Physical abuse: ಮಂಡ್ಯದಲ್ಲಿ ಹೀನ ಕೃತ್ಯ; ಬುದ್ಧಿಮಾಂದ್ಯ ಯುವತಿ ಮೇಲೆ 17 ವರ್ಷದ ಬಾಲಕನಿಂದ ಅತ್ಯಾಚಾರ!
Physical abuse: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕರಿಕ್ಯಾತನಹಳ್ಳಿಯಲ್ಲಿ ಬುದ್ಧಿಮಾಂದ್ಯ ಯುವತಿ ಮೇಲೆ ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬ ಅತ್ಯಾಚಾರ ಎಸಗಿ, ಜಾತಿನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಅಪ್ರಾಪ್ತ ವಯಸ್ಸಿನ ಬಾಲಕನ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಜಾತಿನಿಂದನೆ ಪ್ರಕರಣ ದಾಖಲಾಗಿದೆ.


ಮಂಡ್ಯ: ಬಿಡದಿಯಲ್ಲಿ ವಿಶೇಷಚೇತನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ (Physical abuse) ಕೇಳಿಬಂದ ಬೆನ್ನಲ್ಲೇ ಮಂಡ್ಯ ಜಿಲ್ಲೆಯಲ್ಲಿ ಬುದ್ಧಿಮಾಂದ್ಯ ಯುವತಿ ಮೇಲೆ ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬ ಅತ್ಯಾಚಾರ ಎಸಗಿ, ಜಾತಿನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ. ಜಿಲ್ಲೆಯ ನಾಗಮಂಗಲ ತಾಲೂಕಿನ ಕರಿಕ್ಯಾತನಹಳ್ಳಿಯಲ್ಲಿ ಶುಕ್ರವಾರ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಗ್ರಾಮದ 19 ವರ್ಷದ ಬುದ್ಧಿಮಾಂದ್ಯ ಯುವತಿ ಮನೆಯವರು ಕಾರ್ಯನಿಮಿತ್ತ ಬೇರೊಂದು ಗ್ರಾಮಕ್ಕೆ ತೆರಳಿದ್ಧ ವೇಳೆ ಮೆಣಸಿನಕಾಯಿ ಕೇಳುವ ನೆಪದಲ್ಲಿ ಯುವತಿ ಮನೆಗೆ ಹೋಗಿದ್ದ ಅದೇ ಗ್ರಾಮದ 17 ವರ್ಷದ ಬಾಲಕ, ಯುವತಿ ಬಾಯಿಗೆ ಬಟ್ಟೆ ಕಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಯುವತಿ ಚೀರಾಟ ಕೇಳಿದ ಪಕ್ಕದ ಮನೆಯಲ್ಲಿದ್ದ ಯುವತಿಯ ಅಜ್ಜಿ ಬಂದು ನೋಡಿದಾಗ ಬಾಲಕನ ಕೃತ್ಯ ಬಯಲಾಗಿದೆ. ಈ ವೇಳೆ ದೌರ್ಜನ್ಯ ತಡೆಯಲು ಬಂದ ಅಜ್ಜಿ ಮೇಲೆ ಬಾಲಕ ಹಲ್ಲೆ ನಡೆಸಿದ್ದಲ್ಲದೇ ಜಾತಿನಿಂದನೆ ಮಾಡಿದ್ದಾನೆಂದು ಯುವತಿಯ ಪೋಷಕರು ಆರೋಪಿಸಿದ್ದಾರೆ.
ದೌರ್ಜನ್ಯಕ್ಕೊಳಗಾದ ಯುವತಿಯ ಪೋಷಕರು ನೀಡಿದ ದೂರಿನನ್ವಯ ಶುಕ್ರವಾರ ರಾತ್ರಿ ಡಿವೈಎಸ್‌ಪಿ ಬಿ.ಚಲುವರಾಜು, ಸಿಪಿಐ ನಿರಂಜನ್ ಹಾಗೂ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ರಾಜೇಂದ್ರ ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಅಪ್ರಾಪ್ತ ವಯಸ್ಸಿನ ಬಾಲಕನ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಜಾತಿನಿಂದನೆ ಪ್ರಕರಣ ದಾಖಲಾಗಿದೆ. ಬಳಿಕ ಪೊಲೀಸರು ಜಡ್ಜ್ ಮುಂದೆ ಬಾಲಕನನ್ನು ಹಾಜರುಪಡಿಸಿ, ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗಿದೆ.
ಈ ಸುದ್ದಿಯನ್ನೂ ಓದಿ | Groom Dies: ಜಮಖಂಡಿಯಲ್ಲಿ ಘೋರ ಘಟನೆ; ತಾಳಿ ಕಟ್ಟಿದ ಹದಿನೈದು ನಿಮಿಷದಲ್ಲೇ ವರ ಸಾವು!
