ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IPS transfer: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಮೇಜರ್‌ ಸರ್ಜರಿ, 34 ಐಪಿಎಸ್‌ ಅಧಿಕಾರಿಗಳ ವರ್ಗಾವಣೆ

IPS transfer: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಪಾಲನೆಯಾಗುತ್ತಿಲ್ಲ ಎಂಬ ಪ್ರತಿಪಕ್ಷಗಳು ಆರೋಪಿಸಿದ್ದವು. ಇದೀಗ ಪೊಲೀಸ್ ಇಲಾಖೆ ಈ ಕ್ರಮ ಕೈಗೊಂಡಿದ್ದು, ಅಪರಾಧ ವಿಭಾಗ, ಸಂಚಾರ ವಿಭಾಗ ಸೇರಿದಂತೆ ಬೆಂಗಳೂರಿನ ವಿವಿಧ ವಿಭಾಗಗಳಲ್ಲಿಯೂ ವರ್ಗ ನಡೆದಿದೆ.

ಪೊಲೀಸ್‌ ಇಲಾಖೆಯಲ್ಲಿ ಮೇಜರ್‌ ಸರ್ಜರಿ, 34 ಐಪಿಎಸ್‌ ಅಧಿಕಾರಿಗಳ ವರ್ಗಾವಣೆ

ಹರೀಶ್‌ ಕೇರ ಹರೀಶ್‌ ಕೇರ Jul 15, 2025 7:47 AM

ಬೆಂಗಳೂರು: ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿ ಮತ್ತೊಂದು ಮೇಜರ್ ಸರ್ಜರಿಯನ್ನು ಕರ್ನಾಟಕ ಪೊಲೀಸ್ (Karnataka Police) ಇಲಾಖೆಯಲ್ಲಿ ಮಾಡಲಾಗಿದೆ. 34 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ (IPS Officer transfer)​ ಆದೇಶ ಹೊರಡಿಸಲಾಗಿದೆ. ಕಳೆದ ಬಾರಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ನಾಲ್ಕಾರು ಜಿಲ್ಲೆಗಳ ಐಪಿಎಸ್‌ ಅಧಿಕಾರಿಗಳನ್ನು (IPS transfer) ಬದಲಾಯಿಸಲಾಗಿತ್ತು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಪಾಲನೆಯಾಗುತ್ತಿಲ್ಲ ಎಂಬ ಪ್ರತಿಪಕ್ಷಗಳು ಆರೋಪಿಸಿದ್ದವು. ಇದೀಗ ಪೊಲೀಸ್ ಇಲಾಖೆ ಈ ಕ್ರಮ ಕೈಗೊಂಡಿದ್ದು, ಅಪರಾಧ ವಿಭಾಗ, ಸಂಚಾರ ವಿಭಾಗ ಸೇರಿದಂತೆ ಬೆಂಗಳೂರಿನ ವಿವಿಧ ವಿಭಾಗಗಳಲ್ಲಿಯೂ ವರ್ಗ ನಡೆದಿದೆ.

ಯಾವ ಐಪಿಎಸ್ ಅಧಿಕಾರಿ, ಯಾವ ಹುದ್ದೆಗೆ ವರ್ಗವಾಗಿದ್ದಾರೆ ಎಂಬ ವಿವರ ಇಲ್ಲಿದೆ:

