ಇಂದಿನಿಂದ ಟೀಮ್ ಇಂಡಿಯಾ ಅಭ್ಯಾಸ; ಕೊಹ್ಲಿ, ರೋಹಿತ್‌ಗೆ ಅಗ್ನಿ ಪರೀಕ್ಷೆ
ಕಮ್‌ಬ್ಯಾಕ್ ಮಾಡಲು ರಣಜಿ ಆಡಲಿಳಿದಿದ್ದ ರೋಹಿತ್ ಶರ್ಮ, ವಿರಾಟ್ ಕೊಹ್ಲಿ, ರಿಷಭ್ ಪಂತ್ ಮತ್ತು ಕೆ.ಎಲ್ ರಾಹುಲ್ ವಿಫಲರಾಗಿದ್ದರು. ಇದೀಗ ಈ ಸರಣಿಯಲ್ಲಾದರೂ ನಿರೀಕ್ಷಿತ ಪ್ರದರ್ಶನ ತೋರುವ ಮೂಲಕ ಚಾಂಪಿಯನ್ಸ್ ಟ್ರೋಫಿಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಇದೊಂದು ಉತ್ತಮ ವೇದಿಕೆಯಾಗಿದೆ.
ನಾಗ್ಪುರ: ಪ್ರವಾಸಿ ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಗೆದ್ದ ಜೋಶ್‌ನಲ್ಲಿರುವ ಭಾರತ ತಂಡ(IND vs ENG) ಇದೀಗ ಏಕದಿನ ಸರಣಿಯನ್ನಾಡಲು ಸಜ್ಜಾಗಿದೆ. ಇತ್ತಂಡಗಳ ನಡುವಣ ಮೊದಲ ಏಕದಿನ ಪಂದ್ಯ ಫೆ.6ರಂದು ನಾಗ್ಪುರದಲ್ಲಿ(Nagpur) ನಡೆಯಲಿದೆ.
ಈಗಾಗಲೇ ಭಾರತ ಕ್ರಿಕೆಟ್ ತಂಡದ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಯಶಸ್ವಿ ಜೈಸ್ವಾಲ್ ಸೇರಿ ತಂಡದ ಎಲ್ಲ ಆಟಗಾರರು ನಾಗ್ಪುರ ತಲುಪಿದ್ದು, ಇಂದಿನಿಂತ ಅಭ್ಯಾಸ ಆರಂಭಿಸಲಿದ್ದಾರೆ.
ಕಮ್‌ಬ್ಯಾಕ್ ಮಾಡಲು ರಣಜಿ ಆಡಲಿಳಿದಿದ್ದ ರೋಹಿತ್ ಶರ್ಮ, ವಿರಾಟ್ ಕೊಹ್ಲಿ, ರಿಷಭ್ ಪಂತ್ ಮತ್ತು ಕೆ.ಎಲ್ ರಾಹುಲ್ ವಿಫಲರಾಗಿದ್ದರು. ಇದೀಗ ಈ ಸರಣಿಯಲ್ಲಾದರೂ ನಿರೀಕ್ಷಿತ ಪ್ರದರ್ಶನ ತೋರುವ ಮೂಲಕ ಚಾಂಪಿಯನ್ಸ್ ಟ್ರೋಫಿಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಇದೊಂದು ಉತ್ತಮ ವೇದಿಕೆಯಾಗಿದೆ.
ಇದನ್ನೂ ಓದಿ IND vs ENG: ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಸೂರ್ಯಕುಮಾರ್ ಯಾದವ್ ವಿರುದ್ಧ ಅಶ್ವಿನ್ ಕಿಡಿ!
ಭಾರತ ತಂಡ
ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಆರ್ಶದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ರವೀಂದ್ರ ಜಡೇಜಾ.
ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮಿ ಓವರ್ಟನ್, ಜೇಮಿ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಜೋ ರೂಟ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.
ಏಕದಿನ ಸರಣಿ ವೇಳಾಪಟ್ಟಿ
ಮೊದಲ ಏಕದಿನ: ಫೆ.6, ನಾಗ್ಪುರ
ದ್ವಿತೀಯ ಏಕದಿನ: ಫೆ. 9, ಕಟಕ್
ತೃತೀಯ ಏಕದಿನ: ಫೆ.12, ಅಹಮದಾಬಾದ್