1990s Movie: ನವಿರಾದ ಪ್ರೇಮಕಥೆಯ 1990s ಚಿತ್ರದ ಹಾಡು ರಿಲೀಸ್‌

1990s Movie: ನಂದಕುಮಾರ್ ಸಿ.ಎಂ. ನಿರ್ದೇಶಿಸಿರುವ ಹಾಗೂ ಅರುಣ್ - ರಾಣಿ ವರದ್ ಅಭಿನಯದ ʼ1990sʼ ಚಿತ್ರಕ್ಕಾಗಿ ನಿರ್ದೇಶಕ ನಂದಕುಮಾರ್ ಅವರೆ ಬರೆದಿರುವ ʼತಾಂಡವʼ ಎಂಬ ಹಾಡು‌ ಇತ್ತೀಚೆಗೆ ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆಯಾಗಿದೆ.

1990s Movie
Profile Siddalinga Swamy January 22, 2025

ಬೆಂಗಳೂರು: ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ ಸಿ.ಎಂ. ನಿರ್ದೇಶಿಸಿರುವ ಹಾಗೂ ಅರುಣ್ - ರಾಣಿ ವರದ್ ಅಭಿನಯದ ʼ1990sʼ ಚಿತ್ರ (1990s Movie) ಸದ್ಯ ಸ್ಯಾಂಡಲ್‌ವುಡ್‌ನ ಗಮನ ಸೆಳೆದಿದೆ. ಇದೀಗ ನಿರ್ದೇಶಕ ನಂದಕುಮಾರ್ ಅವರೆ ಬರೆದಿರುವ ʼತಾಂಡವʼ ಎಂಬ ಹಾಡು‌ ಇತ್ತೀಚೆಗೆ ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆಯಾಗಿದೆ. ಸಂಗೀತ ನೀಡಿರುವ ಮಹಾರಾಜ ಅವರು ವಲ್ಲಭ್ ಅವರೊಟ್ಟಿಗೆ ಹಾಡಿರುವ ಈ ಹಾಡನ್ನು ಬಿಡುಗಡೆ ಮಾಡಿದ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.



ಹಲವು ವರ್ಷಗಳಿಂದ ಚಿತ್ರರಂಗದೊಂದಿಗೆ ಒಡನಾಟವಿರುವ ನನಗೆ ನಿರ್ದೇಶಕನಾಗಿ ಇದು ಚೊಚ್ಚಲ ಚಿತ್ರ. ಇದು 1990ರಲ್ಲಿ ನಡೆಯುವ ಪ್ರೇಮಕಥೆ. ಚಿತ್ರದ ಕಥೆ ನಡೆಯುವುದು ಈ ಕಾಲಘಟ್ಟದಲ್ಲಾದರೂ ನಾಯಕನ ಕಲ್ಪನೆ 35 ವರ್ಷಗಳ ಹಿಂದಿನಾದಗಿರುತ್ತದೆ. ಈವರೆಗೂ ಸಾಕಷ್ಟು ಪ್ರೇಮಕಥೆಗಳು ಬಂದಿವೆಯಾದರೂ ನಮ್ಮ ಚಿತ್ರದ ಕಥೆ ವಿಭಿನ್ನ. ಚಿತ್ರದಲ್ಲಿ 1990s ಭಾಗ 90% ಇರುತ್ತದೆ. ಮಿಕ್ಕ 10% ಮಾತ್ರ ಈ ಕಾಲಘಟ್ಟದ್ದು. ಈಗಾಗಲೇ ಚಿತ್ರೀಕರಣ ಮುಗಿಸಿ ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರದ ʼತಾಂಡವʼ ಹಾಡನ್ನುರಿಲೀಸ್‌ ಮಾಡುವ ಮೂಲಕ ಚಿತ್ರದ ಪ್ರಚಾರವನ್ನು ಆರಂಭಿಸಿದ್ದೇವೆ. ಚಿತ್ರ ಮೊದಲು ಆರಂಭವಾಗಿದ್ದು, ಕನ್ನಡದಲ್ಲಿ. ಆನಂತರ ಇದು ಎಲ್ಲ ಭಾಷೆಗಳಿಗೂ ಸಲ್ಲುವ ಕಥೆ ಎಂದು ಸಾಕಷ್ಟು ಜನರು ಅಭಿಪ್ರಾಯಪಟ್ಟರು. ಈಗ ʼ1990sʼ ಚಿತ್ರ ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ನಿರ್ಮಾಣವಾಗಿದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುತ್ತೇವೆ ಎಂದು ನಿರ್ದೇಶಕ ನಂದಕುಮಾರ್ ಸಿ.ಎಂ. ವಿವರಿಸಿದರು.

