ರಾಯ್‌ಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ(Naxals Encounter) ಇಬ್ಬರು ಶಂಕಿತ ಮಾವೋವಾದಿಗಳನ್ನು ಹೊಡೆದುರುಳಿಸಲಾಗಿದೆ. ಇನ್ನು ಈ ಕಾರ್ಯಾಚರಣೆ ವೇಳೆ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಒಬ್ಬ ಸೈನಿಕ ಹುತಾತ್ಮರಾಗಿದ್ದಾರೆ. ಎಂದು ಪೊಲೀಸರು ತಿಳಿಸಿದ್ದಾರೆ. ಬಿಜಾಪುರ ಮತ್ತು ದಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ಕಾಡಿನಲ್ಲಿ ಬೆಳಿಗ್ಗೆ 7 ಗಂಟೆಗೆ ಗುಂಡಿನ ಚಕಮಕಿ ನಡೆದಿದ್ದು,ಗಂಗಲೂರು ಪೊಲೀಸ್ ಠಾಣೆ ಪ್ರದೇಶದ ಅಡಿಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ಪೊಲೀಸ್ ಜಂಟೀ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಹತರಾದ ನಕ್ಸಲರಿಂದ ಬಂದೂಕುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೋಧ ಮುಂದುವರೆದಿದೆ ಮತ್ತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: Naxal Encounter: ಭದ್ರತಾ ಪಡೆಗಳ ಭರ್ಜರಿ ಬೇಟೆ: ಗುಂಡಿನ ಚಕಮಕಿಯಲ್ಲಿ 31 ನಕ್ಸಲರ ಎನ್‌ಕೌಂಟರ್!
ಮಾರ್ಚ್ 9 ರಂದು ಬಿಜಾಪುರದಲ್ಲಿ 11 ಮಹಿಳೆಯರು ಸೇರಿದಂತೆ ಕನಿಷ್ಠ 31 ಶಂಕಿತ ಮಾವೋವಾದಿಗಳನ್ನು ಹೊಡೆದುರುಳಿಸಲಾಗಿತ್ತು. ಅವರಲ್ಲಿ ಕೇವಲ ಐವರ ಗುರುತು ಪತ್ತೆಯಾಗಿತ್ತು. ಎನ್‌ಕೌಂಟರ್ ನಡೆದ ಸ್ಥಳದಿಂದ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳಲ್ಲಿ ಒಂದು ಎಕೆ -47 ರೈಫಲ್, ಒಂದು ಎಸ್‌ಎಲ್‌ಆರ್ ರೈಫಲ್, ಒಂದು ಐಎನ್‌ಎಸ್‌ಎಎಸ್ ರೈಫಲ್, ಒಂದು .303 ರೈಫಲ್, ಒಂದು .315 ಬೋರ್ ರೈಫಲ್, ಒಂದು ಸ್ಟ್ಯಾಂಡ್‌ನೊಂದಿಗೆ ಒಂದು ಬಿಜಿಎಲ್ ರಾಕೆಟ್ ಲಾಂಚರ್ (ದೊಡ್ಡದು), ಆರು ಬಿಜಿಎಲ್ ಲಾಂಚರ್‌ಗಳು ಮತ್ತು ಲೇಸರ್ ಪ್ರಿಂಟರ್‌ಗಳು ಸೇರಿವೆ. ಈ ವರ್ಷ ಛತ್ತೀಸ್‌ಗಢದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 81 ಮಾವೋವಾದಿಗಳನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ. ಈ 81 ಬಂಡುಕೋರರಲ್ಲಿ, ಬಿಜಾಪುರ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತರ್ ವಿಭಾಗದಲ್ಲಿ 65 ಜನ ಹತರಾಗಿದ್ದರು.