ವಿದೇಶ ಫ್ಯಾಷನ್‌ ಲೋಕ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್‌ ಹೌಸ್‌ ಸಂಪಾದಕೀಯ

ಜಿಲ್ಲೆಯಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭ : 23 ಪರೀಕ್ಷಾ ಕೇಂದ್ರ‍ 13819 ವಿದ್ಯಾರ್ಥಿಗಳು

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಅರ್ಧಗಂಟೆ ಮುಂಚಿತವಾಗಿ ಕಡ್ಡಾಯವಾಗಿ ಹಾಜರಿರು ವಂತೆ ಸೂಚಿಸಲಾಗಿದೆ.ಮೊಬೈಲ್,ಸ್ಮಾರ್ಟ್ ವಾಚ್, ಮತ್ತು ಇತರೆ ಎಲೆಕ್ಟ್ರಾನಿಕ್ಸ್ ಉಪಕರಣ ಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ ಮುತ್ತಲಿನ ೨೦೦ ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ವೆಂದು ಘೋಷಣೆ ಮಾಡಿದ್ದು,ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ತೆರೆಯದಂತೆ ಎಚ್ಚರಿಕೆ ನೀಡಲಾಗಿದೆ.

ವೆಬ್ ಕ್ಯಾಮೆರಾ ಕಣ್ಗಾವಲಿನಲ್ಲಿ ಪಿಯುಸಿ ಪರೀಕ್ಷೆ

Profile Ashok Nayak Mar 1, 2025 9:14 AM

ನಕಲಿಗೆ ಕಡಿವಾಣ ಹಾಕಲು ಜಿಲ್ಲಾಡಳಿತ ಸಜ್ಜು
ಚಿಕ್ಕಬಳ್ಳಾಪುರ :
ಇಂದಿನಿಂದ ಜಿಲ್ಲೆಯ ೬ ತಾಲೂಕಿನ ೨೩ ಪರೀಕ್ಷಾ ಕೇಂದ್ರಗಳಲ್ಲಿ  ೧೩೮೧೯ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಬರೆಯುತ್ತಿದ್ದು, ವೆಬ್ ಕ್ಯಾಮೆರಾ ಕಣ್ಗಾವಲಿ ಯಲ್ಲಿ ಪರೀಕ್ಷೆ ನಡೆಯಲಿದೆ. ಸುಗಮವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ರೀತಿಯಲ್ಲಿ ಸಜ್ಜಾಗಿದ್ದು ಬೇಕಾದ ವ್ಯವಸ್ಥೆ ಮಾಡಿ ಕೊಂಡಿದೆ. ಈ ಬಾರಿ ಜಿಲ್ಲೆಯ ೨೩ ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು ೧೩೮೧೯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಬೇಕಾದ ಆಸನ ವ್ಯವಸ್ಥೆ ಕುಡಿಯುವ ನೀರು,ಶೌಚಾಲಯದ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: Children and Pets: ಮನೆಯಲ್ಲಿರುವ ಶ್ವಾನದಿಂದಾಗಿ ಮಗುವಿನ ರೋಗ ನಿರೋಧಕ ಶಕ್ತಿ ಹೆಚ್ಚುತ್ತಾ?

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಅರ್ಧಗಂಟೆ ಮುಂಚಿತವಾಗಿ ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಲಾಗಿದೆ.ಮೊಬೈಲ್,ಸ್ಮಾರ್ಟ್ ವಾಚ್, ಮತ್ತು ಇತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ೨೦೦ ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ವೆಂದು ಘೋಷಣೆ ಮಾಡಿದ್ದು,ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ತೆರೆಯದಂತೆ ಎಚ್ಚರಿಕೆ ನೀಡಲಾಗಿದೆ.

ಪರೀಕ್ಷಾ ಅಕ್ರಮ ತಡೆಯಲು ಮತ್ತು ಸುಗಮವಾಗಿ ಪರೀಕ್ಷೆ ನಡೆಸಲು ತ್ರಿಸದಸ್ಯ ಸಮಿತಿ ರಚಿಸಲಾಗಿದೆ.ಜಿಲ್ಲಾ ಮಟ್ಟದಲ್ಲಿ ಪರೀಕ್ಷಾ ಗೌಪ್ಯ ವಸ್ತುಗಳನ್ನು ಜಿಲ್ಲಾ ಖಜಾನೆಯ ಅಭಿರಕ್ಷೆಯಲ್ಲಿಡಲು ಜಿಲ್ಲಾಧಿಕಾರಿ, ಖಜಾನೆ ಇಲಾಖೆ ಉಪನಿರ್ದೇಶಕ,ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಸಮಿತಿಯಲ್ಲಿ ಇರಲಿದ್ದಾರೆ.

ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆ ಇತ್ಯಾದಿ ಗೌಪ್ಯ ವಸ್ತುಗಳನ್ನು ಸಾಗಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಸಿದ್ದು,ಆಯಾ ತಾಲೂಕಿನ ತಹಶೀಲ್ದಾರರು ಇದರ ಬಗ್ಗೆ ಜಾಗೃತೆ ವಹಿಸಲಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮರಿಸ್ವಾಮಿ ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರಗಳ ಹೆಸರು
ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ೪ ಪರೀಕ್ಷಾ ಕೇಂದ್ರಗಳಿದ್ದು ಕ್ರಮವಾಗಿ ಪಂಚಗಿರಿ ಪದವಿ ಪೂರ್ವ ಕಾಲೇಜು, ಸರಕಾರಿ ಪದವಿ ಪೂರ್ವ ಕಾಲೇಜು, ಬಿಜಿಎಸ್ ಪದವಿಪೂರ್ವ ಕಾಲೇ ಜು ಅಗಲಗುರ್ಕಿ,ಸರ್.ಎಂ.ವಿ.ಮೆಮೋರಿಯಲ್ ಪದವಿಪೂರ್ವ ಕಾಲೇಜು. ಸೆಂಟ್ ಜೋಸೆಫ್ ಬಾಲಕಿಯರ ಪದವಿ ಪೂರ್ವ ಕಾಲೇಜನಲ್ಲಿ ಪರೀಕ್ಷೆಗಳು ನಡೆಯಲಿವೆ.
ಬಾಗೇಪಲ್ಲಿಯಲ್ಲಿ ನ್ಯಾಷನಲ್ ಪದವಿ ಪೂರ್ವ ಕಾಲೇಜು,ಸರಕಾರಿ ಪದವಿ ಪೂರ್ವ ಕಾಲೇಜು,ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆ ನಡೆಯಲಿದೆ.

ಗೌರಿಬಿದನೂರು ತಾಲೂಕಿನ ಎಇಎಸ್ ನ್ಯಾಷನಲ್ ಪದವಿಪೂರ್ವ ಕಾಲೇಜು, ಎಸ್‌ಎಸ್‌ಇಎ ಸರಕಾರಿ ಪದವಿ ಪೂರ್ವ ಕಾಲೇಜು,ಆಚಾರ್ಯ ಪದವಿಪೂರ್ವ ಕಾಲೇಜು, ಲೀರ‍್ಸ್ ಪದವಿಪೂರ್ವ ಕಾಲೇಜು, ಶಿಡ್ಲಘಟ್ಟ ತಾಲೂಕಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಶಿಡ್ಲಘಟ್ಟ, ಸ್ವಾಮಿವಿವೇಕಾನಂದ ಪದವಿಪೂರ್ವ ಕಾಲೇಜು ಮಳ್ಳೂರು, ಬಿಜಿಎಸ್ ಪದವಿ ಪೂರ್ವ ಕಾಲೇಜು ಹನುಮಂತಪುರ. ಚಿಂತಾಮಣಿ ತಾಲೂಕಿನಲ್ಲಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು,ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜು,ರಾಯಲ್ ಪದವಿ ಪೂರ್ವ ಕಾಲೇಜು,ವೆಂಕಟಾದ್ರಿ ಸ್ವತಂತ್ರ ಪದವಿಪೂರ್ವ ಕಾಲೇಜು,ವಿಕ್ರಮ್ ಪದವಿ ಪೂರ್ವ ಕಾಲೇಜು, ಗುಡಿಬಂಡೆಯ ಸರಕಾರಿ ಪದವಿ ಪೂರ್ವ ಕಾಲೇಜು ಸೇರಿ ಒಟ್ಟು ೨೩ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ.

ಒಟ್ಟಾರೆ ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳ ಬದುಕಿಗೆ ತಿರುವು ನೀಡುವ ಪರೀಕ್ಷೆ ಆಗಿರುವುದರಿಂದ ಜಿಲ್ಲಾಡಳಿತ ಎಲ್ಲೂ ಲೋಪವಾಗದಂತೆ ಕ್ರಮವಹಿಸಿದೆ.ಯಶಸ್ವಿಯಾಗಿ ಪರೀಕ್ಷೆ ಬರೆದು ಉತ್ತಮ ರೀತಿಯಲ್ಲಿ ಭವಿಷ್ಯ ಕಟ್ಟಿಕೊಳ್ಳಲಿ ಎಂಬುದು ಪತ್ರಿಕೆಯು ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸುತ್ತದೆ.