ಬಿಡದಿ ಬಾಲಕಿ ಸಾವು ಪ್ರಕರಣ; ಅತ್ಯಾಚಾರ ನಡೆದಿಲ್ಲ ಎಂದ ಎಫ್‌ಎಸ್ಎಲ್ ವರದಿ

ರಾಮನಗರ: ತಾಲೂಕಿನ ಬಿಡದಿ ಹೋಬಳಿಯ ಭದ್ರಾಪುರದ ಹಕ್ಕಿಪಿಕ್ಕಿ ಕಾಲೊನಿಯಲ್ಲಿ ಶವವಾಗಿ (Bidadi Girl death case) ಪತ್ತೆಯಾಗಿದ್ದ ಮಾತು ಬಾರದ ಮತ್ತು ಕಿವಿ ಕೇಳಿಸದ ಬಾಲಕಿ ಖುಷಿ (15) ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್ಎಲ್) ವರದಿಯಿಂದ ದೃಢಪಟ್ಟಿದೆ. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ ಗೌಡ ಅವರು, ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಮಗಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ತಾಯಿ ಸೇರಿ ಕುಟುಂಬದವರು ಆರೋಪಿಸಿದ್ದರು. ಹಾಗಾಗಿ, ಮರಣೋತ್ತರ ಪರೀಕ್ಷೆ ಸಂದರ್ಭದಲ್ಲಿ ಬಾಲಕಿ ದೇಹದ 32 ಮಾದರಿಗಳನ್ನು ಸಂಗ್ರಹಿಸಿ ಎಫ್‌ಎಸ್ಎಲ್‌ಗೆ ಕಳುಹಿಲಾಗಿತ್ತು. ಇಂದು ಸಂಜೆ ಕೈ ಸೇರಿದ ವರದಿಯಲ್ಲಿ ಅತ್ಯಾಚಾರ ನಡೆದಿಲ್ಲ ಎಂಬುದು ಗೊತ್ತಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.
'ಬಾಲಕಿ ತಲೆಗೆ ಗಂಭೀರವಾದ ಪೆಟ್ಟು ಬಿದ್ದಿರುವ ಗುರುತುಗಳಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ಹಬ್ಬಿಸಿರುವಂತೆ ಮೈ ಮೇಲೆ ಸಿಗರೇಟಿನಿಂದ ಸುಟ್ಟ ಗಾಯದಂತಹ ಯಾವುದೇ ಗುರುತುಗಳಿಲ್ಲ. ಸದ್ಯದಲ್ಲೇ ಮರಣೋತ್ತರ ಪರೀಕ್ಷೆ ವರದಿಯೂ ಕೈ ಬರಲಿದ್ದು, ಆಗ ಸಾವಿಗೆ ನಿಖರ ಕಾರಣ ಗೊತ್ತಾಗಲಿದೆ' ಎಂದು ವಿವರಿಸಿದ್ದಾರೆ.
ಬಾಲಕಿ ರೈಲಿಗೆ ಸಿಲುಕಿ ಮೃತಪಟ್ಟಿರಬಹುದಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇದುವರೆಗಿನ ತನಿಖೆ ಹಾಗೂ ವಿವಿಧ ಸಾಕ್ಷ್ಯಗಳನ್ನು ಪರಿಶೀಲಿಸಿದಾಗ ರೈಲಿಗೆ ಸಿಲುಕಿ ಬಾಲಕಿ ಮೃತಪಟ್ಟಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 10 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ, ಯಾರನ್ನೂ ಬಂಧಿಸಿರಲಿಲ್ಲ ಎಂದು ಮಾಹಿತಿ ನೀಡಿದ್ದಾರೆ.
8ನೇ ತರಗತಿ ಓದುತ್ತಿದ್ದ ಹಕ್ಕಿಪಿಕ್ಕಿ ಸಮುದಾಯದ ಖುಷಿ, ಮೇ 11ರಂದು ರಾತ್ರಿ ನಾಪತ್ತೆಯಾಗಿದ್ದಳು. ಬೆಳಗ್ಗೆ 7.45ರ ಸುಮಾರಿಗೆ ಗ್ರಾಮದ ಸಮೀಪದ ರೈಲು ಹಳಿ ಪಕ್ಕ ಆಕೆy ಶವ ಅರೆ ನಗ್ನಾವಸ್ಥೆಯಲ್ಲಿ ಪತ್ತೆಯಾಗಿತ್ತು. ಹೀಗಾಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿತ್ತು. ಹೀಗಾಗಿ ಬಿಡದಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಈ ಸುದ್ದಿಯನ್ನೂ ಓದಿ | Fraud case: ಡಿಸಿಸಿ ಬ್ಯಾಂಕ್‌ಗೆ ವಂಚನೆ ಕೇಸ್‌ನಲ್ಲಿ ಬಂಧನವಾಗಿದ್ದ ಡಿ.ಕೆ.ಸಿದ್ರಾಮ್ ಬಿಡುಗಡೆ