Shiva Rajkumar: ಬಜೆಟ್‌ನಲ್ಲಿ ಚಿತ್ರರಂಗಕ್ಕೆ ಹಲವು ಕೊಡುಗೆ; ರಾಜ್ಯ ಸರ್ಕಾರಕ್ಕೆ ನಟ ಶಿವರಾಜಕುಮಾರ್ ಅಭಿನಂದನೆ
Shiva Rajkumar: ಚಿತ್ರಮಂದಿರಗಳಲ್ಲಿ ಟಿಕೆಟ್ ದರ ಇಳಿಕೆ, ಕನ್ನಡ ಸಿನಿಮಾಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತಲುಪಿಸಲು ರಾಜ್ಯ ಸರ್ಕಾರದಿಂದ ಹೊಸ ಒಟಿಟಿ, ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರಕ್ಕೆ ನನ್ನ ಅಭಿನಂದನೆಗಳು ನಟ ಶಿವರಾಜಕುಮಾರ್ ತಿಳಿಸಿದ್ದಾರೆ.


ಬೆಂಗಳೂರು: ರಾಜ್ಯ ಬಜೆಟ್‌ನಲ್ಲಿ ಚಿತ್ರರಂಗಕ್ಕೆ ಹಲವು ಕೊಡುಗೆ ಘೋಷಿಸುವ ಮೂಲಕ ಕಲಾವಿದರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ. ಕನ್ನಡ ಚಿತ್ರರಂಗದ ಕೆಲ ಬೇಡಿಕೆಗಳನ್ನು ಸಿದ್ದರಾಮಯ್ಯ ಅವರು ಈ ಬಾರಿಯ ಬಜೆಟ್‌ನಲ್ಲಿ (Karnataka budget 2025) ಈಡೇರಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ನಟ ಶಿವರಾಜಕುಮಾರ್ (Shiva Rajkumar) ಅವರು ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ ಕನ್ನಡ ಸಿನಿಮಾಗಳನ್ನು ಪ್ರೋತ್ಸಾಹಿಸಿ ಬೆಳೆಸಲು ತೆಗೆದುಕೊಂಡ ನಿರ್ಧಾರಗಳಿಗೆ ಕರ್ನಾಟಕ ಸರ್ಕಾರಕ್ಕೆ ನನ್ನ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ಚಿತ್ರಮಂದಿರಗಳಲ್ಲಿ ಟಿಕೆಟ್ ದರ ಇಳಿಕೆ, ಕನ್ನಡ ಸಿನಿಮಾಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತಲುಪಿಸಲು ರಾಜ್ಯ ಸರ್ಕಾರದಿಂದ ಹೊಸ ಒಟಿಟಿ, ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಬೆಂಬಲ ನೀಡಿದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯರವರಿಗೆ ನನ್ನ ಹಾಗು ಚಿತ್ರರಂಗದ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳು. ಶೀಘ್ರವೇ ಈ ಎಲ್ಲಾ ಯೋಜನೆಗಳಿಗೆ ಚಾಲನೆ ಸಿಗಲಿ ಎಂದು ಆಶಿಸುತ್ತೇನೆ ಎಂದು ಹೇಳಿದ್ದಾರೆ.
ಬಜೆಟ್‌ನಲ್ಲಿ ಚಿತ್ರರಂಗಕ್ಕೆ ಸಿಕ್ಕಿದ್ದೇನು?
ಸಿನಿಪ್ರಿಯರ ಬಹುದಿನದ ಬೇಡಿಕೆಯಾಗಿದ್ದ ಏಕರೂಪ ಟಿಕೆಟ್ ನೀಡುವ ಬೇಡಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್‌ನಲ್ಲಿ ಈಡೇರಿಸಿದ್ದು, ರಾಜ್ಯದ ಎಲ್ಲ ಮಲ್ಟಿಪೆಕ್ಸ್‌ಗಳಲ್ಲಿಯೂ ಸಿನಿಮಾ ಟಿಕೆಟ್ ದರವನ್ನು 200 ರು.ಗೆ ಸೀಮಿತಗೊಳಿಸಿ ಘೋಷಿಸಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಉದ್ಯಮ ಸ್ಥಾನಮಾನ ನೀಡಿ, ಕೈಗಾರಿಕಾ ನೀತಿಯಡಿ ನೀಡುವ ಸೌಲಭ್ಯಗಳನ್ನು ಚಿತ್ರ ರಂಗಕ್ಕೂ ವಿಸ್ತರಿಸಲಾಗುವುದು. ಮಲ್ಟಿಪ್ಲೆಕ್ಸ್ ಸೇರಿದಂತೆ ಎಲ್ಲಾ ಥಿಯೇಟರ್‌ಗಳಲ್ಲಿ ಟಿಕೆಟ್ ದರವನ್ನು 200 ರು.ಗೆ ಮಿತಿಗೊಳಿಸುವುದಾಗಿ ಸಿಎಂ ಘೋಷಿಸಿದ್ದಾರೆ. ಆದರೆ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಹಿಂದಿನ ಅವಧಿಯಲ್ಲಿ ಈ ಕುರಿತು ಹೊರಡಿಸಿದ ಆದೇಶವನ್ನು ನ್ಯಾಯಾಲಯದ ಮುಂದೆ ಪ್ರಶ್ನಿಸಲಾಗಿತ್ತು. ಆದ್ದರಿಂದ ಅದನ್ನು ಕಾರ್ಯಗತಗೊಳಿಸಲು ಸಾಧ್ಯವಾಗಿರಲಿಲ್ಲ, ಈ ಬಾರಿ ಮಂಡಿಸಿರುವ ಬಜೆಟ್ ನಲ್ಲಿ ದರ ನಿಗದಿ ಮಾಡಲಾಗಿದ್ದು, ಅನುಷ್ಠಾನಗೊಳ್ಳುತ್ತದೆಯೇ ಎಂಬುದನ್ನು ಕಾದು ನೋಡಬೇಕು.
ಇನ್ನು ಕನ್ನಡ ಸಿನಿಮಾಗಳ ಪ್ರಚಾರಕ್ಕಾಗಿ ಒಟಿಟಿ ವೇದಿಕೆಯನ್ನು ರಚಿಸುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ. ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಫಿಲ್ಮ್ ಸಿಟಿಯನ್ನು ಅಭಿವೃದ್ಧಿಪಡಿಸಲು 150 ಎಕರೆ ಜಾಗವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ವರ್ಗಾಯಿಸಿ 500 ಕೋಟಿ ರು. ವಚ್ಚದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಫಿಲ್ಡ್ ಸಿಟಿ ನಿರ್ಮಾಣ ಮಾಡಲಾಗುವುದು ಎಂದು ಪ್ರಕಟಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | International Women's Day 2025: ಅಂತರರಾಷ್ಟ್ರೀಯ ಮಹಿಳಾ ದಿನ 2025: ಮಹಿಳೆಯರಿಗೆ ವಿಭಿನ್ನವಾಗಿ ಶುಭಾಶಯ ತಿಳಿಸಿದ ಗೂಗಲ್