Actress Ramya: ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿದ 48 ಕಿಡಿಗೇಡಿಗಳ ಐಪಿ ಅಡ್ರೆಸ್ ಪತ್ತೆ, ಮುಂದಿದೆ ಮಾರಿಹಬ್ಬ!
Actor Darshan: ಮಾಜಿ ಸಂಸದೆ, ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿ ನಿಂದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ. ಒಟ್ಟು 48 ಜನರ ಐಪಿ ಅಡ್ರೆಸ್ ಅನ್ನು ಸಿಸಿಬಿ ತಂಡ ಪತ್ತೆ ಹಚ್ಚಿದೆ. ಇವರಲ್ಲಿ ನಾಲ್ವರನ್ನು ಸಿಸಿಬಿ ಪೊಲೀಸರು ಆರೆಸ್ಟ್ ಮಾಡಿದ್ದಾರೆ.


ಬೆಂಗಳೂರು: ನಟಿ ರಮ್ಯಾ (Actress Ramya) ಅವರಿಗೆ ಸಾಮಾಜಿಕ ಜಾಲತಾಣದಲ್ಲಿ (Social media) ನಟ ದರ್ಶನ್ (Actor Darshan) ಅಭಿಮಾನಿಗಳು ಎನ್ನಿಸಿಕೊಂಡವರು ಅಶ್ಲೀಲವಾಗಿ ಮೆಸೇಜ್ (Obscene message) ಮಾಡಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗ ಸಿಸಿಬಿ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ನಟಿ ರಮ್ಯಾಗೆ ಮೆಸೇಜ್ ಮಾಡಿದ್ದ ಒಟ್ಟು 48 ಜನರ ಐಪಿ ಅಡ್ರೆಸ್‌ಗಳನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಇದುವರೆಗೂ ಒಟ್ಟು 15 ಜನರನ್ನು ಗುರುತಿಸಿದ್ದು, ನಾಲ್ವರನ್ನು ಸಿಸಿಬಿ ಪೊಲೀಸರು ಆರೆಸ್ಟ್ ಮಾಡಿದ್ದಾರೆ.
ಮಾಜಿ ಸಂಸದೆ ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿ ನಿಂದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ. ಒಟ್ಟು 48 ಜನರ ಐಪಿ ಅಡ್ರೆಸ್ ಅನ್ನು ಸಿಸಿಬಿ ತಂಡ ಪತ್ತೆ ಹಚ್ಚಿದೆ. ಇವರಲ್ಲಿ 15 ಜನರನ್ನು ಗುರುತಿಸಲಾಗಿದ್ದು ನಾಲ್ವರನ್ನು ಸಿಸಿಬಿ ಪೊಲೀಸರು ಆರೆಸ್ಟ್ ಮಾಡಿದ್ದಾರೆ. ಅಶ್ಲೀಲವಾಗಿ ಕಮೆಂಟ್ ಮಾಡಿದವರಿಗೆ ಇದೀಗ ಪೊಲೀಸರು ಬಿಸಿ ಮುಟ್ಟಿಸುತ್ತಿದ್ದಾರೆ.
ಚಿಕ್ಕಮಂಗಳೂರು, ಚಿತ್ರದುರ್ಗ ಹಾಗೂ ಕೋಲಾರ ಭಾಗದವರೇ ಹೆಚ್ಚು ಅಶ್ಲೀಲವಾಗಿ ಮೆಸೇಜ್ ಮಾಡಿದ್ದಾರೆ. ಸಾಮಾನ್ಯವಾಗಿ ಕಮೆಂಟ್ ಮಾಡಿದವರಿಗೆ ಕರೆಸಿ ವಾರ್ನಿಂಗ್ ಕೊಡಲಾಗುತ್ತಿದೆ. ಉಳಿದ ಕೆಲವರು ಐಪಿ ಅಡ್ರೆಸ್ ಬ್ಲಾಕ್ ಮಾಡಿಕೊಂಡು ಮನೆ ಬಿಟ್ಟು ಪರಾರಿಯಾಗಿದ್ದಾರೆ. ನಾರ್ಮಲ್ ಆಗಿ ಕಮೆಂಟ್ ಮಾಡಿದವರು ಈ ಬಗ್ಗೆ ಕ್ಷಮೆ ಕೇಳಿದ್ದಾರೆ. ಅರಿವಿಲ್ಲದೆ ಮೆಸೇಜ್ ಮಾಡಿದ್ದರ ಬಗ್ಗೆ ಕೆಲವರು ಕ್ಷಮೆ ಕೇಳಿದ್ದಾರೆ.
ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್ ಬೇಲ್ ವಿಚಾರವಾಗಿ ನಡೆಯುತ್ತಿರುವ ವಿಚಾರಣೆಯ ಹಿನ್ನೆಲೆಯಲ್ಲಿ ರಮ್ಯಾ ತಮ್ಮ ಅಭಿಪ್ರಾಯ ಪೋಸ್ಟ್ ಮಾಡಿದ್ದರು. ಅದಕ್ಕೆ ಡಿ ಬಾಸ್ ಫ್ಯಾನ್ಸ್ ರೊಚ್ಚಿಗೆದ್ದು ಕಮೆಂಟ್ ಮಾಡಿದ್ದರು. ದರ್ಶನ್ ಫ್ಯಾನ್ಸ್ ಅಶ್ಲೀಲ ಸಂದೇಶ ಕಳುಹಿಸಿದ ಸಂಬಂಧ ನಟಿ ರಮ್ಯಾ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ದೂರು ನೀಡಿದ್ದರು. ಈ ದೂರು ಆಧರಿಸಿ ಪ್ರಮೋದ್ ಗೌಡ ಸೇರಿದಂತೆ 48 ಅಕೌಂಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ದೂರನ್ನು ಕೇಂದ್ರ ವಿಭಾಗದ ಸೆನ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು.
ಇದನ್ನೂ ಓದಿ: Actress Ramya: ನಟಿ ರಮ್ಯಾಗೆ ಖಾಸಗಿ ಅಂಗದ ಫೋಟೊ, ವಿಡಿಯೊ ಕಳುಹಿಸಿದ್ದ ದರ್ಶನ್ ಅಭಿಮಾನಿ!