Road Accident: ಭೀಕರ ರಸ್ತೆ ಅಪಘಾತ; ಕಾರಿಗೆ ಲಾರಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವು
ಕಾರಿಗೆ ಲಾರಿ ಗುದ್ದಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ. ವೆಂಕಟೇಶ್, ಪತ್ನಿ ಚೈತ್ರಾ ಹಾಗೂ 7 ತಿಂಗಳದ ಮಗು ಶ್ರೀಹಾನ್ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಅರಬೈಲ್ ಘಟ್ಟ ಬಳಿ ಲಾರಿ ಓವರಟೇಕ್ ಮಾಡುವ ಭರದಲ್ಲಿ ವೆಂಕಟೇಶ್ ಅವರ ಕಾರಿಗೆ ಗುದ್ದಿದೆ ಎನ್ನಲಾಗಿದೆ.

ಸಾಂದರ್ಭಿಕ ಚಿತ್ರ.

ಉತ್ತರ ಕನ್ನಡ: ಕಾರಿಗೆ ಲಾರಿ ಗುದ್ದಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ (Road Accident). ಪ್ರವಾಸಕ್ಕೆಂದು ಕೊಪ್ಪಳದಿಂದ ಅಂಕೋಲಾ ಕಡೆಗೆ ಹೊರಟಿದ್ದ ಪತಿ, ಪತ್ನಿ ಮತ್ತು ಮಗು ಇಹಲೋಕ ತ್ಯಜಿಸಿದ್ದಾರೆ. ವೆಂಕಟೇಶ್, ಪತ್ನಿ ಚೈತ್ರಾ ಹಾಗೂ 7 ತಿಂಗಳದ ಮಗು ಶ್ರೀಹಾನ್ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಅರಬೈಲ್ ಘಟ್ಟ ಬಳಿ ಲಾರಿ ಓವರಟೇಕ್ ಮಾಡುವ ಭರದಲ್ಲಿ ವೆಂಕಟೇಶ್ ಅವರ ಕಾರಿಗೆ ಗುದ್ದಿದೆ ಎನ್ನಲಾಗಿದೆ.
ಲಾರಿ ಗುದ್ದಿದ ರಭಸಕ್ಕೆ ಕಾರು ಸಂಪೂರ್ಣ ನುಜ್ಜಗುಜ್ಜಾಗಿದೆ. ಇನ್ನು ಕಾರಿನಲ್ಲಿದ್ದ ವೆಂಕಟೇಶ್ ಅವರ ಸಹೋದರ ಶ್ರೀಕಾಂತ ರೆಡ್ಡಿ ಅವರಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲಕ, ವಿಜಯಪುರ ಮೂಲದ ಪ್ರಶಾಂತ ಕುಂಬಾರನ ವಿರುದ್ಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಆಟವಾಡುತ್ತಿದ್ದ ಮಗು ಮೇಲೆ ಹರಿದ ಜೆಸಿಬಿ
ಬೆಂಗಳೂರು: ಜೆಸಿಬಿ ಹರಿದು ಆಟವಾಡುತ್ತಿದ್ದ 2 ವರ್ಷದ ಮಗು ದುರ್ಮರಣ ಹೊಂದಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಬಳಿಯ ಸಿಟಿ ಲೇಔಟ್ನಲ್ಲಿ ನಡೆದಿದೆ. ಮೃತ ಮಗುವನ್ನು ಥನವ್ ರೆಡ್ಡಿ ಎಂದು ಗುರುತಿಸಲಾಗಿದೆ. ಜೆಸಿಬಿ ಚಾಲಕನ ಅತಿವೇಗ, ಅಜಾಗರೂಕತೆಯಿಂದ ದುರ್ಘಟನೆ ಸಂಭವಿಸಿದೆ. ಮಹದೇವಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ತಲೆ ಮರೆಸಿಕೊಂಡಿರುವ ಜೆಸಿಬಿ ಚಾಲಕನಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.
ಆಂಧ್ರದ ಮದನಪಲ್ಲಿ ಮೂಲದ ದಂಪತಿಯ ಪುತ್ರ ಥವನ್. ಆಟವಾಡುತ್ತಿದ್ದ ಥವನ್ ಜೆಸಿಬಿ ಕೆಳಗೆ ಸಿಲುಕಿಕೊಂಡಿದ್ದ. ಈ ವಿಚಾರ ಜೆಸಿಬಿ ಚಾಲಕನಿಗೆ ಗೊತ್ತೇ ಆಗಿರಲಿಲ್ಲ. ಮಗು ಬಿದ್ದಿರುವುದನ್ನು ನೋಡಿ ಪೋಷಕರು ಕಿರುಚಿಕೊಂಡಿದ್ದರು. ಬಳಿಕ ಜೆಸಿಬಿ ಚಾಲಕನಿಗೆ ವಿಚಾರ ಗೊತ್ತಾಗಿ ಎಸ್ಕೇಪ್ ಆಗಿದ್ದಾನೆ.
ಈ ಸುದ್ದಿಯನ್ನೂ ಓದಿ: Murder Case: ಕುಡಿಯಬೇಡ ಎಂದು ಬುದ್ಧಿ ಹೇಳಿದ ತಂದೆಗೆ ಚಾಕುವಿನಿಂದ ಇರಿದು ಕೊಂದ ಮಗ
ಪಾನಮತ್ತರಾಗಿ ಕಾರು ಚಲಾಯಿಸಿ ಮರಕ್ಕೆ ಡಿಕ್ಕಿ; ಇಬ್ಬರು ಸಾವು
ಬೆಂಗಳೂರು: ಪಾನಮತ್ತರಾಗಿ ನಿರ್ಲಕ್ಷ್ಯದಿಂದ ಚಲಾಯಿಸಿದ ಪರಿಣಾಮ ಕಾರು ಮರಕ್ಕೆ ಡಿಕ್ಕಿಯಾಗಿ ಸ್ಥಳದಲ್ಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಬಳಿಯ ರಾಗಿಹಳ್ಳಿ ಅರಣ್ಯ ಪ್ರದೇಶದಲ್ಲಿ ಸಂಭವಿಸಿದೆ. ಇನ್ನಿಬ್ಬರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಕೇರಳ ಮೂಲದ ಸಾಹಹುಕ್ (28) ಹಾಗೂ ಅರ್ಶು (23) ಎಂದು ಗುರುತಿಸಲಾಗಿದೆ. ಗಾಯಗೊಂಡ ದೇವನಾರಾಯಣ ಮತ್ತು ಸಾಹಿಲ್ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕುಡಿದ ಮತ್ತಿನಲ್ಲಿ ವೇಗವಾಗಿ ಕಾರು ಚಲಾಯಿಸಿ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ ಎಂದು ತಿಳಿದುಬಂದಿದೆ. ಮೃತ ವಿದ್ಯಾರ್ಥಿಗಳು ಗೊಟ್ಟಿಗೆರೆಯ ಟಿ ಜಾನ್ ಕಾಲೇಜಿನ ವಿದ್ಯಾರ್ಥಿಗಳು ಎನ್ನಲಾಗಿದ್ದು, ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.