#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Pakistan Military : 3 ಪ್ರತ್ಯೇಕ ದಾಳಿಗಳಲ್ಲಿ 30 ಪಾಕ್‌ ಉಗ್ರರ ಹತ್ಯೆ

ಪಾಕಿಸ್ತಾನದ ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಸೇನೆ 30 ಉಗ್ರರರನ್ನು ಹತ್ಯೆ ಮಾಡಿದೆ ಎಂದು ತಿಳಿದು ಬಂದಿದೆ. ಲಕ್ಕಿ ಮಾರ್ವತ್, ಕರಕ್ ಮತ್ತು ಖೈಬರ್ ಜಿಲ್ಲೆಗಳಲ್ಲಿ ಗುಪ್ತಚರ ಮಾಹಿತಿಯ ಮೇರೆಗೆ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ನಡೆಸಲಾಗಿದೆ.

ಪಾಕ್‌ ಸೇನಾ ಕಾರ್ಯಚರಣೆಯಲ್ಲಿ 30 ಉಗ್ರರ ಉಡೀಸ್‌

Pakistan Army

Profile Vishakha Bhat Jan 26, 2025 1:21 PM

ಇಸ್ಲಾಮಾಬಾದ್‌ : ಪಾಕಿಸ್ತಾನದ (Pakistan Military) ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆದ ಮೂರು ಪ್ರತ್ಯೇಕ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ 30 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕ್‌ ಸೇನೆ ತಿಳಿಸಿದೆ. ಲಕ್ಕಿ ಮಾರ್ವತ್, ಕರಕ್ ಮತ್ತು ಖೈಬರ್ ಜಿಲ್ಲೆಗಳಲ್ಲಿ ಗುಪ್ತಚರ ಮಾಹಿತಿಯ ಮೇರೆಗೆ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ನಡೆಸಲಾಯಿತು.

ಲಕ್ಕಿ ಮಾರ್ವತ್ ಜಿಲ್ಲೆಯಲ್ಲಿ 18 ಭಯೋತ್ಪಾದಕರನ್ನು ಕೊಲ್ಲಲಾಗಿದ್ದರೆ ಕರಕ್ನಲ್ಲಿ ಎಂಟು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಸೇನೆ ಹೇಳಿಕೆಯಲ್ಲಿ ತಿಳಿಸಿದೆ. ಲಕ್ಕಿ ಮಾರ್ವತ್ ಎನ್ಕೌಂಟರ್ನಲ್ಲಿ ಆರು ಭಯೋತ್ಪಾದಕರು ಗಾಯಗೊಂಡಿದ್ದಾರೆ ಎಂದು ಸೇನೆ ತಿಳಿಸಿದೆ.

ಖೈಬರ್ ಜಿಲ್ಲೆಯ ಬಾಗ್ ಪ್ರದೇಶದಲ್ಲಿ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲಿ, ಭದ್ರತಾ ಪಡೆಗಳು ರಿಂಗ್ ಲೀಡರ್‌ಗಳಾದ ಅಜೀಜ್ ಉರ್ ರೆಹಮಾನ್ ಅಕಾ ಖಾರಿ ಇಸ್ಮಾಯಿಲ್ ಮತ್ತು ಮುಖ್ಲಿಸ್ ಸೇರಿದಂತೆ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಿವೆ ಮತ್ತು ಇಬ್ಬರು ಭಯೋತ್ಪಾದಕರು ಗಾಯಗೊಂಡಿದ್ದಾರೆ . ಕಾರ್ಯಾಚರಣೆಯ ಸಮಯದಲ್ಲಿ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಮತ್ತು ಪ್ರಧಾನಿ ಶೆಹಬಾಜ್ ಷರೀಫ್ ಯಶಸ್ವಿ ಕಾರ್ಯಾಚರಣೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ ಹಾಗೂ ಭದ್ರತಾ ಪಡೆಗಳನ್ನು ಶ್ಲಾಘಿಸಿದ್ದಾರೆ. ಅಧ್ಯಕ್ಷ ಜರ್ದಾರಿ ಅವರು 30 ಭಯೋತ್ಪಾದಕರ ಹತ್ಯೆಯನ್ನು ಮಹತ್ವದ ಸಾಧನೆ ಎಂದು ಹೇಳಿದ್ದಾರೆ. ಭಯೋತ್ಪಾದನೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವವರೆಗೆ ಭದ್ರತಾ ಪಡೆಗಳ ಕಾರ್ಯಾಚರಣೆ ಮುಂದುವರಿಯುತ್ತದೆ ಎಂದು ಪುನರುಚ್ಚರಿಸಿದರು. ಎಲ್ಲಾ ರೀತಿಯ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಪಾಕಿಸ್ತಾನವು ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಒತ್ತಿ ಹೇಳಿದರು.

ಈ ಸುದ್ದಿಯನ್ನೂ ಓದಿ : Terrorist Encounter: ಜಮ್ಮು-ಕಾಶ್ಮೀರದಲ್ಲಿ ಭರ್ಜರಿ ಸೇನಾ ಕಾರ್ಯಾಚರಣೆ; 5 ಉಗ್ರರು ಉಡೀಸ್‌

ಇತ್ತೀಚೆಗೆ ಖೈಬರ್‌ ಪ್ರಾತ್ಯಂದಲ್ಲಿ ಉಗ್ರ ಚಟುವಟಿಕೆಗಳು ಹೆಚ್ಚಿದ್ದವು. ಕಳೆದ ವರ್ಷ ಉಗ್ರರು ಪೈಶಾಚಿಕ ಕೃತ್ಯ ನಡೆಸಿದ್ದರು. ಖೈಬರ್-ಪಕ್ತುಂಖ್ವಾದ ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಪೋಸ್ಟ್‌ಗೆ ಸ್ಫೋಟಕ ತುಂಬಿದ ಟ್ರಕ್ ನ್ನು ಡಿಕ್ಕಿ ಹೊಡೆಸಿದ ಪರಿಣಾಮ 23 ಯೋಧರು ಮೃತಪಟ್ಟಿದ್ದರು. ಈ ದಾಳಿ ಕೆಲ ದಿನಗಳ ನಂತರ ಆತ್ಮಾಹುತಿ ಬಾಂಬ್‌ ದಾಳಿ ಒಂದು ನಡೆದಿತ್ತು. ಆ ಘಟನೆಯಲ್ಲಿ ಹಲವಾರು ಜನರು ಮೃತಪಟ್ಟಿದ್ದರು.