ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Darshan Birthday: ನೀನು ಯಾವಾಗಲೂ ಸ್ಪೆಷಲ್ ಆಗೇ ಇರ್ತೀಯ, ಲವ್ ಯೂ; ದರ್ಶನ್‌ ಬರ್ತ್‌ ಡೇಗೆ ರಕ್ಷಿತಾ ವಿಶ್‌

ಚಾಲೆಂಜಿಂಗ್‌ ಸ್ಟಾರ್‌ಗೆ ಆಪ್ತರು, ಸಿನಿ ತಾರೆಯರು, ಅಭಿಮಾನಿಗಳು ನಟ ದರ್ಶನ್‌ಗೆ ವಿಶ್‌ ಮಾಡುತ್ತಿದ್ದಾರೆ. ನಟಿ ರಕ್ಷಿತಾ ಪ್ರೇಮ್ ಕೂಡ ಫ್ರೆಂಡ್‌ ದರ್ಶನ್‌ಗೆ ವಿಶ್‌ ಮಾಡಿ ಇನ್‌ಸ್ಟಾಗ್ರಾಂ ಪೋಸ್ಟ್‌ ಹಾಕಿದ್ದಾರೆ. ದರ್ಶನ್ ಹುಟ್ಟುಹಬ್ಬಕ್ಕೆ ನಟಿ ರಕ್ಷಿತಾ ಪ್ರೇಮ್ ವಿಶೇಷವಾಗಿ ಶುಭಕೋರಿದ್ದಾರೆ. ‘ಇವತ್ತು ವಿಶೇಷ ದಿನ‌, ಯಾಕ್ ಗೊತ್ತಾ? ಇವತ್ತು ನನ್ನ ಬೆಸ್ಟ್ ಫ್ರೆಂಡ್ ಬರ್ತ್‌ಡೇ. ಇವರು ಯಾವಾಗಲೂ ಕಷ್ಟ-ಸುಖದಲ್ಲಿ ಒಂದೇ ರೀತಿಯಲ್ಲಿ ಜೊತೆಗಿದ್ದವರು ಎಂದಿದ್ದಾರೆ.

ದರ್ಶನ್‌ ಬರ್ತ್‌ ಡೇಗೆ ರಕ್ಷಿತಾ ಸ್ಪೆಶಲ್‌ ವಿಶ್‌!

Profile Rakshita Karkera Feb 16, 2025 9:59 AM

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಇಂದು (ಫೆಬ್ರವರಿ 16) ಹುಟ್ಟುಹಬ್ಬದ ಸಂಭ್ರಮ(Darshan Birthday). ಎಲ್ಲಾ ಸರಿಯಾಗಿದ್ದರೆ, ದರ್ಶನ್ ತಮ್ಮ ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ತಮ್ಮ 48ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಬೇಕಿತ್ತು. ಆದರೆ, ಸಂಕಷ್ಟಕ್ಕೆ ಸಿಲುಕಿರುವ ದರ್ಶನ್ ಈ ಬಾರಿ ಬರ್ತ್‌ಡೇ ಆಚರಿಸಿಕೊಳ್ಳುವುದಿಲ್ಲ ಎಂದು ವಿಡಿಯೋ ಮೂಲಕ ಮಾಹಿತಿಯನ್ನು ಹಂಚಿಕೊಂಡಿದ್ದರು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಸುಮಾರು 6 ತಿಂಗಳು ಜೈಲಿನಲ್ಲಿದ್ದ ದರ್ಶನ್‌ ಡಿಸೆಂಬರ್‌ನಲ್ಲಿ ಹೊರ ಬಂದಿದ್ದು, ಅಭಿಮಾನಿಗಳ ಸಂಭ್ರಮ ದುಪ್ಪಟ್ಟಾಗಿದೆ ಆದರೆ ಅನಾರೋಗ್ಯದ ಕಾರಣ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಅವರು ಇತ್ತೀಚೆಗೆ ತಿಳಿಸಿದ್ದು, ಫ್ಯಾನ್ಸ್‌ಗೆ ನಿರಾಸೆ ಉಂಟು ಮಾಡಿತ್ತು.

ಇನ್ನು ಚಾಲೆಂಜಿಂಗ್‌ ಸ್ಟಾರ್‌ಗೆ ಆಪ್ತರು, ಸಿನಿ ತಾರೆಯರು, ಅಭಿಮಾನಿಗಳು ನಟ ದರ್ಶನ್‌ಗೆ ವಿಶ್‌ ಮಾಡುತ್ತಿದ್ದಾರೆ. ನಟಿ ರಕ್ಷಿತಾ ಪ್ರೇಮ್ ಕೂಡ ಫ್ರೆಂಡ್‌ ದರ್ಶನ್‌ಗೆ ವಿಶ್‌ ಮಾಡಿ ಇನ್‌ಸ್ಟಾಗ್ರಾಂ ಪೋಸ್ಟ್‌ ಹಾಕಿದ್ದಾರೆ.

