Karnataka Congress: ಕಾಂಗ್ರೆಸ್‌ನಲ್ಲಿ ಮಾದಿಗ ಸಮುದಾಯದ ಕಡೆಗಣನೆ; ಕಾರ್ಯಕರ್ತರು, ಮುಖಂಡರ ಕಿಡಿ

Karnataka Congress: ತುಮಕೂರು ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದರೂ ಮಾದಿಗರನ್ನು ತೀವ್ರವಾಗಿ ನಿರ್ಲಕ್ಷ್ಯ ಮಾಡಿದ್ದಾರೆ. ಮಾದಿಗರ ಮತಗಳಿಂದಲೇ ಗೆದ್ದು ಹತ್ತಾರು ವರ್ಷಗಳಿಂದ ಅಧಿಕಾರದಲ್ಲಿರುವ ಡಾ.ಜಿ.ಪರಮೇಶ್ವರ್ ಆಗಲಿ, ದಲಿತರ ಬಗ್ಗೆ ಕಾಳಜಿ ತೋರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಾಗಲಿ ಮಾದಿಗ ಸಮುದಾಯದ ಯುವಕರಿಗೆ ಮನ್ನಣೆ ನೀಡುತ್ತಿಲ್ಲ ಎಂದು ದಲಿತಪರ ಸಂಘಟನೆಗಳು ಕಿಡಿಕಾರಿವೆ.

Karnataka Congress
Profile Prabhakara R Feb 4, 2025 8:20 PM

ತುಮಕೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ (Karnataka Congress) ಅಧಿಕಾರಕ್ಕೆ ಬಂದು 2 ವರ್ಷ ಕಳೆಯುತ್ತಾ ಬಂದಿದ್ದರೂ ತುಮಕೂರು ಜಿಲ್ಲೆಯಲ್ಲಿ ಇದುವರೆಗೂ ಮಾದಿಗ ಸಮುದಾಯದ ಕಾರ್ಯಕರ್ತರಿಗೆ, ಮುಖಂಡರಿಗೆ ಪಕ್ಷದಲ್ಲಿಯಾಗಲಿ, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳಲ್ಲಾಗಲಿ, ಸ್ಥಾನಮಾನ ನೀಡದೆ ಕಡೆಗಣಿಸಲಾಗುತ್ತಿದೆ ಎಂದು ಡಿಎಸ್‌ಎಸ್ ಗುಬ್ಬಿ ತಾಲೂಕು ಸಂಚಾಲಕ ಮಾರಶೆಟ್ಟಿಹಳ್ಳಿ ಬಸವರಾಜು ಆರೋಪಿಸಿದರು.

ನಗರದ ಎಂ.ಜಿ.ರಸ್ತೆಯ ಅಂಬೇಡ್ಕರ್ ಭವನದಲ್ಲಿ ಮಾದಿಗ ಪರ ಸಂಘಟನೆಗಳ ಒಕ್ಕೂಟದಿಂದ ಆಯೋಜಿಸಿದ್ದ ಸಭೆಯಲ್ಲಿ ಪಾಲ್ಗೊಂಡು ಮಾತನಾಡುತಿದ್ದ ಅವರು, ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದರೂ ಮಾದಿಗರನ್ನು ತೀವ್ರವಾಗಿ ನಿರ್ಲಕ್ಷ್ಯ ಮಾಡಿದ್ದಾರೆ. ಮಾದಿಗರ ಮತಗಳಿಂದಲೇ ಗೆದ್ದು ಹತ್ತಾರು ವರ್ಷಗಳಿಂದ ಅಧಿಕಾರದಲ್ಲಿರುವ ಡಾ.ಜಿ.ಪರಮೇಶ್ವರ್ ಆಗಲಿ, ದಲಿತರ ಬಗ್ಗೆ ಕಾಳಜಿ ತೋರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಾಗಲಿ ಮಾದಿಗ ಸಮುದಾಯದ ಯುವಕರಿಗೆ ಮನ್ನಣೆ ನೀಡುತ್ತಿಲ್ಲ. ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷ, ಶಾಸಕ ಎಸ್.ಆರ್.ಶ್ರೀನಿವಾಸ್ ಅವರ ದಲಿತಪರ ಮಾತುಗಳಿಗೆ ಸ್ವಾಗತ ಕೋರುತ್ತೇವೆ. ಈಗಲಾದರೂ ಪಕ್ಷಕ್ಕೆ ದುಡಿದ ಮಾದಿಗ ಸಮುದಾಯದ ಮುಖಂಡರನ್ನು ಗುರುತಿಸಿ ಎಂ.ಎಲ್.ಸಿ. ಮಾಡಲಿ ಎಂದು ಒತ್ತಾಯಿಸಿದರು.

