟನೆ ನಡೆದಿದೆ. ಗುಂಡ್ಲುಪೇಟೆ ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದ ಬಳಿ ಗಲ್ಲಿಯಲ್ಲಿ ಕಿಡಿಗೇಡಿಗಳು ಕರುವಿನ ಬಾಲ ಕತ್ತರಿಸಿದ್ದು, ಕರು ನಿತ್ರಾಣಗೊಂಡು ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಸಾರ್ವಜನಿಕರು ಕರುವಿಗೆ ನೀರು ಕುಡಿಸಿದ್ದಾರೆ.

ಇದನ್ನೂ ಓದಿ: Road Accident: ಉಜ್ಜಯಿನಿಯಿಂದ ವಾಪಸ್ ಬರುವಾಗ ಭೀಕರ ಅಪಘಾತ; ಬೆಳಗಾವಿ ಮೂಲದ ನಾಲ್ವರು ಸೇರಿ 6 ಮಂದಿ ದುರ್ಮರಣ

ಮೂಕ ಪಶುವಿನ ಮೇಲೆ ದೌರ್ಜನ್ಯ ನಡೆಸಿರುವುದು ಖಂಡನೀಯ. ಕರುವಿನ ಬಾಲ ಕತ್ತರಿಸಿದ ಆರೋಪಿಗಳ ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಇಲ್ಲಿನ ಜನರು ಒತ್ತಾಯಿಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿದ ಪ್ರಕರಣ, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಬಳಿ ಹಸು ಕತ್ತರಿಸಿ ಹೊಟ್ಟೆಯಲ್ಲಿದ್ದ ಕರು ಬಿಸಾಡಿ ಹೋದ ಪ್ರಕರಣಗಳ ಬೆನ್ನಲ್ಲೇ ಕರುವಿನ ಬಾಲ ಕತ್ತರಿಸಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.