ದರ್ಶನ್ ಹುಟ್ಟುಹಬ್ಬಕ್ಕೆ ನಟಿ ರಕ್ಷಿತಾ ಪ್ರೇಮ್ ವಿಶೇಷವಾಗಿ ಶುಭಕೋರಿದ್ದಾರೆ. ‘ಇವತ್ತು ವಿಶೇಷ ದಿನ‌, ಯಾಕ್ ಗೊತ್ತಾ? ಇವತ್ತು ನನ್ನ ಬೆಸ್ಟ್ ಫ್ರೆಂಡ್ ಬರ್ತ್‌ಡೇ. ಇವರು ಯಾವಾಗಲೂ ಕಷ್ಟ-ಸುಖದಲ್ಲಿ ಒಂದೇ ರೀತಿಯಲ್ಲಿ ಜೊತೆಗಿದ್ದವರು. ಇವರು ಜೊತೆಗಿರುವ ಜೀವನ‌ ಯಾವಾಗಲೂ ಉತ್ತಮವಾಗಿರುತ್ತದೆ. ನೀವು ನನಗೆ ಸ್ಪೆಷಲ್‌. ನಿಮ್ಮ ಜೀವನದ ಪ್ರತಿಯೊಂದು ಹೆಜ್ಜೆಯಲ್ಲೂ ಶುಭ ಹಾರೈಸುತ್ತೇನೆ. ಯಾವಾಗಲೂ ಸ್ಪೆಷಲ್ ಆಗೇ ಇರ್ತೀಯ, ಲವ್ ಯೂ’ ಎಂದು ಶುಭಹಾರೈಸಿದ್ದಾರೆ.

ಇತ್ತೀಚೆಗೆ ವಿಡಿಯೊ ಮಾಡಿ ಫ್ಯಾನ್ಸ್‌ಗೆ ಸಂದೇಶ ನೀಡಿದ್ದ ದರ್ಶನ್‌, ಆರೋಗ್ಯ ಸಮಸ್ಯೆಯಿಂದ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳತ್ತಿಲ್ಲ ಎಂದು ತಿಳಿಸಿದ್ದರು. ʻಫೆ.16ಕ್ಕೆ ನನ್ನ ಹುಟ್ಟುಹಬ್ಬ. ಪ್ರತಿಯೊಬ್ಬರನ್ನೂ ಭೇಟಿಯಾಗಿ ಥ್ಯಾಂಕ್ಸ್ ಹೇಳೋಣ ಎನ್ನುವ ಆಸೆ ಇತ್ತು. ಆದರೆ ಆರೋಗ್ಯ ಸಮಸ್ಯೆಯಿಂದ ತುಂಬಾ ಹೊತ್ತು ನಿಂತುಕೊಳ್ಳಲು ಆಗುತ್ತಿಲ್ಲ. ಹಾಗಾಗಿ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲʼಎಂದು ತಿಳಿಸಿದ್ದರು.

ʻನಿಂತುಕೊಂಡು ಎಲ್ಲರಿಗೂ ವಿಶ್ ಮಾಡಲು ನನ್ನಿಂದ ಆಗುತ್ತಲ್ಲ. ಆಪರೇಷನ್ ಅನ್ನೋದು ಕಟ್ಟಿಟ್ಟ ಬುಟ್ಟಿ. ಅದು ನನಗೂ ಗೊತ್ತು. ಅದನ್ನು ಮುಂದೆ ಮಾಡಿಸಲೇಬೇಕು. ಈಗಾಗಲೇ ಒಪ್ಪಿಕೊಂಡಿರುವ ಕೆಲಸ ಮುಗಿಸಬೇಕಿದೆ. ನನ್ನ ನಿರ್ಮಾಪಕರು ಇಷ್ಟು ದಿನ ನನಗಾಗಿ ಕಾದಿದ್ದಾರೆ. ಅವರಿಗೆ ಧನ್ಯವಾದಗಳು. ಅವರಿಗೆ ನಾನು ಅನ್ಯಾಯ ಮಾಡಬಾರದು ಎನ್ನುವ ಕಾರಣಕ್ಕೆ ಎಷ್ಟು ದಿನ ಸಾಧ್ಯವಾಗುತ್ತದೋ ಅಷ್ಟು ದಿನ ಆಪರೇಷನ್ ಮುಂದಕ್ಕೆ ಹಾಕಲು ನೋಡ್ತಾ ಇದ್ದೇನೆ. ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ಪ್ರೀತಿಯ ಮನವಿ. ಈ ವರ್ಷ ನನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಕ್ಷಮೆ ಇರಲಿʼ ಎಂದು ಮನವಿ ಮಾಡಿದ್ದರು.