ತಲೆ ತಲಾಂತರದಿಂದಲೂ ಮಾದಿಗ ಸಮುದಾಯ ಅಧಿಕಾರದಿಂದ ವಂಚಿತರಾಗುತ್ತಲೇ ಬಂದಿದ್ದಾರೆ. ಜಿಲ್ಲೆಯ ಕಾಂಗ್ರೆಸ್ ಪಕ್ಷದ ಹುದ್ದೆಗಳಲ್ಲಿ ಮಾದಿಗರನ್ನು ಕಡೆಗಣಿಸಲಾಗಿದೆ. ಎರಡು ವರ್ಷದಿಂದಲು ಎಪಿಎಂಸಿ ಮತ್ತು ಟುಡಾ ಅಧ್ಯಕ್ಷ ಸ್ಥಾನಗಳು ಖಾಲಿ ಇವೆ. ಅಲ್ಲದೆ ಈಗ ವಿಧಾನಪರಿಷತ್ ಸ್ಥಾನಗಳು ಖಾಲಿ ಇದ್ದು, ಸರಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರುಗಳು ಈ ಹುದ್ದೆಗಳನ್ನು ತುಂಬುವಾಗ ಮಾದಿಗ ಸಮುದಾಯದ ಮುಖಂಡರನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ಮಾದಿಗರು ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಮಾರಶೆಟ್ಟಿಹಳ್ಳಿ ಬಸವರಾಜು ಎಚ್ಚರಿಕೆ ನೀಡಿದರು.

ಮುಖಂಡರಾದ ಹಬ್ಬತ್ತನಹಳ್ಳಿ ಶ್ರೀನಿವಾಸ ಮಾತನಾಡಿ, ಸರಕಾರ ಬಂದು ಎರಡು ವರ್ಷಗಳಾಗಿದೆ. ಮಾದಿಗ ಸಮುದಾಯದ ಯುವಕರಿಗೆ ಅಧಿಕಾರ ಸಿಕ್ಕಿಲ್ಲ. ಚುನಾವಣೆ ಸಂದರ್ಭದಲ್ಲಿ ಇವರಿಗೆ ಓಟ್ ಕೇಳಲು, ಇವರ ಹಿಂದೆ, ಮುಂದೆ ಜೈಕಾರ ಹಾಕಲು ಮಾತ್ರ ನಾವು ಬೇಕು. ಅಧಿಕಾರ ಬೇಡವೇ ಎಂದು ಪ್ರಶ್ನಿಸಿದ ಅವರು, ಮುಂಬರುವ ಎಂ.ಎಲ್.ಸಿ. ಚುನಾವಣೆಗಳಲ್ಲಿ ಜಿಲ್ಲೆಯಲ್ಲಿರುವ ಇಬ್ಬರು ಸಚಿವರುಗಳು ಮಾದಿಗ ಸಮುದಾಯದ ವ್ಯಕ್ತಿಗಳಿಗೆ ಎಂ.ಎಲ್.ಸಿ. ಸ್ಥಾನ ನೀಡಬೇಕು ಎಂಬುದು ನಮ್ಮ ಆಗ್ರಹವಾಗಿದೆ. ಈ ನಿಟ್ಟಿನಲ್ಲಿ ಶೀಘ್ರವೇ ಇಬ್ಬರು ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗುವುದು ಎಂದರು.

