#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

76th Republic Day: 76ನೇ ಗಣರಾಜ್ಯೋತ್ಸವದ ಸಂಭ್ರಮ; ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಗೆಹ್ಲೋಟ್‌

ರಾಜ್ಯದಲ್ಲಿ 76 ನೇ ಗಣರಾಜ್ಯೋತ್ಸವದ ಸಂಭ್ರಮಾಚರಣೆ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. ಧ್ವಜಾರೋಹಣದ ನಂತರ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ.

76ನೇ ಗಣರಾಜ್ಯೋತ್ಸವದ ಸಂಭ್ರಮ;  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರಿಂದ  ಧ್ವಜಾರೋಹಣ

Republic Day

Profile Vishakha Bhat Jan 26, 2025 10:18 AM

ಬೆಂಗಳೂರು: ರಾಜ್ಯದಲ್ಲಿ 76 ನೇ ಗಣರಾಜ್ಯೋತ್ಸವದ (76th Republic Day) ಸಂಭ್ರಮಾಚರಣೆ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ (Thawar chand gehlot) ಅವರು ಧ್ವಜಾರೋಹಣ ನೆರವೇರಿಸಿದರು. ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಪೊಲೀಸ್ ತುಕಡಿಗಳಿಂದ ಗೌರವ ವಂದನೆ ಸ್ವೀಕಾರ ಮಾಡಿದರು.

ನಂತರ ಮಾತನಾಡಿ ನಾಡಿನ ಜನತೆಗೆ 76 ನೇ ಗಣರಾಜ್ಯೋತ್ಸವದ ಶುಭಾಶಯವನ್ನು ತಿಳಿಸಿದರು. ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ರಾಜ್ಯಪಾಲರು ಐದು ಗ್ಯಾರಂಟಿ ಕಲ್ಯಾಣ ಯೋಜನೆಗಳು ಯಶಸ್ವಿಯಾಗಿದ್ದು ದೇಶದ ಗಮನ ಸೆಳೆದಿವೆ ಎಂದರು. ಈ ಯೋಜನೆಗಳಿಂದ ಆರ್ಥಿಕ ಬಿಕ್ಕಟ್ಟು ಉಂಟಾದೀತು, ಅಭಿವೃದ್ಧಿ ಕುಂಠಿತವಾದೀತು ಎಂಬ ಭವಿಷ್ಯ ಸುಳ್ಳಾಗಿದೆ. ಕರ್ನಾಟಕ ರಾಜ್ಯವು ಆರ್ಥಿಕ ಬೆಳವಣಿಗೆ ಮತ್ತು ಸಾಮಾಜಿಕ ನ್ಯಾಯ ಎರಡನ್ನು ನಿಭಾಯಿಸುತ್ತಾ ದೇಶದಲ್ಲೇ ಅತ್ಯುತ್ತಮ ಅಭಿವೃದ್ಧಿ ಸಾಧಿಸುತ್ತಿರುಗ ರಾಜ್ಯಗಳ ಪೈಕಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಹೇಳಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಡಿ ಆಗಸ್ಟ್ 2023ರಿಂದ ಪ್ರತಿ ಕುಟುಂಬದ ಯಜಮಾನಿಯರಿಗೆ ಮಾಸಿಕ 2000 ದರದಲ್ಲಿ ಒಟ್ಟು 35,180.20 ಕೋಟಿ ರೂ ನೆರವು ನೀಡಲಾಗಿದೆ. ಗೃಹಜ್ಯೋತಿಯಲ್ಲಿ 1.62 ಕೋಟಿ ಜನರಿಗೆ ಪ್ರಯೋಜನ ಸಿಕ್ಕಿದೆ. ಶಕ್ತಿ ಯೋಜನೆಯ ಅಡಿ 373.27 ಕೋಟಿ ಟ್ರಿಪ್ ಲಾಭ ಪಡೆಯಲಾಗಿದ್ದು,ಇದಕ್ಕೆ 9051 ಕೋಟಿ ರೂ ಹಣ ವೆಚ್ಚ ಮಾಡಲಾಗಿದೆ. ಯುವನಿಧಿ ಅಡಿ 1,24,176 ಜನ ಅರ್ಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ. ಅನ್ನಭಾಗ್ಯದ ಅಡಿ 4,48,12,382 ಫಲಾನುಭವಿಗಳಿಗೆ ಡಿಬಿಟಿ ಮೂಲಕ 9775.51 ಕೋಟಿ ರೂ ವರ್ಗಾವಣೆ ಮಾಡಲಾಗಿದೆ. ಈವರ್ಷ 13% ನಷ್ಟು ಹಣಕಾಸು ಬೆಳವಣಿಗೆ ಸಾಧಿಸಿದೆ ಎಂದ ರಾಜ್ಯಪಾಲರು ತಮ್ಮ ಭಾಷಣದಲ್ಲಿ ವಿವರಿಸಿದರು.

ಡಿಸೆಂಬರ್ 2024ರ ಅಂತ್ಯದ ವೇಳೆಗೆ ರಾಜ್ಯದ ಆದಾಯ ಸಂಗ್ರಹವೂ ರೂ 1.81.908 ಕೋಟಿಗಳಷ್ಟಿದ್ದು, ವರ್ಷದಿಂದ ವರ್ಷಕ್ಕೆ ಶೇ 14ರಷ್ಟು ಬೆಳವಣಿಗೆಯನ್ನು ಸಾಧಿಸಿಕೊಂಡು ಬಂದಿದೆ. ರಾಜ್ಯಗಳು ಸಂಗ್ರಹಿಸಿದ ಒಟ್ಟು ಜಿಎಸ್​ಟಿ ಆದಾಯದ ವಿಷಯದಲ್ಲಿ ಕರ್ನಾಟಕವೂ ದೇಶದಲ್ಲಿ ಎರಡನೇ ಸ್ಥಾನದಲ್ಲಿ ಇದೆ ಎಂದು ಹೇಳಲು ನನಗೆ ಹರ್ಷವೆನಿಸುತ್ತದೆ ಎಂದು ರಾಜ್ಯಪಾಲರು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ : 76th Republic Day : 76ನೇ ಗಣರಾಜ್ಯೋತ್ಸವ; ಕರ್ತವ್ಯ ಪಥದಲ್ಲಿ ಸೇನಾ ಪರೇಡ್‌ಗೆ ಕ್ಷಣಗಣನೆ

ಸೈಬರ್‌ ಕ್ರೈಂ ಬಗ್ಗೆ ಉಲ್ಲೇಖಿಸಿದ ರಾಜ್ಯಪಾಲರು, ರಾಜ್ಯದಲ್ಲಿ ಸೈಬರ್‌ ಕ್ರೈಂ ಹೆಚ್ಚುತ್ತಿರುವುದು ಆಘಾತಕಾರಿ ಅಂಶವಾಗಿದೆ ಎಂದು ಕಳವಳ ವ್ಯಕ್ತಪಡಸಿದ್ದಾರೆ. ರಾಜ್ಯ ಪೊಲೀಸ್‌ ಇಲಾಖೆ ಸೈಬರ್‌ ಖದೀಮರನ್ನು ಪತ್ತೆ ಮಾಡಲು ಹಾಗೂ ಸೈಬರ್‌ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.