#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

ತುಮಕೂರು ಹಾಲು ಒಕ್ಕೂಟದಿಂದ ಹೈನುಗಾರರಿಗೆ ಲೀಟರ್ ಹಾಲಿಗೆ 2 ರೂ. ಹೆಚ್ಚಳ: ಎಸ್.ಆರ್.ಗೌಡ

ಹೈನುಗಾರಿಕೆಯನ್ನು ಪ್ರೋತ್ಸಾಹಿಸಿ ಬಡ ರೈತ ಕುಟುಂಬಗಳ ಆರ್ಥಿಕ ಪ್ರಗತಿಗೆ ಆದ್ಯತೆ ನೀಡುವುದೇ ನನ್ನ ಗುರಿಯಾಗಿದ್ದು, ಕಳೆದ ೧೦ ವರ್ಷಗಳಲ್ಲೂ ತುಮಕೂರು ಹಾಲು ಒಕ್ಕೂಟದ ನಿರ್ದೇಶಕನಾಗಿ ಹಾಲು ಉತ್ಪಾದಕರ ಧ್ವನಿಯಾಗಿ, ಕೆಲಸ ಮಾಡಿದ್ದೇನೆ. ಮುಂದೆಯೂ ಇದೇ ರೀತಿ ಕೆಲಸ ಮಾಡುತ್ತೇನೆ. ರೈತರು ಹಾಲು ಉತ್ಪಾದನೆಯಲ್ಲಿ ಗುಣಮಟ್ಟ ಕಾಯ್ದುಕೊಂಡು ಹೆಚ್ಚು ಲಾಭ ಪಡೆಯಿರಿ ಎಂದರು

ಪಶು ಇಲಾಖೆಯಿಂದ ಬರಡು ರಾಸುಗಳಿಗೆ ಆರೋಗ್ಯ ತಪಾಸಣೆ

ಬರಡು ರಾಸುಗಳ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾಗು ಮಿಶ್ರ ತಳಿ ಹೆಣ್ಣು ಕರುಗಳ ಪ್ರದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿತ್ತು

Profile Ashok Nayak Feb 8, 2025 9:29 PM

ಮಿಶ್ರ ತಳಿ ಹೆಣ್ಣು ಕರು ಪ್ರದರ್ಶನ

ಶಿರಾ: ತುಮಕೂರು ಹಾಲು ಒಕ್ಕೂಟವು ಹೈನುಗಾರರ ಹಿತ ಕಾಪಾಡುವ ಉದ್ದೇಶದಿಂದ, ರೈತರಿಗೆ ಆರ್ಥಿಕವಾಗಿ ಶಕ್ತಿ ತುಂಬಲು ಪ್ರತಿ ಲೀಟರ್ ಹಾಲಿಗೆ 2 ರೂಪಾಯಿ ದರ ಹೆಚ್ಚಿಸಿದ್ದು ಫೆ.11 ರಿಂದ ಎಲ್ಲಾ ಹೈನುಗಾರರಿಗೆ ಪ್ರತಿ ಲೀಟರ್‌ಗೆ 2 ರೂಪಾಯಿ ದರ ಹೆಚ್ಚಿಗೆ ಸಿಗಲಿದ್ದು, ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್. ಆರ್. ಗೌಡ ಹೇಳಿದರು. ಶನಿವಾರ ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಇವರ ವತಿಯಿಂದ ತಾಲೂ ಕಿನ ಶೀಬಿ ಅಗ್ರಹಾರ ಗ್ರಾಮ ಪಂಚಾಯ್ತಿಯ ಅಗ್ರಹಾರದಮ್ಮ ದೇವಸ್ಥಾನ ಬಳಿ ಏರ್ಪಡಿ ಸಿದ್ದ ಬರಡು ರಾಸುಗಳ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾಗು ಮಿಶ್ರ ತಳಿ ಹೆಣ್ಣು ಕರುಗಳ ಪ್ರದ ರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಹೈನುಗಾರಿಕೆಯನ್ನು ಪ್ರೋತ್ಸಾಹಿಸಿ ಬಡ ರೈತ ಕುಟುಂಬಗಳ ಆರ್ಥಿಕ ಪ್ರಗತಿಗೆ ಆದ್ಯತೆ ನೀಡುವುದೇ ನನ್ನ ಗುರಿಯಾಗಿದ್ದು, ಕಳೆದ ೧೦ ವರ್ಷಗಳಲ್ಲೂ ತುಮಕೂರು ಹಾಲು ಒಕ್ಕೂಟದ ನಿರ್ದೇಶಕನಾಗಿ ಹಾಲು ಉತ್ಪಾದಕರ ಧ್ವನಿಯಾಗಿ, ಕೆಲಸ ಮಾಡಿದ್ದೇನೆ. ಮುಂದೆಯೂ ಇದೇ ರೀತಿ ಕೆಲಸ ಮಾಡು ತ್ತೇನೆ. ರೈತರು ಹಾಲು ಉತ್ಪಾದನೆಯಲ್ಲಿ ಗುಣಮಟ್ಟ ಕಾಯ್ದುಕೊಂಡು ಹೆಚ್ಚು ಲಾಭ ಪಡೆಯಿರಿ ಎಂದರು.

