contaminated water: ಯಾದಗಿರಿಯ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೂವರ ಸಾವು, ಹಲವು ಜನ ಗಂಭೀರ
Contaminated Water: 10 ದಿನಗಳ ಹಿಂದೆ ಕಲುಷಿತ ನೀರು ಸೇವಿಸಿ ತಿಪ್ಪನಟಗಿ ಗ್ರಾಮಸ್ಥರು ವಾಂತಿ-ಭೇದಿಯಿಂದ ಬಳಲಿ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ದುರದೃಷ್ಟವಶಾತ್ ಸೋಮವಾರ (ಜು. 07) ಚಿಕಿತ್ಸೆ ಫಲಿಸದೆ ಗ್ರಾಮದ ಮೂವರು ಮೃತಪಟ್ಟಿದ್ದಾರೆ. ಆರು ಜನರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಾಂದರ್ಭಿಕ ಚಿತ್ರ

ಯಾದಗಿರಿ: ಯಾದಗಿರಿ (Yadgiri) ಜಿಲ್ಲೆಯ ಸುರಪುರ (Surapura) ತಾಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ಕಲುಷಿತ ನೀರು (contaminated water) ಸೇವಿಸಿ ಮೂವರು (death) ಮೃತಪಟ್ಟಿದ್ದಾರೆ. ದೇವಿಕೆಮ್ಮ ಹೊಟ್ಟಿ (48), ವೆಂಕಮ್ಮ (60), ರಾಮಣ್ಣ ಪೂಜಾರಿ (50) ಮೃತ ದುರ್ದೈವಿಗಳು. 10 ದಿನಗಳ ಹಿಂದೆ ಕಲುಷಿತ ನೀರು ಸೇವಿಸಿ ತಿಪ್ಪನಟಗಿ ಗ್ರಾಮಸ್ಥರು ವಾಂತಿ-ಭೇದಿಯಿಂದ ಬಳಲಿ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ದುರದೃಷ್ಟವಶಾತ್ ಸೋಮವಾರ (ಜು. 07) ಚಿಕಿತ್ಸೆ ಫಲಿಸದೆ ಗ್ರಾಮದ ಮೂವರು ಮೃತಪಟ್ಟಿದ್ದಾರೆ. ಆರು ಜನರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇನ್ನೂ 20 ಜನ ಅಸ್ವಸ್ಥ ಸ್ಥಿತಿಯಲ್ಲಿದ್ದಾರೆ.
ತಿಪ್ಪನಟಗಿ ಗ್ರಾಮಕ್ಕೆ ಸುರಪುರ ತಾಲೂಕು ಆರೋಗ್ಯ ಅಧಿಕಾರಿ ರಾಜಾ ವೆಂಕಟಪ್ಪ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಂತಿ ಭೇದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಜಿಲ್ಲಾ ಆರೋಗ್ಯ ಅಧಿಕಾರಿ ಮಹೇಶ ಬಿರಾದಾರ ಸೂಚನೆ ಆದೇಶಿಸಿದ್ದಾರೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮ್ಯಾನೇಜರ್ ಕಿರುಕುಳ, ಕೆಎಸ್‌ಆರ್‌ಟಿಸಿ ಬಸ್ ಚಾಲಕ ಆತ್ಮಹತ್ಯೆ ಯತ್ನ
ಹಾಸನ : ಹಾಸನದಲ್ಲಿ (Hassan News)ಕೆಎಸ್ಆರ್ಟಿಸಿ (KSRTC) ಡಿಪೋ ಮ್ಯಾನೇಜರ್‌ನಿಂದ ಕಿರುಕುಳ (Harassment) ಆರೋಪದ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಬಸ್ ಡ್ರೈವರ್ ಕಂ ಕಂಡಕ್ಟರ್ ಹರೀಶ್ ಎನ್ನುವವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ. ಚಾಲಕರ ವಿಶ್ರಾಂತಿ ಕೊಠಡಿಯಲ್ಲಿ ವಿಷ ಕುಡಿದು ಚಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಡಿಪೋ ಮ್ಯಾನೇಜರ್ ಶಾಜಿಯಾ ಬಾನು ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದ್ದು, ಕೆಲಸದ ವಿಷಯವಾಗಿ ಹರೀಶ್ ಮತ್ತು ಶಾಜಿಯ ಬಾನು ನಡುವೆ ವಾಗ್ವಾದ ನಡೆದಿದೆ. ನಂತರ ವಿಶ್ರಾಂತಿ ಕೊಠಡಿಗೆ ಹೋಗಿ ಹರೀಶ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥಗೊಂಡ ಹರೀಶ್‌ಗೆ ಬೇಲೂರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸ್ಥಳಕ್ಕೆ ಶಾಸಕ ಎಚ್. ಕೆ ಸುರೇಶ್ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Heart Attack: ನಿಲ್ಲದ ಹೃದಯಾಘಾತ ಸಾವಿನ ಸರಣಿ, ನಿನ್ನೆ ಒಂದೇ ದಿನ 8 ಮಂದಿ ಸಾವು