ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

AITUC strike: ಮೇ 20ಕ್ಕೆ ಕೇಂದ್ರ, ರಾಜ್ಯ ಸರಕಾರದ ಜನ, ಕಾರ್ಮಿಕ ವಿರೋಧಿ ನೀತಿ ಖಂಡಿಸಿ ದೇಶವ್ಯಾಪಿ ಎಐಟಿಯುಸಿ ಮುಷ್ಕರ

AITUC strike: 8 ಗಂಟೆ ಕೆಲಸದ ಅವಧಿ, ಕಾಯಂ ಕೆಲಸ, ಇನ್ನಿತರ ಹಕ್ಕುಗಳನ್ನು ಇಲ್ಲವಾಗಿಸಿ ಕಾರ್ಮಿಕರನ್ನು ಗುಲಾಮರನ್ನಾಗಿಸಲು ಕೇಂದ್ರ ಸರ್ಕಾರ ಕಾರ್ಪೊರೇಟ್ ಬಂಡವಾಳದ ಪರ ರೂಪಿಸಿರುವ ಕಾರ್ಮಿಕ ವಿರೋಧಿ 4 ಸಂಹಿತೆಗಳನ್ನು ರದ್ದುಪಡಿಸಬೇಕು ಎಂದು ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಬಿ.ಅಮ್ಜದ್ ಆಗ್ರಹಿಸಿದ್ದಾರೆ.

ಹಾವೇರಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನ ವಿರೋಧಿ ಹಾಗೂ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಮೇ 20ರಂದು ದೇಶಾದ್ಯಂತ ಸಾರ್ವಜನಿಕ ಮುಷ್ಕರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಬಿ.ಅಮ್ಜದ್ ಹೇಳಿದರು. ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿಯ ಹೆಸರಿನಲ್ಲಿ ಕಾರ್ಪೊರೇಟ್ ಕಂಪನಿಗಳ ಸೇವಕರನ್ನಾಗಿ ಮಾಡಲು ವೇತನ ಸಂಹಿತೆಯಲ್ಲಿ 4 ಕಾನೂನು, ಕೈಗಾರಿಕಾ ಬಾಂಧವ್ಯ ಸಂಹಿತೆಯಲ್ಲಿ 3 ಕಾನೂನು ಔದ್ಯೋಗಿಕ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆಯಲ್ಲಿ 13 ಕಾನೂನು ಮತ್ತು ಸಾಮಾಜಿಕ ಭದ್ರತಾ ಸಂಹಿತೆಯಲ್ಲಿ 9 ಕಾನೂನು ಸೇರಿದಂತೆ ಒಟ್ಟು 29 ಕಾನೂನುಗಳನ್ನು 4 ಸಂಹಿತೆಗಳಲ್ಲಿ ರೂಪಿಸಲಾಗಿದೆ. ಆದರೆ ಈ ಸಂಹಿತೆಗಳಲ್ಲಿ ದುಡಿಯುವ ವರ್ಗಕ್ಕೆ ಮತ್ತಷ್ಟು ಸಂಕಷ್ಟಗಳನ್ನು ತಂದಿಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

8 ಗಂಟೆ ಕೆಲಸದ ಅವಧಿ, ಕಾಯಂ ಕೆಲಸ, ಇನ್ನಿತರ ಹಕ್ಕುಗಳನ್ನು ಇಲ್ಲವಾಗಿಸಿ ಕಾರ್ಮಿಕರನ್ನು ಗುಲಾಮರನ್ನಾಗಿಸಲು ಕೇಂದ್ರ ಸರ್ಕಾರ ಕಾರ್ಪೊರೇಟ್ ಬಂಡವಾಳದ ಪರ ರೂಪಿಸಿರುವ ಕಾರ್ಮಿಕ ವಿರೋಧಿ 4 ಸಂಹಿತೆಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ತಕ್ಷಣ ಜಾರಿ ಮಾಡಬೇಕು. ಮನೆಕೆಲಸಗಾರರು, ಹಂಚು ಪ್ಯಾಕ್ಟರಿ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು ಇನ್ನಿತರ ಎಲ್ಲಾ ಅಸಂಘಟಿತ ಕಾರ್ಮಿಕರು ಸೇರಿದಂತೆ ಎಲ್ಲಾ ವಿಭಾಗದ ಕಾರ್ಮಿಕರಿಗೆ ಕನಿಷ್ಠ ಮಾಸಿಕ 9,000 ರೂ., ಪಿಂಚಣಿ ಹಾಗೂ ಸಾಮಾಜಿಕ ಭದ್ರತೆಯನ್ನು ಖಾತ್ರಿಪಡಿಸಬೇಕು. ಎನ್‌ಪಿಎಸ್ ಮತ್ತು ಯುಪಿಎಸ್ ರದ್ದುಪಡಿಸಿ, ಹಳೆಯ ಪೆನ್ಷನ್ ಸ್ಕೀಂ ಮರುಸ್ಥಾಪಿಸಬೇಕು. ಇಎಸ್‌ಐ, ಪಿ.ಎಫ್, ಬೋನಸ್ ಪಾವತಿಗಿರುವ ಎಲ್ಲಾ ವೇತನ ಮಿತಿಯನ್ನು ತೆಗೆಯಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿಯನ್ನೂ ಓದಿ | Sofia Qureshi: ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿ ಮನೆ ಮೇಲೆ ದಾಳಿ; ಸುಳ್ಳು ಸುದ್ದಿ ಹಬ್ಬಿಸಿದ ಯುವಕ!

ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಎಚ್.ಜಿ. ಉಮೇಶ, ಎಂ.ಜಯಮ್ಮ, ಚಂದ್ರು, ರತ್ನ ಶಿರೂರು, ಸುನಂದಾ ರೇವಣಕರ, ಪಿರಜಾದೆ, ದಿನೇಶ ಕಾಂಬಳೆ, ಕುಸುಮಾ ಪಾಟೀಲ್, ಕೆ.ಎಲ್. ಮಕಾಂದರ, ಎಚ್.ಎಂ. ಸಂತೋಷ ಇತರರು ಇದ್ದರು.