ನಾವು ನಾಲ್ಕು ಜನ ಸ್ನೇಹಿತರು ಸೇರಿ ಮನಸ್ಸು ಮಲ್ಲಿಗೆ ಕ್ರಿಯೇಷನ್ಸ್ ಎಂಬ ಸಂಸ್ಥೆಯ ಮೂಲಕ ನಿರ್ಮಾಣ ಮಾಡಿರುವ ನವಿರಾದ ಪ್ರೇಮಕಥೆ ʼ1990sʼ ಚಿತ್ರಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದು ನಿರ್ಮಾಪಕರಲ್ಲೊಬ್ಬರಾದ ಅರುಣ್ ಕುಮಾರ್ ತಿಳಿಸಿದರು.

ರಂಗಭೂಮಿ ಕಲಾವಿದನಾಗಿ ಅನುಭವವಿರುವ ನನಗೆ ಹಿರಿತೆರೆಯಲ್ಲಿ ಇದು ಮೊದಲ ಚಿತ್ರ. ನಿರ್ದೇಶಕ ನಂದಕುಮಾರ್ ಅವರು ಎಲ್ಲರಿಗೂ ಹಿಡಿಸುವ ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ಈ ಚಿತ್ರದಲ್ಲಿ ನನ್ನದು ಮುಗ್ದ ಪ್ರೇಮಿಯ ಪಾತ್ರ ಎಂದರು ನಾಯಕ ಅರುಣ್. ಅರುಣ್, ಕನ್ನಡದ ಸೂಪರ್ ಹಿಟ್ ಚಿತ್ರಗಳಿಗೆ ಸಂಕಲನ ಕಾರ್ಯ ನಿರ್ವಹಿಸಿರುವ ಸಂಕಲನಕಾರ ಜನಾರ್ದನ್ ಅವರ ಪುತ್ರ.

ನಾನು ಈ ಚಿತ್ರದ ಟೀಸರ್ ಬಿಡುಗಡೆಯಾದಾಗ ಗರ್ಭಿಣಿಯಾಗಿದ್ದೆ. ಜನವರಿ 6ರಂದು ಅವಳಿ ಮಕ್ಕಳಿಗೆ ಜನ್ಮ‌ ನೀಡಿದ್ದೇನೆ. ಈ ಚಿತ್ರದ ಪಾತ್ರ ತುಂಬಾ ಚೆನ್ನಾಗಿದೆ ಎಂದರು ನಾಯಕಿ ರಾಣಿ ವರದ್.

ಈ ಸುದ್ದಿಯನ್ನೂ ಓದಿ | Airport Fashion Show 2025: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಡೆಲ್‌ಗಳ ಕ್ಯಾಟ್‌ವಾಕ್‌

ಚಿತ್ರದ ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಮಹಾರಾಜ ಮಾಹಿತಿ ನೀಡಿದರು. ಛಾಯಾಗ್ರಾಹಕ ಹಾಲೇಶ್,‌ ಸಾಹಸ ನಿರ್ದೇಶಕ ಅಶೋಕ್, ನೃತ್ಯ ನಿರ್ದೇಶಕ ಸಾದಿಕ್ ಸರ್ದಾರ್, ಸಂಕಲನಕಾರ ಕೃಷ್ಣ ಹಾಗೂ ಖಳನಟ ದೇವು ಮುಂತಾದವರು ʼ1990sʼ ಚಿತ್ರದ ಬಗ್ಗೆ ಮಾತನಾಡಿದರು.

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