8th Pay Commission : ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ! 8ನೇ ವೇತನ ಆಯೋಗ ರಚನೆಗೆ ಕೇಂದ್ರ ಸರ್ಕಾರ ಅಸ್ತು

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ದೊರೆಕಿದ್ದು, 8 ನೇ ವೇತನ ಆಯೋಗ ಇನ್ನು ಮುಂದೆ ಜಾರಿಗೆ ಬರಲಿದೆ. ಈ ಬಗ್ಗೆ ಇಂದು ಸಂಪುಟದಲ್ಲಿ ತೀರ್ಮಾನವಾಗಿದೆ.

8th Pay commission
Profile Vishakha Bhat January 16, 2025

ಕೇಂದ್ರ ಸರ್ಕಾರಿ (Central Government) ನೌಕರರ (8th Pay Commission) ವೇತನ ಮತ್ತು ಪಿಂಚಣಿದಾರರ ಭತ್ಯೆಗಳನ್ನು ಪರಿಷ್ಕರಿಸಲು 8ನೇ ವೇತನ ಆಯೋಗಕ್ಕೆ ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ 8ನೇ ವೇತನ ಆಯೋಗವನ್ನು ಸ್ಥಾಪಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ತಿಳಿಸಿದ್ದಾರೆ.

ಆಯೋಗದ ಅಧ್ಯಕ್ಷರು ಮತ್ತು ಇಬ್ಬರು ಸದಸ್ಯರನ್ನು ಶೀಘ್ರದಲ್ಲೇ ನೇಮಕ ಮಾಡಲಾಗುವುದು ಎಂದು ಸಚಿವರು ತಿಳಿಸಿದರು. 2025 ರ ಬಜೆಟ್ ಘೋಷಣೆಗಳಿಗೆ ಕೆಲವು ದಿನಗಳ ಮುಂಚಿತವಾಗಿ ಬಂದಿದೆ.

7 ನೇ ವೇತನ ಆಯೋಗವನ್ನು 2016 ರಲ್ಲಿ ಸ್ಥಾಪಿಸಲಾಯಿತು ಮತ್ತು ಅದರ ಅವಧಿಯು 2026 ರಲ್ಲಿ ಕೊನೆಗೊಳ್ಳಲಿದೆ. 7 ನೇ ವೇತನ ಆಯೋಗದ ಅವಧಿ ಮುಗಿಯುವ ಮುನ್ನ, ಕೇಂದ್ರ ಸರ್ಕಾರಿ ನೌಕರರ ವೇತನವನ್ನು ಪರಿಷ್ಕರಿಸಲು 8 ನೇ ವೇತನ ಆಯೋಗವನ್ನು ಸ್ಥಾಪಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಕೇಂದ್ರ ಸರ್ಕಾರಿ ನೌಕರರು, ನೌಕರರ ಸಂಘಗಳು ಕೇಂದ್ರ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್‌ಗೆ 8ನೇ ವೇತನ ಆಯೋಗ ರಚನೆ ಮಾಡಬೇಕು ಎಂದು ಮನವಿ ಸಲ್ಲಿಕೆ ಮಾಡಿದ್ದವು. ಬಜೆಟ್‌ನಲ್ಲಿ ಈ ಬಗ್ಗೆ ಘೋಷಣೆ ನಿರೀಕ್ಷೆ ಮಾಡಲಾಗಿತ್ತು. ಆದರೆ ಈಗ ಸರ್ಕಾರ 8ನೇ ವೇತನ ಆಯೋಗ ರಚನೆಗೆ ಸಮಿತಿ ರಚಿಸಲು ಒಪ್ಪಿಗೆ ಕೊಟ್ಟಿದೆ.

2024ರ ಲೋಕಸಭೆ ಚುನಾವಣೆ ಮುಗಿದು ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದಿತು. ಆಗ ಮಂಡನೆಯಾದ 2024-25 ಪೂರ್ಣ ಪ್ರಮಾಣದ ಬಜೆಟ್‌ನಲ್ಲಿಯೇ 8ನೇ ವೇತನ ಆಯೋಗ ರಚನೆ ಘೋಷಣೆ ನಿರೀಕ್ಷೆ ಮಾಡಲಾಗಿತ್ತು. ಆದರೆ ಯಾವುದೇ ಘೋಷಣೆಯನ್ನು ಸರ್ಕಾರ ಮಾಡಿರಲಿಲ್ಲ. ಇದರಿಂದಾಗಿ ನೌಕರರಿಗೆ ನಿರಾಸೆಯಾಗಿತ್ತು. ರಾಜ್ಯಸಭೆಯ ಕಲಾಪದಲ್ಲಿ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ, "ಸದ್ಯಕ್ಕೆ 8ನೇ ವೇತನ ಆಯೋಗ ರಚನೆ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ" ಎಂದು ಹೇಳಿಕೆ ನೀಡಿದ್ದರು. ಆದರೆ ಕೇಂದ್ರ ಸರ್ಕಾರಿ ನೌಕರರು ವೇತನ ಆಯೋಗ ರಚನೆ ಮಾಡಬೇಕು ಎಂದು ಪಟ್ಟು ಹಿಡಿದಿದ್ದರು. ಸಂಪ್ರದಾಯದಂತೆ 10 ವರ್ಷಗಳಿಗೊಮ್ಮೆ ಅಂದರೆ 2026ರ ಜನವರಿ 1 ರಿಂದ 8ನೇ ವೇತನ ಆಯೋಗದ ವರದಿ ಜಾರಿಗೆ ಬರಬೇಕು.

ಈ ಸುದ್ದಿಯನ್ನೂ ಓದಿ : Budget 2025: 8ನೇ ಬಾರಿಗೆ ಬಜೆಟ್‌ ಮಂಡಿಸಲು ನಿರ್ಮಲಾ ಸೀತಾರಾಮನ್‌ ಸಜ್ಜು; ಈ ಬಾರಿಯ ಪ್ರಮುಖ ಅಂಶಗಳೇನು?

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