ಇದನ್ನೂ ಓದಿ: Tumkur News: ತುಮಕೂರಲ್ಲಿ ಆಯಿಲ್‌ ಟ್ಯಾಂಕ್ ಸ್ಫೋಟವಾಗಿ ಇಬ್ಬರು ಕಾರ್ಮಿಕರ ದುರ್ಮರಣ, ಮೂವರಿಗೆ ಗಾಯ

ಶಿರಾ ತಾಲೂಕಿನಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಸಂಪೂರ್ಣವಾಗಿ ಅಭಿವೃದ್ಧಿ ಮಾಡುತ್ತೇನೆ. ಶಿರಾ ತಾಲೂಕಿನ ರೈತರ ಮಕ್ಕಳು ಉದ್ಯೋಗಕ್ಕಾಗಿ ಬೆಂಗಳೂರು, ತುಮಕೂರು ನಗರ ಗಳಿಗೆ ವಲಸೆ ಹೋಗುತ್ತಿದ್ದು, ಅವರಿಗೆ ತಾಂತ್ರಿಕವಾಗಿ, ವೈಜ್ಞಾನಿಕವಾಗಿ ಹೈನುಗಾರಿಕಾ ಕ್ಷೇತ್ರವನ್ನು ಅಳವಡಿಸಿಕೊಂಡರೆ ಅವರಿಗೆ ಸ್ಥಳೀಯವಾಗಿಯೇ ಉದ್ಯೋಗ ಸಿಗುತ್ತದೆ. ಮುಂದಿನ ಐದು ವರ್ಷ ಅವಧಿಯಲ್ಲಿ ತಾಲೂಕಿನಲ್ಲಿ ಹೈನುಗಾರಿಕೆಯನ್ನು ಮತ್ತಷ್ಟು ಪ್ರೋತ್ಸಾಹಿಸಿ ಕ್ಷೀರ ಕ್ರಾಂತಿಯೇ ಮಾಡಬೇಕೆಂಬ ನನ್ನ ಸಂಕಲ್ಪಕ್ಕೆ ಎಲ್ಲರೂ ಶಕ್ತಿ ತುಂಬುವAತ ಕೆಲಸ ಮಾಡಬೇಕು. ಹಾಲು ಉತ್ಪಾ ದಕರ ಅಭಿವೃದ್ಧಿಯೇ ನನ್ನ ಧ್ಯೇಯ ಮತ್ತು ಗುರಿ ಎಂದರು.

ಶಾಸಕ ಟಿ.ಬಿ.ಜಯಚಂದ್ರ ಮಾತನಾಡಿ ಇತ್ತೀಚೆಗೆ ಅಕಾಲಿಕ ಮಳೆಯಿಂದ ಕೃಷಿಯಲ್ಲಿ ರೈತರಿಗೆ ಆದಾಯ ಸಿಗುತ್ತಿಲ್ಲ, ಆದ್ದರಿಂದ ರೈತರು ಉಪಕಸುಬಾದ ಹೈನುಗಾರಿಕೆಯನ್ನು ಅಳವಡಿಸಿಕೊಂಡರೆ ಆರ್ಥಿಕವಾಗಿ ಸಬಲರಾಗಬಹುದು. ಈ ಹಿಂದೆ ನಾನು ಪಶು ಪಲನಾ ಸಚಿವನಾಗಿದ್ದ ಸಂದರ್ಭದಲ್ಲಿ ಪಶುಭಾಗ್ಯ, ಕೃಷಿ ಭಾಗ್ಯ ಯೋಜನೆ ಜಾರಿಗೆ ತಂದಿದ್ದೆ. ಇದರಿಂದ ಸಾವಿರಾರು ರೈತರಿಗೆ ಅನುಕೂಲ ವಾಗಿದೆ ಎಂದ ಅವರು ಶಿರಾ ತಾಲೂಕಿನ ಚೀಲನಹಳ್ಳಿಯಲ್ಲಿ ಆಧುನಿಕ ವಧಾಗಾರ ಸ್ಥಾಪಿಸ ಲಾಗಿದ್ದು, ಉದ್ಘಾಟನೆಗೆ ಸಜ್ಜಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಉದ್ಘಾಟನೆಯಾಗಲಿದ್ದು, ಇದರಿಂದ ತಾಲೂಕಿನ ಕುರಿ ಮೇಕೆ ಸಾಕಾಣಿಕದಾರರಿಗೆ ಅನುಕೂಲವಾಗಲಿದೆ. ತಮ್ಮ ಜಾನುವಾರು ಗಳಿಗೆ ಮಾರುಕಟ್ಟೆ ಮೌಲ್ಯ ಸಿಗುತ್ತದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಹೈನುಗಾರಿಕೆ ಅಳವಡಿಸಿ ಕೊಳ್ಳಿ ಎಂದರು.

ಕಾರ್ಯಕ್ರಮದಲ್ಲಿ ಶಿಬಿ ಅಗ್ರಹಾರ ಪಂಚಾಯ್ತಿಯ ಗ್ರಾಮ ಪಂಚಾಯತಿ ಅಧ್ಯಕ್ಷ ಕೆಂಪಯ್ಯ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಜಗದೀಶ್ ಗೌಡ, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರಮೇಶ್, ಸೇರಿದಂತೆ ಹಲವರು ಹಾಜರಿದ್ದರು.