ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Ranya Rao: ರನ್ಯಾ ರಾವ್‌ಗೆ ಮತ್ತಷ್ಟು ಸಂಕಷ್ಟ, ಮನೆಯಲ್ಲಿ ಚಿನ್ನ- ನಗದು ಸೇರಿ 17.29 ಕೋಟಿ ಪತ್ತೆ

ಬೆಂಗಳೂರಿನ ಲ್ಯಾವೆಲ್ಲಿ ರಸ್ತೆಯ ನಂದವಾಣಿ ಮ್ಯಾನ್ಶನ್​ನ ಫ್ಲ್ಯಾಟ್​ನಲ್ಲಿ ರನ್ಯಾ ಮನೆ ಇದ್ದು, 5ಕ್ಕೂ ಹೆಚ್ಚು ಅಧಿಕಾರಿಗಳು ಫ್ಲ್ಯಾಟ್​ನಲ್ಲಿ ಪರಿಶೀಲನೆ ನಡೆಸಿದ್ದರು, ಬಳಿಕ 3 ದೊಡ್ಡ ಪೆಟ್ಟಿಗೆಯನ್ನು ನಗದು ಹಣ ಮತ್ತು ಚಿನ್ನವನ್ನು ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದರು. ರನ್ಯಾ ಮನೆಯಲ್ಲಿ 2.06 ಕೆಜಿ ಚಿನ್ನ ಹಾಗೂ 2.67 ಕೋಟಿ ನಗದು ಹಣ ಪತ್ತೆಯಾಗಿದೆ.

ರನ್ಯಾ ರಾವ್

ಬೆಂಗಳೂರು: ನಟಿ ರನ್ಯಾ ರಾವ್ (Ranya Rao) ದುಬೈನಿಂದ ಬೆಂಗಳೂರಿಗೆ ಚಿನ್ನ ಕಳ್ಳಸಾಗಣೆ (Gold Smuggling) ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದು, ಈಗಾಗಲೇ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ (Judicial Custody) ವಿಧಿಸಲಾಗಿದೆ. 14.20 ಕೆಜಿ ಚಿನ್ನ ಕಳ್ಳಸಾಗಣೆ ಮಾಡಿರುವ ಆರೋಪ ನಟಿಯ ಮೇಲಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು, ನಟಿಯ ಬಳಿಯಿಂದ ಚಿನ್ನ, ನಗದು ಸೇರಿ 17.29 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು ಅಂತಾಷ್ಟ್ರೀಯ ವಿಮಾನ ನಿಲ್ದಾಣದ ಇತಿಹಾಸದಲ್ಲಿಯೇ ಇಷ್ಟು ದೊಡ್ಡ ಮೊತ್ತದ ಚಿನ್ನ ವಶಪಡಿಸಿಕೊಂಡಿರುವುದು ಇದೇ ಮೊದಲು ಎನ್ನಲಾಗಿದೆ. ಡಿಆರ್​ಐ ಅಧಿಕಾರಿಗಳು ಮೊನ್ನೆ ರನ್ಯಾ ಬಂಧನ ಬಳಿಕ ಆಕೆಯ ಮನೆಯಲ್ಲಿ ಪರಿಶೀಲನೆ ನಡೆಸಿದ್ದರು. ಬೆಂಗಳೂರಿನ ಲ್ಯಾವೆಲ್ಲಿ ರಸ್ತೆಯ ನಂದವಾಣಿ ಮ್ಯಾನ್ಶನ್​ನ ಫ್ಲ್ಯಾಟ್​ನಲ್ಲಿ ರನ್ಯಾ ಮನೆ ಇದ್ದು, 5ಕ್ಕೂ ಹೆಚ್ಚು ಅಧಿಕಾರಿಗಳು ಫ್ಲ್ಯಾಟ್​ನಲ್ಲಿ ಪರಿಶೀಲನೆ ನಡೆಸಿದ್ದರು, ಬಳಿಕ 3 ದೊಡ್ಡ ಪೆಟ್ಟಿಗೆಯನ್ನು ನಗದು ಹಣ ಮತ್ತು ಚಿನ್ನವನ್ನು ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದರು. ರನ್ಯಾ ಮನೆಯಲ್ಲಿ 2.06 ಕೆಜಿ ಚಿನ್ನ ಹಾಗೂ 2.67 ಕೋಟಿ ನಗದು ಹಣ ಪತ್ತೆಯಾಗಿದೆ.

