ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Actor Upendra: ನಟ ಉಪೇಂದ್ರ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

Actor Upendra Hospitalized: ರಿಯಲ್‌ ಸ್ಟಾರ್‌ ಉಪೇಂದ್ರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿರುವ ಉಪೇಂದ್ರ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಭಿಮಾನಿಗಳು ಆತಂಕ ಪಡುವಂತಹದ್ದು ಏನೂ ಇಲ್ಲ. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಉಪ್ಪಿ ಆಪ್ತರು ಮಾಹಿತಿ ನೀಡಿದ್ದಾರೆ.

ನಟ ಉಪೇಂದ್ರ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

Profile Rakshita Karkera May 5, 2025 4:39 PM

ಬೆಂಗಳೂರು: ಸ್ಯಾಂಡಲ್‌ವುಡ್‌ ಸ್ಟಾರ್‌ ನಟ, ರಿಯಲ್‌ ಸ್ಟಾರ್‌ ಉಪೇಂದ್ರ(Actor Upendra) ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ಯಾಸ್ಟ್ರಿಕ್‌ ಸಮಸ್ಯೆಯಿಂದ ತೀವ್ರ ಹೊಟ್ಟೆನೋವು ಕಾಣಿಸಿಕೊಂಡ ಕಾರಣ ಉಪೇಂದ್ರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪತ್ನಿ ಪ್ರಿಯಾಂಕಾ ಉಪೇಂದ್ರ ಅವರ ಜೊತೆ ಉಪ್ಪಿ ಖಾಸಗಿ ಆಸ್ಪತ್ರೆಗೆ ಆಗಮಿಸಿದ್ದಾರೆ. ಇನ್ನು ಉಪೇಂದ್ರ ಅವರ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ಏರು ಪೇರು ಉಂಟಾಗಿದ್ದು, ಸ್ಪರ್ಶ್‌ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಭಿಮಾನಿಗಳು ಆತಂಕ ಪಡುವಂತಹದ್ದು ಏನೂ ಇಲ್ಲ. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಉಪ್ಪಿ ಆಪ್ತರು ಮಾಹಿತಿ ನೀಡಿದ್ದಾರೆ.

ಉಪೇಂದ್ರ ಅವರು ತಮ್ಮ ಇತ್ತೀಚಿನ ಚಿತ್ರವಾದ UI ಚಿತ್ರೀಕರಣದಲ್ಲಿ ಬ್ಯುಸಿ ಇದ್ದಾಗಲೂ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಅಸಿಡಿಟಿ ಸಮಸ್ಯೆಯಿಂದಾಗಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆ್ಯಕ್ಷನ್ ಥ್ರಿಲ್ಲರ್ ʻಯುಐʼ ರಿಲೀಸ್ ಬಳಿಕ ನಟ ಉಪೇಂದ್ರ ಯಾವುದೇ ಸಿನಿಮಾದಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ʼ45ʼ ಚಿತ್ರ ಕೂಡ ಪ್ರಚಾರದ ಹಂತದಲ್ಲಿದೆ. ಆ ಬಳಿಕ‌ ʻಕೂಲಿʼ ಸಿನಿಮಾದಲ್ಲಿ ನೆಗೆಟಿವ್ ಶೇಡ್‌ನಲ್ಲಿ ರಜನಿಕಾಂತ್ ಜತೆಗೆ ಮಿಂಚಲಿದ್ದಾರೆ. ಇದರೊಂದಿಗೆ ʼಬುದ್ಧಿವಂತ 2ʼ ಸೇರಿ ಇತರ ಕೆಲವು ಪ್ರಾಜೆಕ್ಟ್‌ನಲ್ಲಿ ಕೂಡ ನಟ ರಿಯಲ್ ಸ್ಟಾರ್ ಉಪೇಂದ್ರ‌ ಬ್ಯುಸಿ ಯಾಗಿದ್ದಾರೆ.

ಈ ಸುದ್ದಿಯನ್ನೂ ಓದಿ: Raktha Kashmira Movie: ಉಪೇಂದ್ರ-ರಮ್ಯಾ ಕಾಂಬಿನೇಷನ್‌ನಲ್ಲಿ ಶೀಘ್ರವೇ ತೆರೆಗೆ ಬರಲಿದೆ ‘ರಕ್ತ ಕಾಶ್ಮೀರ’

ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ರಮೇಶ್ ರೆಡ್ಡಿ ನಿರ್ಮಾಣದ, ಅರ್ಜುನ್ ಜನ್ಯ ನಿರ್ದೇಶನದ ಹಾಗೂ ಶಿವ ರಾಜ್‌ಕುಮಾರ್, ಉಪೇಂದ್ರ, ರಾಜ್ ಬಿ. ಶೆಟ್ಟಿ ಅಭಿನಯದ ಬಹುನಿರೀಕ್ಷಿತ ʼ45ʼ ಚಿತ್ರದ (45 Movie) ಟೀಸರ್ ಯುಗಾದಿ ಹಬ್ಬದಂದು ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ ಶಿವ ರಾಜ್‌ಕುಮಾರ್ ಟೀಸರ್ ಅನಾವರಣಗೊಳಿಸಿದರು. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಟೀಸರ್ ಸಾಕಷ್ಟು ಕುತೂಹಲ ಮೂಡಿಸಿದೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.