Chandrababu Naidu: ಹೊಸ ರೂಲ್! 2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಮಾತ್ರ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ
Chandrababu Naidu:ಕೆಲವು ದಿನಗಳ ಹಿಂದೆ ಮಧ್ಯಪ್ರದೇಶದ ನಿಗಮವೊಂದು ನಾಲ್ಕು ಮಕ್ಕಳನ್ನು ಹೆತ್ತರೇ 1 ಲಕ್ಷ ನಗದು ಬಹುಮಾನ ಘೋಷಿಸಿತ್ತು. ಈ ಬೆನ್ನಲ್ಲೇ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿಲ್ಲದವರು ಸರಪಂಚ್ ಆಗಲು ಸಾಧ್ಯವಿಲ್ಲ. ಪುರಸಭೆ ಕೌನ್ಸಿಲರ್, ಪಾಲಿಕೆ ಮೇಯರ್ ಆಗಲು ಸಾಧ್ಯವಿಲ್ಲ ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಅಮರಾವತಿ, ಜನವರಿ 17,2025: ಆಂಧ್ರಪ್ರದೇಶದ ಜನಸಂಖ್ಯೆ ನಿರಂತರ ಕುಸಿತ ಕಾಣುತ್ತಿರುವ ಹಿನ್ನೆಲೆಯಲ್ಲಿ ಎರಡಕ್ಕಿಂತ ಕಡಿಮೆ ಮಕ್ಕಳಿದ್ದರೆ ಮಾತ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಫರ್ಧಿಸಲು ಅವಕಾಶ ನಿರ್ಬಂಧಿಸುವ ಬಗ್ಗೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು(Chandrababu Naidu)ಸುಳಿವು ನೀಡಿದ್ದಾರೆ. ಇನ್ನುಮುಂದೆ 2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಮಾತ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಫರ್ಧಿಸಲು ಅವಕಾಶ ನೀಡುವುದಾಗಿ ಸಿಎಂ ನಾಯ್ಡು ಘೋಷಿಸಿದ್ದಾರೆ.
ಕೆಲವು ದಿನಗಳ ಹಿಂದೆ ಮಧ್ಯಪ್ರದೇಶದ ನಿಗಮವೊಂದು ನಾಲ್ಕು ಮಕ್ಕಳನ್ನು ಹೆತ್ತರೇ 1 ಲಕ್ಷ ನಗದು ಬಹುಮಾನ ಘೋಷಿಸಿತ್ತು. ಈ ಬೆನ್ನಲ್ಲೇ ಚಂದ್ರಬಾಬು ನಾಯ್ಡು ಈ ಹೇಳಿಕೆ ನೀಡಿದ್ದಾರೆ. ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿಲ್ಲದವರು ಸರಪಂಚ್ ಆಗಲು ಸಾಧ್ಯವಿಲ್ಲ. ಪುರಸಭೆ ಕೌನ್ಸಿಲರ್, ಪಾಲಿಕೆ ಮೇಯರ್ ಆಗಲು ಸಾಧ್ಯವಿಲ್ಲ ಎಂದು ನಾಯ್ಡು ಹೇಳಿದ್ದಾರೆ. ಹಳೆ ತಲೆಮಾರಿನವರು ಹೆಚ್ಚೆಚ್ಚು ಮಕ್ಕಳನ್ನು ಹೊಂದಿರುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ನೀವು ಒಂದು ಮಗುವನ್ನು ಮಾತ್ರ ಪಡೆಯುತ್ತಿದ್ದೀರಿ. ನಿಮ್ಮ ಪೋಷಕರು ನಿಮ್ಮಂತೆಯೇ ಯೋಚಿಸಿದ್ದರೆ ಈ ಜಗತ್ತಿಗೆ ನೀವು ಬರುತ್ತಿರಲಿಲ್ಲ. ಹೀಗೆ ಮಾಡದೇ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೆರುವ ಬಗ್ಗೆ ಗಮನ ಕೊಡಿ ಎಂದು ಸಲಹೆ ನೀಡಿದ್ದಾರೆ. ರಾಜ್ಯದಲ್ಲಿ ನವದಂಪತಿಗಳು ಹೆಚ್ಚು ಮಕ್ಕಳನ್ನು ಹೊಂದುವಂತೆ ಮಾಡಲು ಹೊಸ ಪ್ರೋತ್ಸಾಹಕ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
Spent Sankranti with my loved ones - family, friends, and relatives - in my native village, #Naravaripalle. Created some amazing memories! pic.twitter.com/OPwnXggLiT
— N Chandrababu Naidu (@ncbn) January 14, 2025
ಕುಟುಂಬಸ್ಥರ ಜತೆ ಸಂಕ್ರಾಂತಿ ಆಚರಿಸಿ ಮಾತನಾಡಿದ ನಾಯ್ಡು,‘ಕಡಿಮೆ ಮಕ್ಕಳಿರುವವರಿಗೆ ಚುನಾವಣೆಗಳಲ್ಲಿ ಸ್ಪರ್ಧಿಸಲು ಅನುಮತಿಸಲಾಗುವುದಿಲ್ಲ. 2ಕ್ಕಿಂದ ಹೆಚ್ಚು ಮಕ್ಕಳಿರುವವರು ಮಾತ್ರ ಸರಪಂಚ್, ಪುರಸಭೆ ಸದಸ್ಯ ಅಥವಾ ಮೇಯರ್ ಆಗಬಹುದು. ಜೊತೆಗೆ, ಅಂಥವರಿಗೆ, ಪ್ರಸ್ತುತ ಪ್ರತಿ ಕುಟುಂಬಕ್ಕೆ ನೀಡಲಾಗುತ್ತಿರುವ 25 ಕೇಜಿ ಸಬ್ಸಿಡಿ ಅಕ್ಕಿಯ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿಯೂ ಕೆಲಸ ಮಾಡುತ್ತಿದ್ದೇವೆ. ಜಪಾನ್, ಕೊರಿಯಾ ಸೇರಿದಂತೆ ಅನೇಕ ಐರೋಪ್ಯ ದೇಶಗಳು ಕುಟುಂಬ ಯೋಜನೆ ನೀತಿಯನ್ನು ಅನುಸರಿಸಿದ ಕಾರಣ ಈಗ ಅಲ್ಲಿ ವಯಸ್ಸಾದವರ ಜನಸಂಖ್ಯೆಯೇ ಹೆಚ್ಚಾಗಿದೆ. ಇದು ಭಾರತಕ್ಕೂ ಎಚ್ಚರಿಕೆಯ ಕರೆಗಂಟೆಯಾಗಿದೆ. ಈಗಲೇ ಸರಿಯಾದ ನೀತಿಗಳನ್ನು ತಂದರೆ ಬಚಾವಾಗಬಹುದುʼ ಎಂದಿದ್ದಾರೆ.