Champions Trophy 2025: ಬಾಂಗ್ಲಾ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ XI ಆರಿಸಿದ ಆಕಾಶ್ ಚೋಪ್ರಾ!
Aakash chopra Picks India's Playing XI: ಬಾಂಗ್ಲಾದೇಶ ವಿರುದ್ದದ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ತನ್ನ ಮೊದಲ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್ XI ಅನ್ನು ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಆಯ್ಕೆ ಮಾಡಿದ್ದಾರೆ. ಪೂರ್ಣ ಪ್ರಮಾಣದ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್‌ಗೆ ಅವಕಾಶ ಸಿಗಬೇಕೆಂದು ಆಗ್ರಹಿಸಿದ್ದಾರೆ.

ಭಾರತದ ಪ್ಲೇಯಿಂಗ್ XI ಆರಿಸಿದ ಆಕಾಶ್ ಚೋಪ್ರಾ.

ದುಬೈ: ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡು ವಿಶ್ವಾಸದಲ್ಲಿರುವ ಭಾರತ ತಂಡ, 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಶುಭಾರಂಭ ಕಾಣಲು ಎದುರು ನೋಡುತ್ತಿದೆ. ಗುರುವಾರ ದುಬೈ ಇಂಟರ್‌ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುವ ತನ್ನ ಮೊದಲನೇ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಟೀಮ್ ಇಂಡಿಯಾ ಕಾದಾಟ ನಡೆಸಲಿದೆ. ಈ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್ XI ಅನ್ನು ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಆಯ್ಕೆ ಮಾಡಿದ್ದಾರೆ. ನಾಯಕ ರೋಹಿತ್ ಶರ್ಮಾ ಅವರೇ ಭಾರತ ತಂಡದ ಆಡುವ ಬಳಗವನ್ನು ನಿರ್ಧಾರ ಮಾಡುವುದಾದರೆ, ಕುಲ್ದೀಪ್ ಯಾದವ್ ಆಡುವ ಸಾಧ್ಯತೆ ಇರುತ್ತದೆ ಎಂದು ಹೇಳಿದ್ದಾರೆ.
ತಮ್ಮ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿರುವ ವಿಡಿಯೊದಲ್ಲಿ ಮಾತನಾಡಿದ ಆಕಾಶ್ ಚೋಪ್ರಾ, "20 ರಂದು ಭಾರತ ತಂಡದ ಪ್ಲೇಯಿಂಗ್ XI ಯಾವ ರೀತಿ ಇರಬಹುದು? ಶುಭಮನ್ ಗಿಲ್ ಮತ್ತು ರೋಹಿತ್ ಶರ್ಮಾ, ನಾಯಕ ಮತ್ತು ಉಪ ನಾಯಕ ಇನಿಂಗ್ಸ್ ಆರಂಭಿಸಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ರನ್ ಮಷೀನ್ ವಿರಾಟ್ ಕೊಹ್ಲಿ ಆಡುವುದು ಬಹುತೇಕ ಖಚಿತ, ಹಾಗಾಗಿ ಇದರ ಬಗ್ಗೆ ಯಾವುದೇ ಪ್ರಶ್ನೆಗಳು ಇಲ್ಲವೇ ಇಲ್ಲ. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಆಡಲಿದ್ದಾರೆ," ಎಂದು ತಿಳಿಸಿದ್ದಾರೆ.
ಚಾಂಪಿಯನ್ಸ್ ಟ್ರೋಫಿಯಿಂದ ಹೊರಬಿದ್ದ ಫರ್ಗುಸನ್: ಜೇಮಿಸನ್ ಬದಲಿ ಆಟಗಾರ
"ಐದನೇ ಕ್ರಮಾಂಕದಲ್ಲಿ ಅಕ್ಷರ್ ಪಟೇಲ್, ಆರನೇ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಹಾಗೂ 7ನೇ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಅವರನ್ನು ನೋಡಲು ನಾನು ಬಯಸುತ್ತೇನೆ. ನಂತರ 8ನೇ ಕ್ರಮಾಂಕದಲ್ಲಿ ರವೀಂದ್ರ ಜಡೇಹಾ ಆಡಬೇಕೆಂದು ನಾನು ಎದುರು ನೋಡುತ್ತಿದ್ದೇನೆ," ಎಂದು ಕ್ರಿಕೆಟ್ ನಿರೂಪಕ ತಿಳಿಸಿದ್ದಾರೆ.
"ಆಡುವ ಬಳಗವನ್ನು ರೋಹಿತ್ ಶರ್ಮಾ ಒಬ್ಬರೇ ನಿರ್ಧಾರ ಮಾಡುವಂತಿದ್ದರೆ, ನಾನು ಕುಲ್ದೀಪ್ ಯಾದನ್ ಅವರನ್ನು ನೋಡುತ್ತೇನೆ. ಹೆಡ್ ಕೋಚ್ ಗೌತಮ್ ಗಂಭೀರ್ ಅವರ ಯೋಚನೆ ಏನಿದೆ ಎಂದು ನನಗೆ ಗೊತ್ತಿಲ್ಲ. ಅವರು ವರುಣ್ ಚಕ್ರವರ್ತಿಗೆ ಮೊದಲನೇ ಪಂದ್ಯದಲ್ಲಿ ಅವಕಾಶ ನೀಡಬಹುದು. ಆದರೆ, ನಾನು ಕುಲ್ದೀಪ್ ಯಾದವ್ ಅವರನ್ನು ಆಡಿಸಲು ಬಯಸುತ್ತೇನೆ," ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ.
ಚಾಂಪಿಯನ್ಸ್ ಟ್ರೋಫಿಗೂ ಮುನ್ನ ರೋಹಿತ್ ಶರ್ಮಾಗೆ ಕಹಿ ಸುದ್ದಿ ನೀಡಿದ ಬಿಸಿಸಿಐ!
ಫೆಬ್ರವರಿ 19 ರಂದು ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ನಡುವಣ ಪಂದ್ಯದ ಮೂಲಕ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಆರಂಭವಾಗಲಿದೆ. ಭಾರತ ತಂಡದ ಗುಂಪು ಹಂತದ ಪಂದ್ಯಗಳು ಫೆಬ್ರವರಿ 20 ರಂದು ಬಾಂಗ್ಲಾದೇಶ, ಫೆಬ್ರವರಿ 23 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಹಾಗೂ ಮಾರ್ಚ್ 2 ರಂದು ನ್ಯೂಜಿಲೆಂಡ್ ವಿರುದ್ದ ನಡೆಯಲಿದೆ.
ಬಾಂಗ್ಲಾದೇಶ ವಿರುದ್ಧದ ಪಂದ್ಯಕ್ಕೆ ಆಕಾಶ್ ಚೋಪ್ರಾ ಆರಿಸಿದ ಭಾರತದ ಪ್ಲೇಯಿಂಗ್ XI
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿ.ಕೇ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್