ದಲಿತ ಮುಖಂಡ ಜಯಣ್ಣ ಮಾತನಾಡಿ, ಕಾಂಗ್ರೆಸ್ ಪಕ್ಷದಿಂದ ಎಡಗೈ ಸಮುದಾಯಕ್ಕೆ ಯಾವುದೇ ರೀತಿಯ ಸಹಾಯ ಆಗಿಲ್ಲ. ತಲೆ ತಲಾಂತರದಿಂದಲೂ ಎಡಗೈ ಸಮುದಾಯ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದರೂ, ಮಾದಿಗರನ್ನು ತುಳಿಯುವ ಕೆಲಸ ನಿರಂತರವಾಗಿ ನಡೆದಿದೆ. ಚುನಾವಣೆಯಲ್ಲಿ ಅವಿರತ ದುಡಿದವರನ್ನು ಕಡೆಗಣಿಸಲಾಗಿದೆ. ಇದು ಯಾವುದೇ ಪಕ್ಷಕ್ಕೆ ಶೋಭೆ ತರುವಂತಹದಲ್ಲ. ಈಗಲೇ ಕಾಂಗ್ರೆಸ್ ಪಕ್ಷದ ಮುಖಂಡರು, ಅದರಲ್ಲಿಯೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಮತ್ತು ಸಹಕಾರಿ ಸಚಿವರು ಎಡಗೈ ಸಮುದಾಯದಕ್ಕೆ ಅಧಿಕಾರ ನೀಡದಿದ್ದರೆ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಪಾಲಿಕೆ ಚುನಾವಣೆಗಳಲ್ಲಿ ಮಾದಿಗ ಸಮುದಾಯ ತಕ್ಕ ಪಾಠ ಕಲಿಸಲಿದೆ ಎಂದರು.

ಮಾದಿಗ ದಂಡೋರ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಜಿ.ಸಾಗರ್ ಮಾತನಾಡಿ, ಹಲವು ದಶಕಗಳಿಂದಲೂ ಅಧಿಕಾರಕ್ಕಾಗಿ ಇನ್ನಿಲ್ಲದ ಹೋರಾಟ ನಡೆಸುತಿದ್ದರೂ ಕಾಂಗ್ರೆಸ್ ಪಕ್ಷ ನಮ್ಮನ್ನು ಕಡೆಗಣಿಸಿದೆ. ಒಳಮೀಸಲಾತಿ ಸೇರಿದಂತೆ ಯಾವ ಸಮಸ್ಯೆಗಳು ಬಗೆಹರಿದಿಲ್ಲ. ಸಮಸ್ಯೆಗಳನ್ನು ಇನ್ನೂ ಜೀವಂತವಾಗಿಡುವ ಪ್ರಕ್ರಿಯೆ ಕಾಂಗ್ರೆಸ್ ಪಕ್ಷದಿಂದ ನಡೆದಿದೆ.ಮುಂದಿನ ದಿನಗಳಲ್ಲಿ ಮಾದಿಗ ಸಮುದಾಯ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದೆ ಎಂದರು.

ಈ ಸುದ್ದಿಯನ್ನೂ ಓದಿ | Tumul Election: ತುಮುಲ್ ಅಧ್ಯಕ್ಷ ಸ್ಥಾನ ದಲಿತರಿಗೆ ಕೊಟ್ಟಿದ್ದಕ್ಕೆ ಕೋಪವೇಕೆ?: ಎಂಎಲ್‌ಸಿ ರಾಜೇಂದ್ರ ಆಕ್ರೋಶ

ವೇದಿಕೆಯಲ್ಲಿ ಮಾದಿಗ ಪರ ಸಂಘಟನೆಗಳ ಒಕ್ಕೂಟದ ಗೂಳರಿವೆ ನಾಗರಾಜು, ಸಣ್ಣಭೂತಣ್ಣ, ಸುರೇಶ್‌ಕುಮಾರ್, ರಂಗಯ್ಯ.ಎಲ್. ಕೆಸ್ತೂರು ನರಸಿಂಹಮುರ್ತಿ, ಯೋಗಾನಂದ್ ಮಾಗೋಡು, ಹೆಬ್ಬೂರು ಗಾಂಧಿರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?