ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

SSLC Exam: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಜಾಬ್‌ಗೆ ಅವಕಾಶ: ಗೃಹ ಸಚಿವರ ಪ್ರತಿಕ್ರಿಯೆ

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಜಾಬ್‌ಗೆ ಅವಕಾಶ ನೀಡುವ ವಿಚಾರವಾಗಿ ಸುದೀರ್ಘವಾಗಿ ಚರ್ಚೆ ಮಾಡುತ್ತೇವೆ. ಇನ್ನೂ ಒಂದು ತಿಂಗಳು ಸಮಯವಿದೆ ಎಂದು ಗೃಹ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಜಾಬ್‌ಗೆ ಅವಕಾಶ: ಗೃಹ ಸಚಿವರ ಪ್ರತಿಕ್ರಿಯೆ

ಜಿ ಪರಮೇಶ್ವರ್

ಹರೀಶ್‌ ಕೇರ ಹರೀಶ್‌ ಕೇರ Feb 5, 2025 7:33 AM

ಬೆಂಗಳೂರು : ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ (SSLC Exam) ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ (Hijab) ಬಳಕೆಗೆ ಅವಕಾಶದ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ (Home minister G Paramehwara) ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಜಾಬ್‌ಗೆ ಅವಕಾಶ ನೀಡುವ ವಿಚಾರವಾಗಿ ಸುದೀರ್ಘವಾಗಿ ಚರ್ಚೆ ಮಾಡುತ್ತೇವೆ. ಇನ್ನೂ ಒಂದು ತಿಂಗಳು ಸಮಯವಿದೆ. ನೋಡೋಣ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ದೌರ್ಜನ್ಯಕ್ಕೆ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ. ಇದರ ಮಧ್ಯ ನಿನ್ನೆ ರಾಜ್ಯಪಾಲರಿಗೆ ಮೈಕ್ರೋ ಫೈನಾನ್ಸ್ ದೌರ್ಜನ್ಯ ತಡೆ ಕುರಿತು ಕರಡು ಪ್ರತಿಯನ್ನು ಕಳುಹಿಸಲಾಗಿದ್ದು, ಇಂದು ರಾಜ್ಯಪಾಲರು ಕರಡು ಪ್ರತಿಯನ್ನು ಪರಿಶೀಲಿಸಿ ಅಂಕಿತ ಹಾಕುವ ಸಾಧ್ಯತೆ ಇದೆ. ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿ ವಿಚಾರವಾಗಿ ಈ ಹಿಂದೆ ಶಿಕ್ಷೆ ಮೂರು ವರ್ಷ ಇತ್ತು. ಈಗ 10 ವರ್ಷ ಮಾಡಿದ್ದೇವೆ. ದಂಡದ ಮೊತ್ತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಿಸಿದ್ದೇವೆ. ಬಿಲ್ ಅನ್ನು ರಾಜ್ಯಪಾಲರಿಗೆ ಕಳುಹಿಸಿದ್ದೇವೆ. ಇವತ್ತು ಪರಿಶೀಲಿಸಿ ರಾಜಪಾಲರು ಅಂಕಿತ ಹಾಕಬಹುದು. ಕಾನೂನಿನ ತೊಡಕುಗಳನ್ನು ಸರಿಪಡಿಸಿದ್ದೇವೆ. ಕಾನೂನಿನ ತೊಂದರೆ ಬರುವುದಿಲ್ಲ ಅಂತ ಅಂದುಕೊಂಡಿದ್ದೇವೆ ಎಂದು ತಿಳಿಸಿದರು.

ಗೋ ಹತ್ಯೆ ಮಾಡುವವರನ್ನು ಗುಂಡಿಕ್ಕಿ ಕೊಲ್ಲುತ್ತೇನೆ ಎಂದು ಶಾಸಕ ಮಂಕಾಳು ವೈದ್ಯ ಹೇಳಿಕೆ ಕುರಿತಾಗಿ, ಮಂಕಾಳು ವೈದ್ಯ ವೈಯಕ್ತಿಕವಾಗಿ ಹೇಳಿರುತ್ತಾರೆ. ಕ್ಯೂಆರ್ ಕೋಡ್ ಮೂಲಕ ಮತಾಂತರ ಮಾಡುತ್ತಿರುವ ವಿಚಾರವಾಗಿ ಆ ಬಗ್ಗೆ ನನಗೆ ಗೊತ್ತಿಲ್ಲ. ಏನಾದರೂ ದೂರು ಬಂದರೆ ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಮತಾಂತರ ನಿಷೇಧ ಕಾಯ್ದೆ ಹಿಂಪಡೆಯಲು ಕ್ರಮವಾಗುತ್ತಿದೆ ಅಷ್ಟೇ ಎಂದು ತಿಳಿಸಿದರು.

ಇದನ್ನೂ ಓದಿ: SSLC Exam: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಈ ವರ್ಷ 10% ಗ್ರೇಸ್ ಮಾರ್ಕ್ಸ್ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