ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ವರ್ಷದ ಐಸಿಸಿ ಮಹಿಳಾ ಕ್ರಿಕೆಟ್ ಆಟಗಾರ್ತಿ ಪ್ರಶಸ್ತಿ ಗೆದ್ದ ಅಮೆಲಿ ಕೇರ್‌

ಅಮೆಲಿ ಕೇರ್‌ ಪ್ರಶಸ್ತಿ ರೇಸ್‌ನಲ್ಲಿ ದಕ್ಷಿಣ ಆಫ್ರಿಕಾದ ಲಾರಾ ವೊಲ್ವಾರ್ಡ್ಟ್, ಶ್ರೀಲಂಕಾದ ಚಾಮರಿ ಅಟಪಟ್ಟು ಮತ್ತು ಆಸ್ಟ್ರೇಲಿಯಾದ ಅನ್ನಾಬೆಲ್ ಸದರ್‌ಲ್ಯಾಂಡ್‌ ಅವರನ್ನು ಹಿಂದಿಕ್ಕಿದರು.

ವರ್ಷದ ಐಸಿಸಿ ಮಹಿಳಾ ಕ್ರಿಕೆಟ್ ಆಟಗಾರ್ತಿ ಪ್ರಶಸ್ತಿ ಗೆದ್ದ ಅಮೆಲಿ ಕೇರ್‌

Amelia Kerr

Profile Abhilash BC Jan 28, 2025 4:09 PM

ದುಬೈ: 24 ವರ್ಷದ, ನ್ಯೂಜಿಲ್ಯಾಂಡ್‌ನ ಅಮೆಲಿ ಕೇರ್‌(Amelia Kerr) 2024ರಲ್ಲಿ ತೋರಿದ ಅಸಾಧಾರಣ ಪ್ರದರ್ಶನಕ್ಕಾಗಿ ಐಸಿಸಿ ವರ್ಷದ ಮಹಿಳಾ ಕ್ರಿಕೆಟ್ ಆಟಗಾರ್ತಿ(ICC Women's Cricketer of the Year) ಪ್ರಶಸ್ತಿ ನೀಡಿ ಗೌರವಿಸಿದೆ. ಈ ಸಾಧನೆಗೈದ ಕಿವೀಸ್‌ನ ಮೊದಲ ಆಟಗಾರ್ತಿ ಎಂಬ ಹಿರಿಮೆಗೂ ಪಾತ್ರರಾಗಿದ್ದಾರೆ.

ಕೇರ್‌ ಅವರು ಇಂಗ್ಲೆಂಡ್‌ನ ನ್ಯಾಟ್ ಸಿವರ್-ಬ್ರಂಟ್, ಆಸ್ಟ್ರೇಲಿಯಾದ ಎಲ್ಲಿಸ್ ಪೆರ್ರಿ ಮತ್ತು ಭಾರತದ ಸ್ಮೃತಿ ಮಂಧಾನ ನಂತರ ಐಸಿಸಿ ವರ್ಷದ ಮಹಿಳಾ ಕ್ರಿಕೆಟಿಗ ಪ್ರಶಸ್ತಿ ಪಡೆದ ವಿಶ್ವದ ನಾಲ್ಕನೇ ಆಟಗಾರ್ತಿ ಎನಿಸಿಕೊಂಡರು. 2017 ರಲ್ಲಿ ಐಸಿಸಿ ಈ ಪ್ರಶಸ್ತಿಯನ್ನು ಪರಿಚಯಿಸಿತು.

ಅಮೆಲಿ ಕೇರ್‌ ಪ್ರಶಸ್ತಿ ರೇಸ್‌ನಲ್ಲಿ ದಕ್ಷಿಣ ಆಫ್ರಿಕಾದ ಲಾರಾ ವೊಲ್ವಾರ್ಡ್ಟ್, ಶ್ರೀಲಂಕಾದ ಚಾಮರಿ ಅಟಪಟ್ಟು ಮತ್ತು ಆಸ್ಟ್ರೇಲಿಯಾದ ಅನ್ನಾಬೆಲ್ ಸದರ್‌ಲ್ಯಾಂಡ್‌ ಅವರನ್ನು ಹಿಂದಿಕ್ಕಿದರು. 2024ರಲ್ಲಿ ಕೇರ್ ಒಂಬತ್ತು ಏಕದಿನ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 33ರ ಸರಾಸರಿಯಲ್ಲಿ 264 ರನ್ ಗಳಿಸಿದ್ದು, 14 ವಿಕೆಟ್ ಉರುಳಿಸಿದ್ದಾರೆ.



ಇದನ್ನೂ ಓದಿ ICC ವರ್ಷದ ಏಕದಿನ ತಂಡ ಪ್ರಕಟ; ಭಾರತೀಯರಿಗಿಲ್ಲ ಸ್ಥಾನ

ಕಳೆದ ವರ್ಷ ನಡೆದಿದ್ದ ಟಿ20 ವಿಶ್ವಕಪ್‌ನಲ್ಲಿಯೂ ಅಸಾಧಾರಣ ಪ್ರದರ್ಶನ ತೋರಿದ್ದರು. ಬ್ಯಾಟಿಂಗ್‌, ಬೌಲಿಂಗ್‌ ಹಾಗೂ ಫೀಲ್ಡಿಂಗ್‌ನಲ್ಲಿ ಮಿಂಚಿದ್ದರು. 2024ರಲ್ಲಿ 18 ಟಿ–20 ಪಂದ್ಯಗಳನ್ನು ಆಡಿರುವ ಅವರು 24.18ರ ಸರಾಸರಿಯಲ್ಲಿ 387 ರನ್ ಗಳಿಸಿದ್ದು, 29 ವಿಕೆಟ್ ಉರುಳಿಸಿದ್ದಾರೆ.

2024 ರ ವರ್ಷದ ಮಹಿಳಾ ಏಕದಿನ ಕ್ರಿಕೆಟರ್ ಪ್ರಶಸ್ತಿಯನ್ನು ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್‌ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ(Smriti Mandhana) ಗೆದ್ದಿದ್ದಾರೆ. ಎರಡನೇ ಬಾರಿಗೆ ಮಂಧಾನಗೆ ಇದು ಎರಡನೇ ಬಾರಿಗೆ ಒಲಿದ ಪ್ರಶಸ್ತಿಯಾಗಿದೆ. ಸ್ಮೃತಿ ಮಂಧಾನ ಅವರು 2024 ರಲ್ಲಿ 13 ಪಂದ್ಯಗಳಲ್ಲಿ 57.46 ಸರಾಸರಿಯಲ್ಲಿ ನಾಲ್ಕು ಶತಕಗಳು ಸೇರಿದಂತೆ 794 ರನ್ ಗಳಿಸಿದರು. ಕಳೆದ ವರ್ಷ 50 ಓವರ್‌ಗಳ ಮಾದರಿಯಲ್ಲಿ ಅವರು ಪ್ರಮುಖ ರನ್ ಗಳಿಸಿದ ಆಟಗಾರ್ತಿಯಾಗಿದ್ದರು.

ಮಹಿಳಾ ಏಕದಿನ ಕ್ರಿಕೆಟ್‌ನ ಕ್ಯಾಲೆಂಡರ್ ವರ್ಷದಲ್ಲಿ ನಾಲ್ಕು ಶತಕಗಳನ್ನು ಬಾರಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ದಾಖಲೆಯೂ ಮಂಧಾಮ ಹೆಸರಿನಲ್ಲಿದೆ.