ನಟಿ ರನ್ಯಾ ಕಳೆದ 15 ದಿನಗಳಲ್ಲಿ ನಾಲ್ಕು ಬಾರಿ ಗಲ್ಫ್ ದೇಶಕ್ಕೆ ಹೋಗಿ ಬಂದಿದ್ದರಂತೆ. ಪ್ರತಿ ಬಾರಿ ನಟಿ ರನ್ಯಾ ವಿಮಾನ ನಿಲ್ದಾಣಕ್ಕೆ ಹೋದಾಗಲೂ ಹಿರಿಯ ಅಧಿಕಾರಿಗಳು ಬಳಸುವ ಅಫಿಷಿಯಲ್ ಪ್ರೋಟೊಕಾಲ್ ಸರ್ವೀಸ್ ಅನ್ನು ಬಳಸಿ ಸೆಕ್ಯುರಿಟಿ ಚೆಕ್‌ನಿಂದ ತಪ್ಪಿಸಿಕೊಳ್ಳುತ್ತಿದ್ದರು. ಪ್ರತಿಬಾರಿ ಚಿನ್ನ ಕಳ್ಳಸಾಗಣೆಗೆ ಹೋದಾಗಲು ಒಂದೇ ರೀತಿಯ ಬಟ್ಟೆ ಹಾಕಿಕೊಂಡು ಹೋಗುತ್ತಿದ್ದರು. ಬೆಲ್ಟ್‌ನ ಒಳಗೆ ಚಿನ್ನದ ಗಟ್ಟಿಗಳನ್ನು ಇಟ್ಟುಕೊಂಡು, ಆ ಬೆಲ್ಟು ಹೊರಗೆ ಕಾಣದಂತೆ ಬಟ್ಟೆ ಹಾಕಿಕೊಂಡು ಬರುತ್ತಿದ್ದರು ಎಂದು ಅರೋಪಿಸಲಾಗಿದೆ. ಹಾಗಾಗಿ ಯಾರಿಗೂ ಸಹ ನಟಿಯ ಮೇಲೆ ಅನುಮಾನ ಬಂದಿರಲಿಲ್ಲ. ಆದರೆ ದೆಹಲಿಯಲ್ಲಿ ಕೂತಿದ್ದ ಡಿಆರ್’ಐ ಅಧಿಕಾರಿಗಳಿಗೆ ಅನುಮಾನ ಬಂದು ತಪಾಸಣೆ ನಡೆದಾಗ ನಟಿಯ ಕಳ್ಳತನ ಸಿಕ್ಕಿಹಾಕಿಕೊಂಡಿದೆ.

ನಟಿ ರನ್ಯಾ, ಕನ್ನಡದ ‘ಮಾಣಿಕ್ಯ’ ಮತ್ತು ‘ಪಟಾಕಿ’ ಸಿನಿಮಾಗಳಲ್ಲಿ ನಟಿಸಿದ್ದಾರೆ. ತಮಿಳಿನ ಸಿನಿಮಾಗಳಲ್ಲಿಯೂ ರನ್ಯಾ ನಟಿಸಿದ್ದು, ರನ್ಯಾ ಬೆಂಗಳೂರಿನವರೇ ಆಗಿದ್ದಾರೆ. ರನ್ಯಾ ಅವರ ತಂದೆ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಯಾಗಿದ್ದು, ಅಧಿಕಾರಿಯ ಮೊದಲ ಹೆಂಡತಿಯ ಮೊದಲ ಪತಿಯ ಮಗಳಾಗಿದ್ದಾಳೆ ರನ್ಯಾ. ‌

ಇದನ್ನೂ ಓದಿ: Ranya Rao: ಚಿನ್ನ ಕಳ್ಳಸಾಗಣೆ: ನಟಿ ರನ್ಯಾ ರಾವ್‌ಗೆ 14 ದಿನ ನ್ಯಾಯಾಂಗ ಬಂಧನ

ಹರೀಶ್‌ ಕೇರ

View all posts by this author