Shocking News: ಆಟ ಆಡುತ್ತಿದ್ದಾಗಲೇ ಕುಸಿದು ಬಿದ್ದು ಅಂಗನವಾಡಿ ಬಾಲಕಿ ಸಾವು
ಆಟವಾಡುತ್ತಿದ್ದಾಗ ಅಲಿಯಾ ಮೊಹಮ್ಮದ್ ರಿಯಾಜ್ (5) ಎನ್ನುವ ಬಾಲಕಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾಳೆ. ಕೂಡಲೇ ಬಾಲಕಿಯನ್ನು ದೊಟಿಹಾಳ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಗೆ ಸಾಗಿಸುವ ವೇಳೆಯೇ ಅಲಿಯಾ ಮೊಹಮ್ಮದ್ ರಿಯಾಜ್ ಸಾವನ್ನಪ್ಪಿದ್ದಾಳೆ. ಮೆದುಳಿನಲ್ಲಿ ರಕ್ತಸ್ರಾವ ಆಗಿದ್ದು ತಿಳಿದುಬಂದಿದೆ.

ಸಾಂದರ್ಭಿಕ ಚಿತ್ರ

ಕೊಪ್ಪಳ: ಹೃದಯವೈಫಲ್ಯ (Heart Failure) ಮತ್ತಿತರ ಕಾರಣಗಳಿಂದ ತೀರಾ ಚಿಕ್ಕ ವಯಸ್ಸಿನ ಮಕ್ಕಳೂ ಕುಸಿದು ಬಿದ್ದು (children death) ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇದನ್ನು ಸಾಬೀತುಪಡಿಸುವಂತೆ ಕೊಪ್ಪಳದಲ್ಲಿ ಇನ್ನೊಂದು ಶಾಕಿಂಗ್ ಘಟನೆ (Shocking News) ನಡೆದಿದೆ. ಅಂಗನವಾಡಿಯಲ್ಲಿ ಆಟ ಆಡುತ್ತಿದ್ದಾಗ ಕುಸಿದು ಬಿದ್ದು 5 ವರ್ಷದ ಬಾಲಕಿಯೊಬ್ಬಳು (child death) ಸಾವನ್ನಪ್ಪಿದ್ದಾಳೆ. ಈ ಘಟನೆ ಕೊಪ್ಪಳ (Koppala news) ಜಿಲ್ಲೆಯ ತಾಲೂಕಿನ ತಾಲೂಕಿನ ಬಳೂಟಗಿ ಗ್ರಾಮದಲ್ಲಿ ನಡೆದಿದೆ.
ಆಟವಾಡುತ್ತಿದ್ದಾಗ ಅಲಿಯಾ ಮೊಹಮ್ಮದ್ ರಿಯಾಜ್ (5) ಎನ್ನುವ ಬಾಲಕಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾಳೆ. ಕೂಡಲೇ ಬಾಲಕಿಯನ್ನು ದೊಟಿಹಾಳ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆಸ್ಪತ್ರೆಗೆ ಸಾಗಿಸುವ ವೇಳೆಯೇ ಅಲಿಯಾ ಮೊಹಮ್ಮದ್ ರಿಯಾಜ್ ಸಾವನ್ನಪ್ಪಿದ್ದಾಳೆ. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.
ಇತ್ತೀಚೆಗೆ ಶಿವಮೊಗ್ಗದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಕುಸಿದುಬಿದ್ದು ಸಾವನ್ನಪ್ಪಿದ್ದಳು. ಲೋ ಬಿಪಿಯಿಂದಾಗಿ ಕುಸಿದು ಬಿದ್ದು 13 ವರ್ಷದ ಬಾಲಕ ಮೃತಪಟ್ಟ ಘಟನೆ ನಂಜನಗೂಡು ತಾಲೂಕಿನ ತರಗನಹಳ್ಳಿಯಲ್ಲಿ ನಡೆದಿದೆ. ಇನ್ನಷ್ಟು ಇಂಥ ಘಟನೆಗಳು ರಾಜ್ಯದ, ದೇಶದ ನಾನಾ ಕಡೆಗಳಲ್ಲಿ ವರದಿಯಾಗುತ್ತಿವೆ. ಇಂಥ ಆಕಸ್ಮಿಕ ಸಾವುಗಳ ಅಧ್ಯಯನಕ್ಕಾಗಿ ತಜ್ಞರ ಸಮಿತಿ ರಚಿಸಲು ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.
ಪಾನಮತ್ತರಾಗಿ ಕಾರು ಚಲಾಯಿಸಿ ಮರಕ್ಕೆ ಡಿಕ್ಕಿ, ಇಬ್ಬರು ವಿದ್ಯಾರ್ಥಿಗಳು ಸಾವು
ಬೆಂಗಳೂರು: ಪಾನಮತ್ತರಾಗಿ ನಿರ್ಲಕ್ಷ್ಯದಿಂದ ಚಲಾಯಿಸಿದ ಪರಿಣಾಮ ಕಾರು ಮರಕ್ಕೆ ಡಿಕ್ಕಿಯಾಗಿ ಸ್ಥಳದಲ್ಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಬಳಿ ರಾಗಿಹಳ್ಳಿ ಅರಣ್ಯ ಪ್ರದೇಶದ ರಸ್ತೆ ಬಳಿ ತಡರಾತ್ರಿ ಸಂಭವಿಸಿದೆ. ಇನ್ನಿಬ್ಬರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ.
ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ರಾಗಿಹಳ್ಳಿಯಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲಿಯೇ ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ. ಮೃತರನ್ನು ಕೇರಳ ಮೂಲದ ಸಾಹಹುಕ್ (28) ಹಾಗೂ ಅರ್ಶು (23) ಎಂದು ಗುರುತಿಸಲಾಗಿದೆ. ಗಾಯಗೊಂಡ ದೇವನಾರಾಯಣ ಮತ್ತು ಸಾಹಿಲ್ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕುಡಿದ ಮತ್ತಿನಲ್ಲಿ ವೇಗವಾಗಿ ಕಾರು ಚಲಾಯಿಸಿ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ ಎಂದು ತಿಳಿದುಬಂದಿದೆ. ಮೃತ ವಿದ್ಯಾರ್ಥಿಗಳು ಗೊಟ್ಟಿಗೆರೆಯ ಟಿ ಜಾನ್ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದುಬಂದಿದ್ದು, ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Murder Case: ಬರ್ಬರ ಕೃತ್ಯ; ಅಪರಿಚಿತ ಮಹಿಳೆಯ ರೇಪ್ ಮಾಡಿ ಕೊಲೆ