Naxals Encounter: ಭರ್ಜರಿ ಬೇಟೆ; ಎನ್‌ಕೌಂಟರ್‌ನಲ್ಲಿ 2 ನಕ್ಸಲರು ಫಿನೀಶ್- ಯೋಧ ಹುತಾತ್ಮ
Naxals Encounter: ಬಿಜಾಪುರ ಮತ್ತು ದಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ಕಾಡಿನಲ್ಲಿ ಬೆಳಿಗ್ಗೆ 7 ಗಂಟೆಗೆ ಗುಂಡಿನ ಚಕಮಕಿ ನಡೆಯಿತು. ಕಾರ್ಯಾಚರಣೆಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲರನ್ನು ಹೊಡೆದುರುಳಿಸಲಾಗಿದೆ. ದುರಾದೃಷ್ಟವಶಾತ್ ಕಾರ್ಯಾಚರಣೆಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಶೋಧ ಮುಂದುವರೆದಿದೆ


ರಾಯ್‌ಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ(Naxals Encounter) ಇಬ್ಬರು ಶಂಕಿತ ಮಾವೋವಾದಿಗಳನ್ನು ಹೊಡೆದುರುಳಿಸಲಾಗಿದೆ. ಇನ್ನು ಈ ಕಾರ್ಯಾಚರಣೆ ವೇಳೆ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಒಬ್ಬ ಸೈನಿಕ ಹುತಾತ್ಮರಾಗಿದ್ದಾರೆ. ಎಂದು ಪೊಲೀಸರು ತಿಳಿಸಿದ್ದಾರೆ. ಬಿಜಾಪುರ ಮತ್ತು ದಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ಕಾಡಿನಲ್ಲಿ ಬೆಳಿಗ್ಗೆ 7 ಗಂಟೆಗೆ ಗುಂಡಿನ ಚಕಮಕಿ ನಡೆದಿದ್ದು,ಗಂಗಲೂರು ಪೊಲೀಸ್ ಠಾಣೆ ಪ್ರದೇಶದ ಅಡಿಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ಪೊಲೀಸ್ ಜಂಟೀ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಹತರಾದ ನಕ್ಸಲರಿಂದ ಬಂದೂಕುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೋಧ ಮುಂದುವರೆದಿದೆ ಮತ್ತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Chhattisgarh: Two Naxals killed in encounter with security forces, 1 DRG personnel laid down
— ANI Digital (@ani_digital) March 20, 2025
Read @ANI Story l https://t.co/qLypsLIcVh#Naxals #Chhattisgarh #Bijapur pic.twitter.com/gD1yueiPzp
ಈ ಸುದ್ದಿಯನ್ನೂ ಓದಿ: Naxal Encounter: ಭದ್ರತಾ ಪಡೆಗಳ ಭರ್ಜರಿ ಬೇಟೆ: ಗುಂಡಿನ ಚಕಮಕಿಯಲ್ಲಿ 31 ನಕ್ಸಲರ ಎನ್‌ಕೌಂಟರ್!
ಮಾರ್ಚ್ 9 ರಂದು ಬಿಜಾಪುರದಲ್ಲಿ 11 ಮಹಿಳೆಯರು ಸೇರಿದಂತೆ ಕನಿಷ್ಠ 31 ಶಂಕಿತ ಮಾವೋವಾದಿಗಳನ್ನು ಹೊಡೆದುರುಳಿಸಲಾಗಿತ್ತು. ಅವರಲ್ಲಿ ಕೇವಲ ಐವರ ಗುರುತು ಪತ್ತೆಯಾಗಿತ್ತು. ಎನ್‌ಕೌಂಟರ್ ನಡೆದ ಸ್ಥಳದಿಂದ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳಲ್ಲಿ ಒಂದು ಎಕೆ -47 ರೈಫಲ್, ಒಂದು ಎಸ್‌ಎಲ್‌ಆರ್ ರೈಫಲ್, ಒಂದು ಐಎನ್‌ಎಸ್‌ಎಎಸ್ ರೈಫಲ್, ಒಂದು .303 ರೈಫಲ್, ಒಂದು .315 ಬೋರ್ ರೈಫಲ್, ಒಂದು ಸ್ಟ್ಯಾಂಡ್‌ನೊಂದಿಗೆ ಒಂದು ಬಿಜಿಎಲ್ ರಾಕೆಟ್ ಲಾಂಚರ್ (ದೊಡ್ಡದು), ಆರು ಬಿಜಿಎಲ್ ಲಾಂಚರ್‌ಗಳು ಮತ್ತು ಲೇಸರ್ ಪ್ರಿಂಟರ್‌ಗಳು ಸೇರಿವೆ. ಈ ವರ್ಷ ಛತ್ತೀಸ್‌ಗಢದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 81 ಮಾವೋವಾದಿಗಳನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ. ಈ 81 ಬಂಡುಕೋರರಲ್ಲಿ, ಬಿಜಾಪುರ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತರ್ ವಿಭಾಗದಲ್ಲಿ 65 ಜನ ಹತರಾಗಿದ್ದರು.