ಅಕ್ಷಯ್ ಮಚೀಂದ್ರ – ಡಿಸಿಪಿ, ಬೆಂಗಳೂರೂ ಕೇಂದ್ರ ವಿಭಾಗ

ಅಜಯ್ ಹಿಲೋರಿ – ಜಂಟಿ ಪೊಲೀಸ್ ಆಯುಕ್ತ, ಅಪರಾಧ ವಿಭಾಗ

ಪರಶುರಾಮ್ – ಡಿಸಿಪಿ, ವೈಟ್ ಫೀಲ್ಡ್ ವಿಭಾಗ

ಕಾರ್ತಿಕ್ ರೆಡ್ಡಿ – ಜಂಟಿ ಪೊಲೀಸ್ ಆಯುಕ್ತ, ಸಂಚಾರ ವಿಭಾಗ

ಅನೂಪ್ ಶೆಟ್ಟಿ – ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿ, ಸಂಚಾರ

ಶಿವಪ್ರಕಾಶ್ ದೇವರಾಜು – ಲೋಕಾಯುಕ್ತ ಎಸ್​ಪಿ, ಬೆಂಗಳೂರು

ಜಯಪ್ರಕಾಶ್ – ಬೆಂಗಳೂರು ಉತ್ತರ ಸಂಚಾರ ವಿಭಾಗ, ಡಿಸಿಪಿ

ಎಂ.ನಾರಾಯಣ್ – ಎಲೆಕ್ಟ್ರಾನಿಕ್ ಸಿಟಿ ವಿಭಾಗ, ಡಿಸಿಪಿ

ಅನಿತಾ.ಬಿ ಹದ್ದಣ್ಣನವರ್ – ಬೆಂಗಳೂರು ಆಗ್ನೇಯ ವಿಭಾಗ ಡಿಸಿಪಿ

ಸೈದಲು ಅಡಾವತ್ – ಸಿಐಡಿ, ಎಸ್​​ಪಿ

ಬಾಬಾ ಸಾಬ್ ನ್ಯಾಮಗೌಡ – ಬೆಂಗಳೂರು ಉತ್ತರ ವಿಭಾಗ, ಡಿಸಿಪಿ

ನಾಗೇಶ್ – ಬೆಂಗಳೂರು ವಾಯುವ್ಯ ವಿಭಾಗ, ಡಿಸಿಪಿ

ಶ್ರೀಹರಿ ಬಾಬು – ಬೆಂಗಳೂರು ಸಿಸಿಬಿ ಡಿಸಿಪಿ

ಸೌಮ್ಯಲತಾ – ಸಿಎಆರ್ ಹೆಡ್ ಕ್ವಾರ್ಟರ್ಸ್, ಡಿಸಿಪಿ

ಎಂ.ಎನ್.ಅನುಚೇತ್ – ಡಿಐಜಿ ನೇಮಕಾತಿ ವಿಭಾಗ

ವರ್ತಿಕಾ ಕಟೀಯಾರ್ – ಬಳ್ಳಾರಿ ವಲಯ, ಡಿಐಜಿ

ಶಾಂತರಾಜು – ಎಸ್​​ಪಿ, ಗುಪ್ತಚರ ಇಲಾಖೆ

ಸಿರಿಗೌರಿ – ಎಸ್​​ಪಿ, ರಾಜ್ಯ ಅಪರಾಧ ದಾಖಲೆ ವಿಭಾಗ

ಸುಮನ್.ಡಿ ಪೆನ್ನೆಕರ್ – ಡಿಸಿಪಿ, ಇಂಟಲಿಜೆನ್ಸ್

ಸಿಮಿ ಮರೀಯ ಜಾರ್ಜ್‌ – ಡಿಸಿಪಿ, ದಕ್ಷಿಣ ವಿಭಾಗ ಸಂಚಾರ

ವೈ.ಅಮರನಾಥ್ – ಕಮಾಂಡೆಂಟ್ ಫಸ್ಟ್ ಬೆಟಾಲಿಯನ್ KSRP

ಯಶೋಧ ವಟ್ಟಗೋಡಿ – ಎಸ್​ಪಿ, ಹಾವೇರಿ

ಗುಂಜನ್ ಅರ್ಯಾ – ಎಸ್​ಪಿ, ಧಾರವಾಡ

ಎಂ.ಗೋಪಾಲ್ – ಜಂಟಿ ನಿರ್ದೇಶಕ, ಎಫ್​​ಎಸ್​ಎಲ್ ಬೆಂಗಳೂರು

ಸಿದ್ಧಾರ್ಥ ಗೋಯಲ್ – ಎಸ್​ಪಿ, ಬಾಗಲಕೋಟೆ

ರೋಹನ್ ಜಗದೀಶ್ – ಎಸ್​ಪಿ, ಗದಗ

ಶಿವಾಂಶು ರಜಪೂತ – ಎಸ್​ಪಿ, ಕೆಜಿಎಫ್

ಜಿತೇಂದ್ರ ಕುಮಾರ್ – ಡಿಸಿಪಿ ಕಾನೂನು ಸುವ್ಯವಸ್ಥೆ, ಮಂಗಳೂರು ನಗರ

ಎಂ.ಎನ್​​.ದೀಪನ್ – ಎಸ್​ಪಿ, ಉತ್ತರ ಕನ್ನಡ

ಎಸ್​.ಜಾನವಿ – ಎಸ್​ಪಿ, ವಿಜಯನಗರ

ಇದನ್ನೂ ಓದಿ: IPS officers Transfer: ಐವರು ಐಪಿಎಸ್‌ ಅಧಿಕಾರಿಗಳ ವರ್ಗ; ಗುಪ್ತಚರ ವಿಭಾಗದ ಎಡಿಜಿಪಿಯಾಗಿ ಎಸ್‌.ರವಿ ವರ್ಗಾವಣೆ